- ಮತದಾನ ನಮ್ಮ ಹಕ್ಕು, ಅದನ್ನು ಚಲಾಯಿಸಿ ಸಮೃದ್ಧ ಭಾರತ ನಿರ್ಮಿಸಿ
- ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಶೇಕಡಾ 50 ರಷ್ಟು ರಿಯಾಯಿತಿ
ರಾಜ್ಯದೆಲ್ಲೆಡೆ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿ ಹೆಚ್ಚಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಇದೀಗ ಬೆಂಗಳೂರಿನಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ ಮತದಾನ ಮಾಡಿದವರಿಗೆ ಉಚಿತ ತಿಂಡಿ ಮತ್ತು ಸಿನಿಮಾ ಟಿಕೆಟ್ ನೀಡುವುದಾಗಿ ಭಿತ್ತಿಪತ್ರ ಹಂಚಿಕೊಂಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಮತದಾನದ ಅರಿವು ಮೂಡಿಸುವ ಸಲುವಾಗಿ ಜಾಥಾ, ಬೀದಿ ನಾಟಕ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು(ಕೆಎಸ್‌ಟಿಡಿಸಿ) ಕೂಡಾ ತಮ್ಮ ಉಸ್ತುವಾರಿಯಲ್ಲಿರುವ ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಶೇಕಡಾ 50 ರಷ್ಟು ರಿಯಾಯಿತಿಯನ್ನ ಘೋಷಿಸಿದೆ.
ಮತದಾನದ ಉತ್ತೇಜನಕ್ಕಾಗಿ ನಿಸರ್ಗ ಗ್ರ್ಯಾಂಡ್ ಈ ಮಹತ್ವದ ಹೆಜ್ಜೆ ಇಟ್ಟಿದ್ದು, ಮತ ಹಾಕಿದ್ದೇವೆ ಎಂಬುದನ್ನು ದೃಢಪಡಿಸಲು ಮತದಾನ ಮಾಡಿದುದರ ಗುರುತು (ಶಾಹಿ) ತೋರಿಸಿದವರಿಗೆ ಬೆಣ್ಣೆ ಖಾಲಿ ದೋಸೆ, ಮೈಸೂರು ಪಾಕ್ ಮತ್ತು ತಂಪು ಪಾನಕವನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು
ಮೊದಲ 100 ಹೊಸ ಯುವ ಮತದಾರರಿಗೆ ಉಚಿತ ಸಿನಿಮಾ ಟಿಕೆಟ್‌ಗಳನ್ನು ನೀಡುತ್ತಿದೆ. ಇದು ಸಾಮಾಜಿಕ ಕಳಕಳಿ ಉಳ್ಳ ರಾಜಕೀಯೇತರ ಕಾರ್ಯಕ್ರಮವಾಗಿದ್ದು, ಮತದಾನ ನಮ್ಮ ಹಕ್ಕು, ಅದನ್ನು ಚಲಾಯಿಸಿ ಸಮೃದ್ಧ ಭಾರತ ನಿರ್ಮಿಸಿ ಎಂದು ಭಿತ್ತಿಪತ್ರದಲ್ಲಿ ಬರೆಯಲಾಗಿದೆ.