ಸ್ವಾತಂತ್ರ್ಯ ದಿನ | ಬಿಬಿಎಂಪಿ ಮತ್ತು ಕೆಎಸ್‌ಆರ್‌ಟಿಸಿ ಕಚೇರಿಗಳಲ್ಲಿ ಆಚರಣೆ

Date:

Advertisements

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಆಡಳಿತಗಾರರಾದ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ವಿಶೇಷ ಆಯುಕ್ತ ಜಯರಾಮ್ ರಾಯಪುರ, ಡಾ. ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಪ್ರೀತಿ ಗೆಹ್ಲೋಟ್, ಉಪ ಆಯುಕ್ತರಾದ ಮಂಜುನಾಥ್ ಸ್ವಾಮಿ, ಸಹಾಯಕ ಆಯುಕ್ತರಾದ ಅಜಯ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Advertisements

ಬಿಬಿಎಂಪಿ

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಮತ್ತಿಕೆರೆ ಪದವಿ ಪೂರ್ವ ಕಾಲೇಜಿನಲ್ಲಿ ‘ಸಂಚಾರಿ ವಿಜ್ಞಾನ ಪ್ರದರ್ಶನ’

ಕೆಎಸ್‌ಆರ್‌ಟಿಸಿ | ಸ್ವಾತಂತ್ರ್ಯ ದಿನಾಚರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಮಂಗಳವಾರ 77 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ವೇಳೆ, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿ.ಅನ್ಬುಕುಮಾರ್ ಅವರು ಧ್ವಜಾರೋಹಣ ನಡೆಸಿದರು. ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಕೆಎಸ್‌ಆರ್‌ಟಿಸಿ

ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರು, “ಸಾಕಷ್ಟು ಮಹಾತ್ಮರ ತ್ಯಾಗ ಮತ್ತು ಬಲಿದಾನದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂಬುದನ್ನು ಪ್ರತಿಯೊಬ್ಬರೂ ನೆನಪಿಸಿಕೊಳ್ಳಬೇಕು. ನಾವು ಜವಾಬ್ದಾರಿ, ನಿಷ್ಠೆ ಮತ್ತು ದಕ್ಷತೆಯಿಂದ ನಮ್ಮ‌ ನಮ್ಮ‌ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಂಸ್ಥೆಯನ್ನು ಪ್ರಗತಿಯ ಹಾದಿಯತ್ತ ಕೊಂಡೊಯ್ಯುವುದೇ ನಾವು ದೇಶಕ್ಕೆ ಸಲ್ಲಿಸುವ ಮಹತ್ತರವಾದ ಕೊಡುಗೆಯಾಗಲಿದೆ” ಎಂದು ತಿಳಿಸಿದರು.

“ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದ ಅಂಗವಾಗಿ ಆಯೋಜಿಸಿದ್ದ ಸರ್ಕಾರಿ ಉದ್ಯಾನವನ ಸ್ಪರ್ಧೆಯಲ್ಲಿ ಕರಾರಸಾ ನಿಗಮಕ್ಕೆ ಪ್ರಥಮ ಬಹುಮಾನ ಲಭಿಸಿರುವುದಕ್ಕೆ ಉದ್ಯಾನವನ ನಿರ್ವಹಣೆ ಮಾಡುತ್ತಿರುವ ಕಾರ್ಮಿಕರಿಗೆ ಅಭಿನಂದನೆ” ಎಂದು ಹೇಳಿದರು.

ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನೈಋತ್ಯ ರೈಲ್ವೆ ಇಲಾಖೆ ಬೆಂಗಳೂರು ವಿಭಾಗದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರೈಲ್ವೆ ಇನ್ಸ್ಟಿಟ್ಯೂಟ್ ಮೈದಾನ, ಮಹಾತ್ಮ ಗಾಂಧಿ ರೈಲ್ವೆ ಕಾಲೋನಿ, ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಿತ್ತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ಧ್ವಜಾರೋಹಣ ನೆರವೇರಿಸಿದರು.

ಕೇಂದ್ರೀಯ ವಿದ್ಯಾಲಯ, ಶಾಮ ವಿದ್ಯಾ ಶಾಲೆ ಹಾಗೂ ಸ್ಟೆಪ್ಪಿಂಗ್ ಸ್ಟೋನ್‌ನ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ರೈಲ್ವೆ ರಕ್ಷಣಾ ಪಡೆಯಿಂದ ಶ್ವಾನ ಪ್ರದರ್ಶನ ಆಯೋಜಿಸಲಾಗಿತ್ತು.

ರೈಲು

ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಬೆಂಗಳೂರು ವಿಭಾಗೀಯ ಅಧ್ಯಕ್ಷೆ ಶಿಖಾ ಅಗರ್ವಾಲ್ ಅವರು ಸಂಸ್ಥೆಯ ಇತರ ಸದಸ್ಯರೊಂದಿಗೆ ರೈಲ್ವೆ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣುಗಳು ಮತ್ತು ಪಾನೀಯ ವಿತರಿಸಿದರು. ಜತೆಗೆ ಸಂಸ್ಥೆ ವತಿಯಿಂದ ರೈಲ್ವೇ ಆಸ್ಪತ್ರೆಗೆ ಕೊಡುಗೆ ನೀಡಲಾದ 50ಲೀ ಸಾಮರ್ಥ್ಯದ ನೀರು ಶುದ್ಧೀಕರಣ ಯಂತ್ರಕ್ಕೆ ಚಾಲನೆ ನೀಡಿದರು.

ಈ ವೇಳೆ, ಡಾಕ್ಟರ್ ಶೋಭಾ ಜಗನ್ನಾಥ್, ಮುಖ್ಯ ವೈದ್ಯಕೀಯ ನಿರೀಕ್ಷಕರು ಸೇರಿದಂತೆ ಇತರರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X