“ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ಗಾಯಗೊಂಡು ಜೀವನಪರ್ಯಂತ ಅಂಗವಿಕಲರಾಗಿದ್ದಾರೆ” ಎಂದು ಸಿಐಡಿ ಡಿಜಿಪಿ ಎಂ ಎ ಸಲೀಂ ಹೇಳಿದರು.
ರಸ್ತೆ ಅಪಘಾತಗಳ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನ ಸರ್ಜಿಕಲ್ ಸೊಸೈಟಿಯ 50ನೇ ವಾರ್ಷಿಕೋತ್ಸವದ ಅಂಗವಾಗಿ ವಿಧಾನಸೌಧದಿಂದ ನಂದಿಬೆಟ್ಟದವರೆಗೆ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಅಥವಾ ಸೀಟ್ ಬೆಲ್ಟ್ ಧರಿಸದ ಕಾರಣ ಹಾಗೂ ಅತಿ ವೇಗದ ಚಾಲನೆ ಅಥವಾ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುವುದರಿಂದ ಅನೇಕ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಾರೆ. ವಾಹನ ಚಲಾಯಿಸುವಾಗ ಹೆಚ್ಚಿನ ಕಾಳಜಿ ವಹಿಸಬೇಕು. ರಸ್ತೆ ಅಪಘಾತಗಳಿಂದ ವಿಕಲಚೇತನರು ಸಾಮಾನ್ಯ ಜೀವನ ನಡೆಸುವುದು ಸುಲಭವಲ್ಲ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವತಿಗೆ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಅಪ್‌ಲೋಡ್; ಬಂಧನ
ಬೆಂಗಳೂರಿನ ಸರ್ಜಿಕಲ್ ಸೊಸೈಟಿಯ ಡಾ.ವೆಂಕಟೇಶ್ ಮಾತನಾಡಿ, “ಸಾರ್ವಜನಿಕರು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ರಸ್ತೆ ಅಪಘಾತಗಳು ಸಂಭವಿಸುವುದಿಲ್ಲ. ಪ್ರತಿಯೊಂದು ಜೀವವೂ ಮುಖ್ಯವಾಗಿದ್ದು, ಜನರು ಬೇಜವಾಬ್ದಾರಿಯಿಂದ ವಾಹನ ಚಲಾಯಿಸಿ ತಮ್ಮ ಬದುಕಿನೊಂದಿಗೆ ಆಟವಾಡುತ್ತಿದ್ದಾರೆ” ಎಂದರು.