ನೈಸ್ ರಸ್ತೆ: 300 ಎಕರೆಗೂ ಹೆಚ್ಚು ಭೂ ಸ್ವಾಧೀನ ರದ್ದುಗೊಳಿಸಿದ ಹೈಕೋರ್ಟ್

Date:

ಬೆಂಗಳೂರು-ಮೈಸೂರು ನಡುವಿನ 111 ಕಿ.ಮೀ ಉದ್ದದಲ್ಲಿ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ರ್ಪ್ರೈಸಸ್ ಲಿಮಿಟೆಡ್ (ನೈಸ್ ರಸ್ರೆ) ವತಿಯಿಂದ ನಿರ್ಮಿಸಲಾಗಿರುವ ಹೆದ್ದಾರಿ ಮೆಗಾ ಯೋಜನೆಗೆ ಕೆಐಎಡಿಬಿ ವಶಪಡಿಸಿಕೊಂಡಿದ್ದ 300 ಎಕರೆಗೂ ಹೆಚ್ಚು ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

- Advertisement -

ಅಧಿಸೂಚನೆ ಪ್ರಶ್ನಿಸಿ ಪಿ.ಶ್ರೀಧರಮೂರ್ತಿ ಸೇರಿದಂತೆ 50ಕ್ಕೂ ಹೆಚ್ಚು ಜನರು ಸಲ್ಲಿಸಿದ್ದ ಪ್ರತ್ಯೇಕ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

‘ಜಮೀನು ವಶಪಡಿಸಿಕೊಂಡು 23 ವರ್ಷಗಳಿಗೂ ಹೆಚ್ಚು ಕಾಲವಾಗಿದ್ದರೂ ಅರ್ಜಿದಾರರಿಗೆ ಪರಿಹಾರ ವಿತರಣೆ ಮಾಡಿಲ್ಲ’ ಎಂಬ ಆಕ್ಷೇಪವನ್ನು ಪರಿಗಣಿಸಿದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

‘ಕೆಐಎಡಿಬಿ ವಶಪಡಿಸಿಕೊಂಡಿರುವ ಅರ್ಜಿದಾರ ಭೂ ಮಾಲೀಕರ ಜಮೀನುಗಳು ಉದ್ದೇಶಿತ ಬಳಕೆಗೆ ಒಳಪಟ್ಟಿಲ್ಲ. ರೈತರು ತಮ್ಮ ಜೀವನೋಪಾಯಕ್ಕೆ ಅವಲಂಬಿಸಿರುವ ಕೃಷಿ ಭೂಮಿ ಕಳೆದುಕೊಂಡರೆ ಮತ್ತು ಇದರ ಉಪಯೋಗದಿಂದ ವಂಚಿತರಾದರೆ ಸಂಕಷ್ಟಕ್ಕೆ ಗುರಿಯಾಗುವುದನ್ನು ನಿರ್ಲಕ್ಷಿಸಲು ಆಗದು’ ಎಂದು ನ್ಯಾಯಪೀಠ ಹೇಳಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಈ ಹಿನ್ನೆಲೆಯಲ್ಲಿ ಇದೇ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ಮತ್ತು ಸುಪ್ರೀಂ ಕೋರ್ಟ್‌ ಪೂರ್ವ ನಿದರ್ಶನ ತೀರ್ಪುಗಳ ಆಧಾರದಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ರದ್ದುಪಡಿ ಸಿರುವುದಾಗಿ ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.

ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರಾಜೆಕ್ಟ್ (ಬಿಎಂಐಸಿಪಿ), ಎಕ್ಸ್‌ಪ್ರೆಸ್‌ ವೇ, ಟೋಲ್ ಪ್ಲಾಜಾ ಅಥವಾ ಪೆರಿಫೆರಲ್ ರಸ್ತೆ ಬಳಕೆಯ ಉದ್ದೇಶದಿಂದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಭೂ ಸ್ವಾಧೀನ ಅಧಿಕಾರಿ 1998ರಿಂದ 2009ರ ನಡುವೆ ಅರ್ಜಿದಾರ ಭೂ ಮಾಲೀಕರಿಂದ 300 ಎಕರೆಗೂ ಹೆಚ್ಚು ಜಮೀನು ವಶಪಡಿಸಿಕೊಳ್ಳಲು ವಿವಿಧ ದಿನಾಂಕಗಳಲ್ಲಿ ಪ್ರಾಥಮಿಕ ಮತ್ತು ಅಂತಿಮ ಅಧಿಸೂಚನೆ ಹೊರಡಿಸಿದ್ದರು.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಚ್.ಎನ್‌.ಶಶಿಧರ ಅವರ ನೇತೃತ್ವದಲ್ಲಿ ವಕೀಲರ ತಂಡ ವಾದ ಮಂಡಿಸಿತ್ತು. ಹೈಕೋರ್ಟ್ ವಕೀಲ ಎಚ್.ಎಸ್.ಸುಹಾಸ್ ಮತ್ತು ಇತರರು ವಕಾಲತ್ತು ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...