ಜುಲೈನಲ್ಲಿ ವಾಡಿಕೆಗಿಂತ ಶೇ.3ರಷ್ಟು ಹೆಚ್ಚು ಮಳೆ

Date:

Advertisements

ನೈರುತ್ಯ ಮಾರುತಗಳು ತಡವಾಗಿ ರಾಜ್ಯ ಪ್ರವೇಶಿಸಿದ್ದು, ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿತ್ತು. ಆ ತಿಂಗಳಿನಲ್ಲಿ ಶೇ.56ರಷ್ಟು ಮಳೆ ಕೊರತೆ ಉಂಟಾಗಿತ್ತು. ಜುಲೈ ತಿಂಗಳಿನಲ್ಲಿ ಮುಂಗಾರು ಚುರುಕುಗೊಂಡಿದ್ದರಿಂದ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ.3ರಷ್ಟು ಹೆಚ್ಚು ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಅಂಕಿಅಂಶಗಳ ಪ್ರಕಾರ, ಜೂನ್ 1 ರಿಂದ ಜುಲೈ 31 ರವರೆಗಿನ ಕರ್ನಾಟಕದಲ್ಲಿ ಸರಾಸರಿ ಮಳೆ 453 ಮಿ.ಮೀ. ಮಳೆಯಾಗಿದೆ. ಈ ವರ್ಷದಲ್ಲಿ ಜುಲೈ 31ರ ವೇಳೆಗೆ ರಾಜ್ಯದಲ್ಲಿ 468.7ಮಿ.ಮೀ ಮಳೆ ಸುರಿದಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ವರದಿ ಪ್ರಕಾರ, ರಾಜ್ಯದಲ್ಲಿ 7% ಮಳೆ ಕೊರತೆ ಉಂಟಾಗಿದೆ. ಸರಾಸರಿ 19% ವರೆಗಿನ ಕೊರತೆಯನ್ನು ಸಾಮಾನ್ಯವೆಂದು ಪರಿಗಣಿಸಲಾಗುತ್ತದೆ. ಮಲೆನಾಡು ಮಾತ್ರ ದೊಡ್ಡ ಪ್ರಮಾಣದ ಮಳೆಯ ಕೊರತೆಯನ್ನು ಎದುರಿಸುತ್ತಿದೆ. ಆ ಪ್ರದೇಶದಲ್ಲಿ ಸರಾಸರಿ 24% ಮಳೆ ಕೊರತೆ ಉಂಟಾಗಿದೆ.

Advertisements

“ಈಶಾನ್ಯ ಮಾನ್ಸೂನಿಂದ ಅಕ್ಟೋಬರ್-ನವೆಂಬರ್‌ನಲ್ಲಿ ರಾಜ್ಯದಲ್ಲಿ ಸುಮಾರು 200 ಮಿ.ಮೀ ಮಳೆಯಾಗಬಹುದು. ಆಗಸ್ಟ್‌ನ ಮಳೆಯಲ್ಲಿ ಸ್ವಲ್ಪ ಇಳಿಕೆಯಾಗಲಿದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ. 140 ಹೆಚ್ಚಳ

ಎಲ್ಲ ಜಲಾಶಯಗಳಲ್ಲೂ ನೀರಿನ ಮಟ್ಟ ಸಹಜ ಸ್ಥಿತಿಗೆ ತಲುಪಿದ್ದು, ಸರಾಸರಿ ಶೇ.65ರಷ್ಟು ಭರ್ತಿಯಾಗಿವೆ. ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳಲ್ಲಿ ಶೇ.80ರಷ್ಟು ಅಣೆಕಟ್ಟುಗಳು ಭರ್ತಿಯಾಗಿದ್ದರೆ, ಕೃಷ್ಣಾ ಜಲಾನಯನದಲ್ಲಿ ಶೇ.73ರಷ್ಟು ತುಂಬಿವೆ.

2022ರಲ್ಲಿ ಇದೇ ಅವಧಿಯಲ್ಲಿ ಕೆಆರ್‌ಎಸ್‌ ಜಲಾಶಯದಲ್ಲಿ 49.4 ಟಿಎಂಸಿ ನೀರು ಇತ್ತು. ಈ ವರ್ಷ, ಕೇವಲ 34.9 ಟಿಎಂಸಿ ನೀರು ಸಂಗ್ರವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X