ಹೊಸಕೋಟೆ | ಸಬ್ಸಿಡಿ ಲೋನ್ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ, ಮಹಿಳೆ ವಿರುದ್ಧ ದೂರು

Date:

ಸಬ್ಸಿಡಿ ಲೋನ್ ಮಾಡಿಸಿಕೊಡುತ್ತೇವೆ ಎಂದು ಆಮಿಷ ತೋರಿಸಿ ಗ್ರಾಹಕರ ಆಧಾರ್, ಫೋಟೋ ಮತ್ತು ಸಹಿ ಬಳಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಹೊಸಕೋಟೆ ಸೇರಿದಂತೆ ವಿವಿಧ ಪ್ರದೇಶಗಳ ಗ್ರಾಹಕರನ್ನು ಮೋಸಗೊಳಿಸಿದ್ದು, ಆರೋಪಿ ಶ್ವೇತಾ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಸಂಘದ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ ಶ್ವೇತಾ, ಮೊದಲು ಗ್ರಾಹಕರಿಗೆ ಬ್ಯಾಂಕ್ ಖಾತೆ ತೆರೆಯಿಸಿ ಪ್ರತಿ ಗ್ರಾಹಕರಿಗೆ 20 ಸಾವಿರ ರೂಪಾಯಿ ಲೋನ್ ಮಂಜೂರು ಮಾಡಿಸುತ್ತಿದ್ದರು. “ಈ 20 ಸಾವಿರವನ್ನು ನಾಲ್ಕು ಕಂತುಗಳಲ್ಲಿ ತೀರಿಸಿದರೆ 1 ಲಕ್ಷ ರೂಪಾಯಿ ಸಬ್ಸಿಡಿ ಲೋನ್ ಮಾಡಿಸಿಕೊಡುತ್ತೇವೆ” ಎಂದು ಆಮಿಷ ತೋರಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ನಂತರ 1 ಲಕ್ಷ ಲೋನ್‌ಗಾಗಿ ಮತ್ತೆ ಫೋಟೋ ಹಾಗೂ ಆಧಾರ್ ಕಾರ್ಡ್ ಪಡೆದುಕೊಂಡು, ಗ್ರಾಹಕರಿಗೆ ತಿಳಿಸದೆಯೇ ಅವರ ಹೆಸರಿನಲ್ಲಿ ಬ್ಯಾಂಕ್‌ಗಳಲ್ಲಿ ಲೋನ್ ಅರ್ಜಿ ಸಲ್ಲಿಸಿ, ಗ್ರಾಹಕರ ಆಧಾರ್ ಮತ್ತು ಫೋಟೋಗಳನ್ನು ದುರ್ಬಳಕೆ ಮಾಡಿ ಪ್ರತಿ ಗ್ರಾಹಕರ ಹೆಸರಿನಲ್ಲಿಯೇ ಲಕ್ಷಾಂತರ ರೂಪಾಯಿ ಲೋನ್ ಪಡೆಯಲಾಗಿತ್ತು.

ಈ ವಂಚನೆ ಬೆಳಕಿಗೆ ಬಂದಿದ್ದು ಒಬ್ಬ ಗ್ರಾಹಕರಿಗೆ. ಅವರು ಮಕ್ಕಳ ಶಿಕ್ಷಣ ಲೋನ್‌ಗಾಗಿ ಬ್ಯಾಂಕ್‌ಗೆ ಹೋದಾಗ, “ನಿಮ್ಮ ಹೆಸರಿನಲ್ಲಿ ಈಗಾಗಲೇ ಲೋನ್ ಇದೆ. ಹಾಗಾಗಿ ಹೊಸ ಲೋನ್ ಕೊಡಲು ಸಾಧ್ಯವಿಲ್ಲ” ಎಂದು ಬ್ಯಾಂಕ್ ಸಿಬ್ಬಂದಿ ತಿಳಿಸಿದರು. ಆಶ್ಚರ್ಯಚಕಿತರಾದ ಗ್ರಾಹಕರು ದಾಖಲೆಗಳನ್ನು ಪರಿಶೀಲಿಸಿದಾಗ ವಂಚನೆ ನಡೆದಿರುವುದು ಅರಿವಿಗೆ ಬಂದಿದೆ.

ವಂಚನೆ ಬಹಿರಂಗವಾದ ನಂತರ ಮೋಸ ಹೋದ ಗ್ರಾಹಕರು ಆರೋಪಿ ಶ್ವೇತಾ ವಿರುದ್ಧ ಪ್ರತಿಭಟನೆ ನಡೆಸಿದರು. ಗ್ರಾಹಕರು ಕರೆ ಮಾಡಿ ವಿಚಾರಿಸಿದಾಗ ಆರೋಪಿ ಧಮಕಿ ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎಚ್ಚರಿಕೆ: ಯಾರಾದರೂ ಸಬ್ಸಿಡಿ ಲೋನ್ ಮಾಡಿಸಿಕೊಡುತ್ತೇವೆ ಎಂದು ಹೇಳಿ ಆಧಾರ್, ಫೋಟೋ ಅಥವಾ ಸಹಿ ಕೇಳಿದರೆ ಎಚ್ಚರಿಕೆಯಿಂದಿರಿ. ಅನುಮಾನ ಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ಟಿವಿ ವಾಹಿನಿಗಳ ವಿಶ್ವಾಸಾರ್ಹತೆ ಕೊರತೆಗೆ ಕನ್ನಡಿ ಎಂದ ‘ಎಡಿಟರ್ಸ್ ಗಿಲ್ಡ್’

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ (CJP) ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ಬಹುತೇಕ ಮುಖ್ಯವಾಹಿನಿಯ...

ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ...

ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ್ದ 8 ವಿದ್ಯಾರ್ಥಿಗಳಿಗೆ ಐಐಐಟಿ ಹೈದರಾಬಾದ್ ನೋಟಿಸ್

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ...