ಎರಡು ಪ್ರತ್ಯೇಕ ಘಟನೆಗಳಲ್ಲಿ, ದ್ವಿಚಕ್ರ ವಾಹನಗಳು ಮತ್ತು ಮೊಬೈಲ್ ಫೋನ್ಗಳನ್ನು ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
₹8.6 ಲಕ್ಷ ಮೌಲ್ಯದ 18 ಮೊಬೈಲ್ ಫೋನ್ಗಳು, 11 ದ್ವಿಚಕ್ರ ವಾಹನಗಳು ಮತ್ತು ಒಂದು ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
“ಶಿವಾಜಿನಗರದ ಸೈಯದ್ ಶಾಬಾಜ್ (26) ಬಂಧಿತ ಆರೋಪಿ. ನಿರುದ್ಯೋಗಿಯಾಗಿದ್ದ ಈತ ತನ್ನ ಖರ್ಚನ್ನು ನಿಭಾಯಿಸಲು ದ್ವಿಚಕ್ರ ವಾಹನಗಳನ್ನು ಕದಿಯಲು ಆರಂಭಿಸಿದ್ದ. ಈತ ದ್ವಿಚಕ್ರ ವಾಹನಗಳ ಬೀಗ ಒಡೆಯುವ ತಂತ್ರವನ್ನು ಕಲಿತಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.
“ದೂರದ ಸ್ಥಳಗಳಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಗುರಿಯಾಗಿಸಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ. ಆತನಿಂದ ₹5.6 ಲಕ್ಷ ಮೌಲ್ಯದ 18 ದ್ವಿಚಕ್ರ ವಾಹನಗಳು ಮತ್ತು ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರಡನೇ ಘಟನೆಯಲ್ಲಿ, ಬಸ್ ನಿಲ್ದಾಣಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಫೋನ್ಗಳನ್ನು ಕಳ್ಳತನ ಮಾಡುತ್ತಿದ್ದ ಕಾವಾಡಿ ಮಹೇಶ್ ಎಂಬ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಲೇಜು ವಿದ್ಯಾರ್ಥಿ ಅನುಮಾನಾಸ್ಪದ ಸಾವು
₹3 ಲಕ್ಷ ಮೌಲ್ಯದ 18 ಫೋನ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈತ ಫೋನ್ ಕದಿಯಲು ಜನಸಂದಣಿ ಇರುವ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇತನ ವಿರುದ್ಧ ಐಪಿಸಿ ಸೆಕ್ಷನ್ 379 (ಕಳ್ಳತನದ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.