ಎಸ್ಸಿ‌ಎಸ್ಪಿ ಮತ್ತು ಟಿ‌ಎಸ್ಪಿ ಕಲ್ಯಾಣ ಕಾರ್ಯಕ್ರಮ ತಕ್ಷಣವೇ ಜಾರಿಗೊಳಿಸಿ: ಆಡಳಿತಾಧಿಕಾರಿ ಸೂಚನೆ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯವ್ಯಯದಲ್ಲಿ ಎಸ್ಸಿ‌ಎಸ್ಪಿ ಮತ್ತು ಟಿ‌ಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಕೊಳಗೇರಿ ಪ್ರದೇಶದಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳು ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಕೂಡಲೇ ರೂಪಿಸಬೇಕು ಎಂದು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವತಿಯಿಂದ ಎಸ್ಸಿ‌ಎಸ್ಪಿ ಮತ್ತು ಟಿ‌ಎಸ್ಪಿ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ಎಸ್ಸಿ‌ಎಸ್ಪಿ ಮತ್ತು ಟಿ‌ಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಕೊಳಗೇರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು” ಎಂದರು.

ನೀರು ನಿಲ್ಲುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ

Advertisements

ಪಾಲಿಕೆ ಎಲ್ಲ ವಲಯದ ಮುಖ್ಯ ಅಭಿಯಂತರರು ತಕ್ಷಣವೇ ಬೃಹತ್ ನೀರುಗಾಲುವೆ ವಿಭಾಗದ ಅಧಿಕಾರಿಗಳ ಜೊತೆ ಸಮನ್ವಯ ನಡೆಸಿ ಪ್ರಮುಖ ನೀರು ನಿಲ್ಲುವ ಸ್ಥಳಗಳನ್ನು ಪರಿಶೀಲಿಸಿ ಸೂಕ್ತ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ಸಭೆಯಲ್ಲಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ರೆಡ್ಡಿ ಶಂಕರ್ ಬಾಬು, ವಿಶೇಷ ಆಯುಕ್ತರಾದ ಜಯರಾಮ ರಾಯಪುರ, ಡಾ. ತ್ರಿಲೋಕ್ ಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು, ಅಭಿಯಂತರರು, ಬಿಬಿಎಂಪಿ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಮಳೆಗಾಲ | ಹೇಳಿಕೆಯಲ್ಲಷ್ಟೇ ಸನ್ನದ್ಧ ಬಿಬಿಎಂಪಿ; ನಗರ ಜೀವನ ಅಸ್ತವ್ಯಸ್ತ

ಪಾಲಿಕೆ ಅಧಿಕಾರಿಗಳು ಮಳೆ ಅವಘಡಗಳನ್ನು ಎದುರಿಸಲು ಸಜ್ಜಾಗಿರಿ

ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಮಳೆ ಬೀಳುವ ಮುನ್ಸೂಚನೆ ಇರುವ ಕಾರಣ‌ ಪಾಲಿಕೆಯ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಮುಖ್ಯ ಅಭಿಯಂತರರು ಮಳೆ ಅವಘಡಗಳನ್ನು ಎದುರಿಸಲು ಸಜ್ಜಾಗಿರಬೇಕು.

ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯ ಅಭಿಯಂತರರು ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹೇಳಿದರು.

ಪಾಲಿಕೆಯ ವಿಪತ್ತು ನಿರ್ವಹಣಾ ತಂಡ ದಿನದ 24 ಗಂಟೆಗಳೂ ಸನ್ನದರಾಗಿದ್ದು, ಸಮರೋಪಾದಿಯಲ್ಲಿ ಅತಿವೃಷ್ಟಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು‌ ಎಂಟು ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ಮುಖ್ಯ ಅಭಿಯಂತರರಿಗೆ ನಿರ್ದೇಶನ‌ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X