ಹನುಮ ಜಯಂತಿ | ಪ್ರಸಾದ ತಿಂದು 200 ಹೆಚ್ಚು ಮಂದಿ ಅಸ್ವಸ್ಥ; ಓರ್ವ ಮಹಿಳೆ ಸಾವು

Date:

Advertisements

ಹನುಮ ಜಯಂತಿ ಪೂಜೆಗಾಗಿ ದೇವಾಲಯಗಳಲ್ಲಿ ತಯಾರಿಸಿದ್ದ ಪ್ರಸಾದ ತಿಂದು ಸುಮಾರು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಬೆಂಗಳೂರು ಬಳಿಯ ಹೊಸಕೋಟೆಯ ವಿವಿಧ ದೇವಾಲಯಗಳಲ್ಲಿ ಭಾನುವಾರ ಹನುಮ ಜಯಂತಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ಪ್ರಸಾದ ವಿತರಣೆಯನ್ನೂ ಮಾಡಲಾಗಿತ್ತು. ಪ್ರಸಾದ ತಿಂದವರಲ್ಲಿ ಸುಮಾರು 200 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಅವರಲ್ಲಿ, ಓರ್ವ ಮಹಿಳೆ ಚಿಕಿತ್ಸೆ ಫಲಿಸದೆ ಸೋಮವಾರ ಸಾವನ್ನಪ್ಪಿದ್ದಾರೆ.

ಭಾನುವಾರ ಸಂಜೆಯೇ ಹಲವರಿಗೆ ವಾಂತಿಯಾಗಿದ್ದು, ಬೆಂಗಳೂರು, ಕೋಲಾರ, ಹೊಸಕೋಟೆಯ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರು. ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಿದ್ದಗಂಗಮ್ಮ (60) ಎಂಬವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Advertisements

ಆಸ್ಪತ್ರೆಗೆ ದಾಖಲಾಗಿರುವವರಲ್ಲಿ ಇನ್ನೂ ಎಂಟು ಮಂದಿ ಪರಿಸ್ಥಿತಿ ಗಂಭೀರವಾಗಿದೆ. ಹಲವರ ಆರೋಗ್ಯ ಸುಧಾರಿಸಿದೆ ಎಂದು ತಿಳಿದುಬಂದಿದೆ.

ಪ್ರಸಾದ ತಯಾರಿಕೆ ಮತ್ತು ವಿತರಣೆ ವೇಳೆ ಸ್ವಚ್ಛತೆ ಕಾಪಾಡದೇ ಇರುವುದರಿಂದ ಫುಡ್‌ ಪಾಯಿಸನ್ ಆಗಿ, ಜನರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X