ಪ್ರಯಾಣಿಕರ ಬೇಡಿಕೆ ಹಿನ್ನೆಲೆ, ಯಶವಂತಪುರ-ಮುರುಡೇಶ್ವರ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ (06563/06564) ಸೇವೆಯ ಅವಧಿಯನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.
ಈ ರೈಲುಗಳ ವೇಳಾಪಟ್ಟಿ, ನಿಲ್ದಾಣ, ದರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಇಲಾಖೆ ಹೇಳಿದೆ.
ಯಶವಂತಪುರ-ಮುರುಡೇಶ್ವರ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಈ ಮೊದಲು ಜುಲೈ 29 ರವರೆಗೆ ಚಲಿಸಲಿದೆ ಎಂದು ಸೂಚಿಸಲಾಗಿತ್ತು. ಇದೀಗ ಪ್ರತಿ ಶನಿವಾರ ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲು (ರೈಲು ಸಂಖ್ಯೆ 06563) ಯಶವಂತಪುರ-ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆ.5 ರಿಂದ ಆ.26 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
ಪ್ರತಿ ಭಾನುವಾರ ಮುರುಡೇಶ್ವರದಿಂದ ಪ್ರಾರಂಭವಾಗುವ ರೈಲು (ರೈಲು ಸಂಖ್ಯೆ 06564) ಮುರುಡೇಶ್ವರ-ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆ.6 ರಿಂದ ಆ.27 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜುಲೈ 30 ರವರೆಗೆ ಚಲಿಸಲಿದೆ ಎಂದು ಸೂಚಿಸಲಾಗಿತ್ತು ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ನಾವೂ ಮನುಷ್ಯರೇ, ನಮ್ಮ ಮೇಲೂ ಸ್ವಲ್ಪ ಕರುಣೆ ತೋರಿ: ಪೌರ ಕಾರ್ಮಿಕರು
ಶನಿವಾರ ರಾತ್ರಿ ಯಶವಂತಪುರ ರೈಲು ನಿಲ್ದಾಣದಿಂದ ಹೊರಟು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ ಮಾರ್ಗವಾಗಿ ಮುರುಡೇಶ್ವರ ತಲುಪುತ್ತದೆ.