ಮುಂದಿನ ಪೀಳಿಗೆಗಾಗಿ ಭವಿಷ್ಯದ ಬೆಂಗಳೂರು ನಿರ್ಮಾಣ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

Date:

Advertisements
  • ಬೆಂಗಳೂರಿಗೆ ಹೊಸ ರೂಪ ನೀಡಲು 70 ಸಾವಿರಕ್ಕೂ ಹೆಚ್ಚು ಸಲಹೆ
  • ಬೆಂಗಳೂರಿಗೆ ಹೊಸ ರೂಪ ನೀಡುವುದು ಸವಾಲಿನ ಕೆಲಸ: ಡಿಕೆಶಿ

“ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರು ಮಹಾನಗರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಮುಂದಿನ ಪೀಳಿಗೆಯ ದೃಷ್ಟಿಕೋನ ಇಟ್ಟುಕೊಂಡು ನಗರ ನಿರ್ಮಾಣ ಮಾಡಬೇಕು. ಅದರಂತೆಯೇ ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಭಾರತ ಸ್ಕೌಟ್ಸ್ ಭವನದಲ್ಲಿ ಮಂಗಳವಾರ ನಡೆದ ಬ್ರ್ಯಾಂಡ್ ಬೆಂಗಳೂರು ಕುರಿತ ಚರ್ಚಾ ಸ್ಪರ್ಧೆಯಲ್ಲಿ 17 ಶಾಲೆಗಳ 300ಕ್ಕೂ‌ ಹೆಚ್ಚು‌ ಶಾಲಾ ಮಕ್ಕಳು ‌ಭಾಗವಹಿಸಿದ್ದರು. ಈ ಚರ್ಚಾ ಸ್ಪರ್ಧೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಅವರು, “ಬೆಂಗಳೂರು ತನ್ನದೇ ಆದ ಇತಿಹಾಸ, ಪರಂಪರೆ ಹೊಂದಿದೆ. ಚರ್ಚಾ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಹಸಿರು ಬೆಂಗಳೂರಿನ ಕುರಿತು ಮಾತನಾಡಿದ್ದನ್ನು ಗಮನಿಸಿದೆ. ನಾನು ಸಚಿವನಾದ ನಂತರ ಪರಿಸರ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಆಗ ಪಾಲಿಕೆಯು ಶಾಲಾ ಆಡಳಿತದ ಜತೆ ಒಡಂಬಡಿಕೆ ಮಾಡಿಕೊಂಡು ನಗರದಲ್ಲಿ ಶಾಲಾ ಮಕ್ಕಳಿಂದ ಗಿಡ ನೆಡಿಸಿ ಅವುಗಳನ್ನು ಬೆಳೆಸುವ ಜವಾಬ್ದಾರಿ ಅವರಿಗೆ ನೀಡಬೇಕು. ಆ ಗಿಡ ಬೆಳೆಸುವ ಮಗುವಿಗೆ ಆ ಮರದ ಬಳಿ ಹೆಸರು ಹಾಕಿಕೊಳ್ಳುವ ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಇಲ್ಲಿನ ಸಂಸ್ಕೃತಿ ಹಾಗೂ ವಾತಾವರಣ ನಮಗೆ ಹೊಂದಿಕೊಳ್ಳುವಂತಿದ್ದು, ನಾವು ಹಸಿರು ಬೆಂಗಳೂರನ್ನು ಕಾಪಾಡಿಕೊಳ್ಳಬೇಕು” ಎಂದು ತಿಳಿಸಿದರು.  

Advertisements

“ಬೆಂಗಳೂರಿಗೆ ಹೊಸ ರೂಪ ನೀಡಲು 70 ಸಾವಿರಕ್ಕೂ ಹೆಚ್ಚಿನ ಸಲಹೆಗಳು ಬಂದಿವೆ. ಇವುಗಳ ಜತೆ ಯುವ ಪ್ರತಿಭೆಗಳ ಆಲೋಚನೆಗಳನ್ನು ಪಡೆಯಬೇಕಿದೆ. ಅವರು ಯಾವುದೇ ವೈಯಕ್ತಿಕ ಆಸಕ್ತಿ ಇಲ್ಲದೆ ಸಲಹೆ ನೀಡುತ್ತಾರೆ. ನಾಯಕರನ್ನು ಸೃಷ್ಟಿಸುವವನು ನಿಜವಾದ ನಾಯಕನೇ ಹೊರತು, ಹಿಂಬಾಲಕರನ್ನು ಸೃಷ್ಟಿಸುವವನಲ್ಲ ಎಂಬ ಮಾತಿದೆ. ನೀವುಗಳು ಕೂಡ ನೀವು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರಗಳಲ್ಲಿ ನಾಯಕರಾಗಿ ಬೆಳೆಯಬೇಕು ಎಂದು ಬಯಸುತ್ತೇನೆ. ನೀವು ಸದೃಢವಾಗಿ ಬೆಳೆದು, ಸಮಾಜಕ್ಕೆ ಕೊಡುಗೆ ನೀಡಬೇಕು. ಸಮಾಜಕ್ಕೆ ನೀವು ಏನು ಮಾಡುತ್ತೀರಿ ಎಂಬುದು ಮುಖ್ಯ” ಎಂದರು.

“ಬೆಂಗಳೂರು ಪೂರ್ವ ನಿಯೋಜಿತ ನಗರವಲ್ಲ. ಇದಕ್ಕೆ ಹೊಸ ರೂಪ ನೀಡುವುದು ಸವಾಲಿನ ಕೆಲಸ. ಇದಕ್ಕಾಗಿ ಸೋಮವಾರ ಬೆಂಗಳೂರು ವಿನ್ಯಾಸಕ್ಕೆ ಅಂತಾರಾಷ್ಟ್ರೀಯ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ. ನಗರದ ವಾತಾವರಣ ಹಾಗೂ ಸಂಸ್ಕೃತಿಗೆ ಮನಸೋತು ಹೆಚ್ಚಿನ ಸಮಯದಲ್ಲಿ ಬೆಂಗಳೂರಿಗೆ ಬಂದು ಮರಳಿ ತಮ್ಮ ಊರಿಗೆ ಹೋಗುವುದಿಲ್ಲ. ಬೆಂಗಳೂರು ಜ್ಞಾನ, ಶಿಕ್ಷಣ, ಮೆಡಿಕಲ್, ಐಟಿ ರಾಜಧಾನಿ ಆಗಿದೆ. ಇಲ್ಲಿ ಓದಿ ಬೆಳೆದವರು ವಿಶ್ವದ ಪ್ರಮುಖ ಕಂಪನಿಗಳನ್ನು ಮುನ್ನಡೆಸುತ್ತಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ಪ್ರಧಾನಿ ಮೋದಿ ಕ್ಷಮೆಯಾಚಿಸಿ ರಾಜೀನಾಮೆ ನೀಡಬೇಕು: ಆಪ್ ಪ್ರತಿಭಟನೆ

“ಇಲ್ಲಿ ಓದಿದ ಪ್ರತಿಭಾವಂತರು ಹೊರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಕೆಲವರು ಮಾತ್ರ ಇಲ್ಲೇ ಉಳಿಯುತ್ತಿದ್ದಾರೆ. ಕೆಲವೊಮ್ಮೆ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳಿಗಿಂತ ಮಕ್ಕಳು ಅತ್ಯುತ್ತಮ ಸಲಹೆಗಳನ್ನು ನೀಡುತ್ತಾರೆ. ಹೀಗಾಗಿ ನಾನು ನಿಮ್ಮ ಸಲಹೆ ಪಡೆಯುತ್ತಿದ್ದೇನೆ” ಎಂದರು.

ಈ ವೇಳೆ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಮಾಜಿ ಎಂಎಲ್‌ಸಿ ಮೋಹನ್ ಕೊಂಡಜ್ಜಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X