ಇಂದಿರಾ ಕ್ಯಾಂಟೀನ್ | ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಬಿಬಿಎಂಪಿ ಅಧಿಕಾರಿ ನೇಮಕ

Date:

Advertisements
  • 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ಯಾಂಟೀನ್‌ಗೆ ₹100 ಕೋಟಿ ಬಿಡುಗಡೆ
  • ಜನರಿಗೆ ಸೇವೆ ನೀಡಲು 1533 ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಿದ ಬಿಬಿಎಂಪಿ

ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಇಂದಿರಾ ಕ್ಯಾಂಟೀನ್ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ₹100 ಕೋಟಿ ಬಿಡುಗಡೆ ಮಾಡಿದೆ. ಕ್ಯಾಂಟೀನ್‌ನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹಾಗಾಗಿ, ಉಂಟಾಗಿರುವ ಅವ್ಯವಸ್ಥೆ ಸರಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿ ನೇಮಕ ಮಾಡಲು ಮುಂದಾಗಿದೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತಿಚೆಗೆ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ವೇಳೆ ಊಟ ಮತ್ತು ತಿಂಡಿಗೆ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ತಿಳಿದುಬಂದಿದೆ. ಹಾಗಾಗಿ, ಬಿಬಿಎಂಪಿ ನಗರದಲ್ಲಿರುವ ಪ್ರತಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಪಾಲಿಕೆಯ ಅಧಿಕಾರಿ ನೇಮಕ ಮಾಡಲು ತಿರ್ಮಾನಿಸಿದೆ.

ಇಂದಿರಾ ಕ್ಯಾಂಟೀನ್‌ನಲ್ಲಿ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಸೇರಿದಂತೆ ಸ್ವಚ್ಛತೆಯ ಬಗ್ಗೆ ನಿಗಾ ವಹಿಸಲು ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲನೆ ಮಾಡಲು ಬಿಬಿಎಂಪಿ ಅಧಿಕಾರಿ ನೇಮಕ ಮಾಡಲು ಮುಂದಾಗಿದೆ. ಜತೆಗೆ ಜನರಿಗೆ ಸೇವೆ ನೀಡಲು 1533 ಹೊಸ ಸಹಾಯವಾಣಿ ರೂಪಿಸಲಾಗಿದ್ದು, ಎಲ್ಲ ಇಂದಿರಾ ಕ್ಯಾಂಟೀನ್​ಗೂ ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಲಾಗಿದೆ.  

Advertisements

ಈ ಸುದ್ದಿ ಓದಿದ್ದೀರಾ? ಬ್ಯಾಂಕುಗಳ ಹಣ ಬಂಡವಾಳಿಗರ ಸಾಲ ಮನ್ನಾಗೆ ಬಳಕೆಯಾಗಬಾರದು: ಸಿ.ಹೆಚ್ ವೆಂಕಟಾಚಲಂ

ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ಕ್ರಮ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ ಕಸ ಹಾಕುವವರ ಮೇಲೆ ನಿಗಾ ಇಡಲು ಪಾಲಿಕೆ ಮಾರ್ಷಲ್ಸ್‌ ಮತ್ತು ಅಧಿಕಾರಿಗಳ ತಂಡ ರಚನೆ ಮಾಡಿದೆ.ಈ ತಂಡ ರಸ್ತೆಬದಿ ಕಸ ಹಾಕುವವರು, ಬ್ಲಾಕ್ ಸ್ಪಾಟ್, ರಸ್ತೆ ಗುಂಡಿ ಮೇಲೂ ನಿಗಾ ವಹಿಸಲಿದೆ.

ಟೆಂಡರ್‌ ಕರೆಯಲು ಅನುಮತಿ ನೀಡಿದ ರಾಜ್ಯ ಸರ್ಕಾರ

ಇಂದಿರಾ ಕ್ಯಾಂಟೀನ್‌ಗಳ ಪುನರುಜ್ಜೀವನಕ್ಕಾಗಿ ಟೆಂಡರ್‌ ಕರೆಯಲು ರಾಜ್ಯ ಸರ್ಕಾರದಿಂದ ಬಿಬಿಎಂಪಿ ಅನುಮೋದನೆ ಪಡೆದುಕೊಂಡಿದೆ. ಉತ್ತಮ ಗುಣಮಟ್ಟದ ಸೇವೆ ನೀಡಲು ಪಾಲಿಕೆಯು ಯೋಜನೆ ರೂಪಿಸಿದ್ದು, ವಲಯಕ್ಕೆ ಒಂದರಂತೆ ಒಟ್ಟು ಎಂಟು ಪ್ಯಾಕೇಜ್‌ಗಳಾಗಿ ವಿಭಜಿಸಲು ಯೋಜಿಸಿದೆ.

“ಸಬ್ಸಿಡಿ ದರದಲ್ಲಿ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ಒದಗಿಸುವ 200 ಕ್ಯಾಂಟೀನ್‌ಗಳನ್ನು ನಡೆಸಲು ಬಿಬಿಎಂಪಿಗೆ ದಿನಕ್ಕೆ ₹31 ಲಕ್ಷ ಬೇಕಾಗುತ್ತದೆ. ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಟೆಂಡರ್‌ ಕರೆಯುತ್ತೇವೆ. ಟೆಂಡರ್‌ ಅನುಮೋದಿಸುವುದರ ಜೊತೆಗೆ, 50 ಹೊಸ ಕ್ಯಾಂಟೀನ್‌ ಆರಂಭಿಸಲು ಸರ್ಕಾರ ಒಪ್ಪಿಗೆ ನೀಡಿದೆ” ಎಂದು ಬಿಬಿಎಂಪಿಯ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಅವರು ತಿಳಿಸಿದರು.

ಪ್ರಸ್ತುತ ನಗರದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ನಡೆಸುವ ಜವಾಬ್ದಾರಿಯನ್ನು ಎರಡು ಸಂಸ್ಥೆಗಳಿಗೆ ವಹಿಸಲಾಗಿದೆ. ಆಹಾರದ ಕೊರತೆಯ ಜೊತೆಗೆ, ಕ್ಯಾಂಟೀನ್‌ಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸುತ್ತಿವೆ ಎಂಬ ದೂರುಗಳಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X