ನೆಲಮಂಗಲ: ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ; ಕಿರುಕುಳ ನೀಡಿದ ಪಿಡಿಒ ವಿರುದ್ಧ ಎಫ್‌ಐಆರ್‌

Date:

ನೆಲಮಂಗಲ ತಾಲ್ಲೂಕಿನ ದಾಬಸ್‌ಪೇಟೆಯ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಗೀತಾಮಣಿ ಅವರ ವಿರುದ್ಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

‘ಗೋವೇನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಅವರೇ ಕಾರಣ’ ಎಂದು ಮೃತ ವ್ಯಕ್ತಿಯ ಸಂಬಂಧಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

‘ರಾಮಚಂದ್ರಯ್ಯ ಪಂಚಾಯಿತಿಯ ಗ್ರಂಥಾಲಯದಲ್ಲಿ ಮೇಲ್ವಿಚಾರಕರಾಗಿ (ಅರೆಕಾಲಿಕ) ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿಂದ ಗೀತಾಮಣಿ ಅವರು ರಾಮಚಂದ್ರಯ್ಯ ಅವರಿಗೆ ಸಂಬಳ ನೀಡಿರಲಿಲ್ಲ. ಹಾಜರಾತಿ ತೋರಿಸಲು ಬಯೋಮೆಟ್ರಿಕ್ ನೀಡದೇ ತೊಂದರೆ ನೀಡಿದ್ದರು. ಕೆಲಸಕ್ಕೆ ಬೇಡವೆಂದೂ ಹೇಳಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತದಾನದ ಹಕ್ಕನ್ನು ಚುನಾವಣಾ ಆಯೋಗ ರಕ್ಷಿಸುತ್ತಿದೆಯೇ?

ಪಿಡಿಒ ವರ್ತನೆ ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬುಧವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸುವುದಾಗಿ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಜಿಲ್ಲಾ ಅಧ್ಯಕ್ಷೆ ಶಾರದಮ್ಮ ತಿಳಿಸಿದ್ದಾರೆ.

ಇತ್ತೀಚಿಗೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಂಥಾಲಯದ ಮೇಲ್ವಿಚಾರಕಿ ಭಾಗ್ಯವತಿ ವಿಶ್ವೇಶ್ವರಯ್ಯ ಎಂಬುವವರು ಮೂರು ತಿಂಗಳಿಂದ ಸಂಬಳ ಪಾವತಿಯಾಗದೇ ಹತಾಶರಾಗಿ, ಗ್ರಂಥಾಲಯದ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಧಿಕಾರಿಗಳ ಸತಾಯಿಸುವಿಕೆ, ಸಂಬಳ ವಿಳಂಬದಿಂದ ಮಾನಸಿಕ ಒತ್ತಡಕ್ಕೊಳಗಾದ ಅವರು, ಮಗಳ ಶಾಲಾ ಶುಲ್ಕ ಕಟ್ಟಲು ಸಾಧ್ಯವಾಗದೆ ತೊಂದರೆ ಅನುಭವಿಸಿದ್ದರು. ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಡಿದ ಮನವಿ ಫಲಕಾರಿಯಾಗದ ಕಾರಣ, ಆತ್ಶಹತ್ಯೆಗೆ ಶರಣಾಗಿದ್ದರು. ಇಂಥ ಘಟನೆಗಳು ಗ್ರಂಥಾಲಯ ಇಲಾಖೆಯ ಅವ್ಯವಸ್ಥೆ, ಅಧಿಕಾರಿಗಳ ಬೇಜವಾಬ್ದಾರಿತನವನ್ನು ಬಯಲಿಗೆಳೆಯುತ್ತವೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...