ಸದ್ದಿಲ್ಲದೇ ಹೆಚ್ಚಳವಾಗುತ್ತಿರುವ ಈರುಳ್ಳಿ ದರ

Date:

Advertisements

ಟೊಮ್ಯಾಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಬೆಲೆ ಕುಸಿತ ಕಂಡ ನಂತರ ನಿಟ್ಟುಸಿರು ಬಿಟ್ಟು ಟೊಮ್ಯಾಟೋ ಕೊಳ್ಳಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಈರುಳ್ಳಿ ದರ ಸದ್ದಿಲ್ಲದಂತೆ ಹೆಚ್ಚಳವಾಗುತ್ತಿದೆ. ಕಳೆದ ಒಂದು ವಾರದಿಂದ ಕೆಜಿ ಈರುಳ್ಳಿ ಬೆಲೆ ಸುಮಾರು ₹12-15 ರಷ್ಟು ಏರಿಕೆ ಕಂಡಿದೆ.

ಕಳೆದ ನಾಲ್ಕು ತಿಂಗಳಿನಿಂದ ಟೊಮ್ಯಾಟೋ ದರ ₹200 ಗಡಿ ದಾಟಿತ್ತು. ಇದರಿಂದ ಜನರು ಟೊಮ್ಯಾಟೋ ಕೊಳ್ಳುವುದನ್ನು ಕಡಿಮೆ ಮಾಡಿದ್ದರು. ಅಂದರೆ ಕೆಜಿ ಟೊಮ್ಯಾಟೋ ತೆಗೆದುಕೊಳ್ಳುತ್ತಿದ್ದ ಗ್ರಾಹಕ ಅರ್ಧ ಕೆಜಿ ಟೊಮ್ಯಾಟೋ ಖರೀದಿ ಮಾಡುತ್ತಿದ್ದರು. ಇನ್ನೂ ಕೆಲವರು ಟೊಮ್ಯಾಟೋ ದರ ಹೆಚ್ಚಳದಿಂದ ಟೊಮ್ಯಾಟೋ ಬಳಸದೇ ಹುಣಸೆಹಣ್ಣು ಹಾಕಿ ಅಡುಗೆ ಮಾಡುತ್ತಿದ್ದರು. ಕಳೆದ ಒಂದು ವಾರದಿಂದ ಟೊಮ್ಯಾಟೋ ದರದಲ್ಲಿ ಭಾರೀ ಇಳಿಕೆಯಾಗುತ್ತಿದ್ದು, ಕಳೆದ ವಾರ ಕೆಜಿ ಟೊಮ್ಯಾಟೋಗೆ ₹80 ರಿಂದ ₹90 ಇತ್ತು. ಇದೀಗ ₹50 ರಿಂದ ₹60 ಆಗಿದೆ. ಟೊಮ್ಯಾಟೋ ದರ ಇಳಿಕೆ ಕಂಡಿದೆ ಎಂದು ಗ್ರಾಹಕ ಸಂತಸ ಪಡುವಷ್ಟರಲ್ಲಿಯೇ ಈರುಳ್ಳಿ ದರ ಏರಿಕೆಯಾಗುತ್ತಿರುವುದರಿಂದ ಮತ್ತೆ ಕಂಗಾಲಾಗಿದ್ದಾರೆ.  

ಸದ್ದಿಲ್ಲದೇ ಹೆಚ್ಚಳವಾಗುತ್ತಿರುವ ಈರುಳ್ಳಿ ದರ

Advertisements

ಸದ್ದಿಲ್ಲದಂತೆ ಈರುಳ್ಳಿ ದರ ಹೆಚ್ಚಳವಾಗುತ್ತಿದೆ. ಕಳೆದ ವಾರ ₹25 ಇದ್ದ ಈರುಳ್ಳಿ ದರ ಇದೀಗ ₹30 – ₹40 ತಲುಪಿದೆ. ಸೂಪರ್‌ ಮಾರುಕಟ್ಟೆಗಳಲ್ಲಿ ಕೆಜಿ ಈರುಳ್ಳಿಗೆ ₹45 ನಂತೆ ಮಾರಾಟ ಮಾಡಲಾಗುತ್ತಿದೆ.

ಜೂನ್ ತಿಂಗಳಿನಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಮುಂಗಾರು ಕೈಕೊಟ್ಟ ಕಾರಣ ರಾಜ್ಯದ ಹಲವೆಡೆ ಉತ್ತಮ ಬೆಳೆ ಬಂದಿಲ್ಲ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಈ ವರ್ಷ ರಾಜ್ಯದಲ್ಲಿ 4000 ಹೆಕ್ಟೇರ್ ಬೆಳೆ ಕೊರತೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ₹50 – ₹60 ಏರಿಕೆಯಾಗುವ ಸಾಧ್ಯತೆ ಇದೆ.

ಆಂಧ್ರ ಪ್ರದೇಶ ಮತ್ತು ಕರ್ನಾಟಕದಲ್ಲಿ ಈರುಳ್ಳಿಯ ಹೊಸ ಬೆಳೆ ಒಂದು ತಿಂಗಳು ವಿಳಂಬವಾಗಿದೆ. ಅಹ್ಮದ್‌ ನಗರದಲ್ಲಿಯೂ ಪೂರೈಕೆ ಕಡಿಮೆ ಇದೆ. ಹೀಗಾಗಿ, ಈರುಳ್ಳಿ ಬೆಲೆ ಏರಿಕೆಯಾಗಿದೆ.

ಕಳೆದ ಎರಡು ತಿಂಗಳಿನಿಂದ ಬೆಳ್ಳುಳ್ಳಿ ಬೆಲೆ ಹೆಚ್ಚಳವಾಗಿದ್ದು, ಪ್ರಸ್ತುತ ಕೆಜಿಗೆ ₹200 ಇದೆ. ಹೊಸ ಬೆಳೆ ಬರುವವರಿಗೆ ಈ ದರ ಮುಂದುವರೆಯುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭೂಮಿ, ವಸತಿ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳು

ಮಹಾರಾಷ್ಟ್ರದಲ್ಲಿ ಕ್ವಿಂಟಾಲ್ಈರುಳ್ಳಿ ದರ ಶೇ. 48ರಷ್ಟು ಏರಿಕೆ

ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ರಾಜ್ಯ ಮಹಾರಾಷ್ಟ್ರ. ಇಲ್ಲಿ ಕಳೆದ ಒಂದು ವಾರದಲ್ಲಿ ಕ್ವಿಂಟಾಲ್‌ ಈರುಳ್ಳಿ ದರ ಶೇ. 48ರಷ್ಟು ಏರಿಕೆ ಕಂಡಿದೆ. ಆಗಸ್ಟ್ 4 ರಂದು ಕ್ವಿಂಟಲ್‌ಗೆ ₹1,550 ಇದ್ದ ಈರುಳ್ಳಿ ದರ ಶುಕ್ರವಾರ ₹2,300ಗೆ ತಲುಪಿದೆ. ಮಹಾರಾಷ್ಟ್ರದ ಲಾಸಲ್‌ಗಾಂವ್ ಎಪಿಎಂಸಿಯಲ್ಲಿ ಈರುಳ್ಳಿಯ ಸಗಟು ಬೆಲೆ ಹೆಚ್ಚಳವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X