ಬೆಂಗಳೂರು | ಕಳ್ಳತನಕ್ಕೆ ಸಂಚು ರೂಪಿಸಿದ್ದ ನೋಕಿಯಾ ಮಾಜಿ ಎಂಜಿನಿಯರ್ ಬಂಧನ

Date:

Advertisements
  • 2019ರಲ್ಲಿ ಮಾಮನಿಯನ್ನು ಕೆಲಸದಿಂದ ವಜಾ ಮಾಡಿದ್ದ ಕಂಪನಿ
  • ಬೆಳಗ್ಗೆ ಕಳ್ಳತನ ಮಾಡಲು ಮನೆ ಹುಡುಕಿ ರಾತ್ರಿಯ ವೇಳೆ ಕಳ್ಳತನ

ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿದ್ದ ನೋಕಿಯಾ ಮಾಜಿ ಇಂಜಿನಿಯರ್ ಎರಡು ಮನೆಗಳ್ಳತನಕ್ಕೆ ಸಂಚು ರೂಪಿಸಿದ್ದಕ್ಕಾಗಿ ಬಂಧಿಸಲಾಗಿದೆ.

ತಮಿಳುನಾಡು ಮೂಲದ ಮಾಮನಿ ಅಲಿಯಾಸ್ ದೀನ (38) ಎಂಬಾತನನ್ನು ಬಂಧಿಸಿದ ಪೊಲೀಸರು ಆತನಿಂದ 29 ಲಕ್ಷ ಮೌಲ್ಯದ 512 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ನಗರದಾದ್ಯಂತ ವರದಿಯಾದ ಕಳ್ಳತನಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2021ರಲ್ಲಿ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಎರಡು ವರ್ಷ ಜೈಲಿನಲ್ಲಿದ್ದರು. ಬೆಳಗ್ಗೆ ಕಳ್ಳತನ ಮಾಡಲು ಮನೆಗಳನ್ನು ಹುಡುಕಾಡುತ್ತಿದ್ದರು ಮತ್ತು ರಾತ್ರಿಯ ವೇಳೆ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವೀಧರರಾದ ಮಾಮನಿ ಅವರು ನೋಕಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 2019ರಲ್ಲಿ ಕಂಪನಿ ಅವರನ್ನು ಕೆಲಸದಿಂದ ವಜಾಗೊಳಿಸಿತು. ಕೆಲಸ ಕಳೆದುಕೊಂಡ ನಂತರ ಮಾಮನಿ ಕಳ್ಳತನ, ಡಕಾಯಿತಿ ಮತ್ತು ದರೋಡೆಗಳನ್ನು ಮಾಡಲು ಪ್ರಾರಂಭಿಸಿದ್ದರು. ತಮಿಳುನಾಡು ಮತ್ತು ಆಂಧ್ರಪ್ರದೇಶದ ಸಹಚರರೊಂದಿಗೆ ಸೇರಿ ಅಲ್ಲಿಯೂ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಫೇಸ್‌ಬುಕ್‌ ಲೈವ್‌ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ದೂರು ದಾಖಲು

ಮತ್ತೊಂದು ಪ್ರಕರಣದಲ್ಲಿ ಗೋವಿಂದರಾಜನಗರ ಪೊಲೀಸರು ಚೈನ್ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅವರಿಂದ 5.5 ಲಕ್ಷ ಮೌಲ್ಯದ ಚಿನ್ನ ಮತ್ತು ಹೋಂಡಾ ಆಕ್ಟಿವಾವನ್ನು ವಶಪಡಿಸಿಕೊಂಡಿದ್ದಾರೆ.

ಇವರಿಬ್ಬರು ಚಾಮರಾಜಪೇಟೆ, ಸುಬ್ರಹ್ಮಣ್ಯಪುರ ಮತ್ತು ವಿವಿ ಪುರಂನಲ್ಲಿ ಚೈನ್ ಸ್ನ್ಯಾಚಿಂಗ್‌ಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X