ಬೆಂಗಳೂರಿನಲ್ಲಿ ಕರಾವಳಿಯ ಕ್ರೀಡೆ; ಮೊಟ್ಟ ಮೊದಲ ಬಾರಿಗೆ ಕಂಬಳ ನಡೆಸಲು ಸಿದ್ಧತೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಕರಾವಳಿ ಭಾಗದ ಸಾಂಪ್ರದಾಯಿಕ ಆಟ ಕಂಬಳ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ.

ತುಳುಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆ ಬೆಂಗಳೂರಿನಲ್ಲಿ‌ ಕಂಬಳ‌ ಮಾಡಲು ಸಿದ್ದತೆ ನಡೆಸಲಾಗುತ್ತಿದೆ.

ನವೆಂಬರ್ 24, 25 ಹಾಗೂ 26 ಒಟ್ಟು ಮೂರು ದಿನಗಳ ಕಾಲ ಕಂಬಳ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಚಿಂತನೆ ನಡೆಸಲಾಗಿದ್ದು, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರು ಕಂಬಳ ವೀಕ್ಷಣೆಗೆ ಬರಲಿದ್ದಾರೆ ಎನ್ನಲಾಗಿದೆ.

Advertisements

ಬೆಂಗಳೂರಿನಲ್ಲಿ ಕಂಬಳ ಮಾಡಲು ತುಳುಕೂಟ ನಿರ್ಧರಿಸಿದೆ. ನಗರದ ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಈಗಾಗಲೇ ಜಾಗ ಗುರುತು ಮಾಡಿದ್ದು, ಈ ಬಗ್ಗೆ ಮೈಸೂರು ಒಡೆಯರ್ ಅವರಿಗೆ ತಿಳಿಸಿ, ಅವರ ಅನುಮತಿ ಪಡೆದಿದ್ದಾರೆ ಎನ್ನಲಾಗಿದೆ.

ರಾಜಧಾನಿಯಲ್ಲಿ ಈ ವರ್ಷ ನಡೆಯುವ ಕಂಬಳಕ್ಕೆ 150 ಜೋಡಿಯ ಕೋಣಗಳು ಬರಲಿವೆ. ಅಂದಾಜು 5 ಲಕ್ಷಕ್ಕೂ ಹೆಚ್ಚು ಜನರು ಕಂಬಳ ವೀಕ್ಷಣೆಗೆ ಬರುವ ಸಾಧ್ಯತೆ ಇದೆ. ಕಂಬಳಕ್ಕೆ ಬರುವ ಕೋಣಗಳಿಗೆ ಸಕಲೇಶಪುರ, ಹಾಸನ ಹಾಗೂ ನೆಲಮಂಗಲದಲ್ಲಿ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗಿದೆ. ಕಂಬಳಕ್ಕೆ ಒಂದು ದಿನ ಮುಂಚಿತವಾಗಿ ಅವು ಬೆಂಗಳೂರಿಗೆ ಬರಲಿವೆ. ಕಂಬಳಕ್ಕೆ ಬೇಕಾದ ಕೆಸರು ಗದ್ದೆಯನ್ನ ಸಿದ್ಧ ಮಾಡಲು ಮಣ್ಣಿನ ಟೆಸ್ಟಿಂಗ್ ಹಾಗೂ ನೀರಿನ ಟೆಸ್ಟಿಂಗ್ ಮುಗಿದಿದೆ. ಕಂಬಳ ವೀಕ್ಷಣೆಗೆ ಬರುವ ಜನರಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಬರುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ದೇವನಹಳ್ಳಿಯಲ್ಲಿ ಸರ್ಕಾರಿ ಪ್ರಮಾಣೀಕೃತ ವಾಹನ ಸ್ಕ್ರ್ಯಾಪಿಂಗ್‌ ಕೇಂದ್ರ ಶೀಘ್ರದಲ್ಲೇ ಆರಂಭ

ಏನಿದು ಕಂಬಳ?

ಕಂಬಳ ಕರಾವಳಿ ಕರ್ನಾಟಕದ ಒಂದು ಜನಪದ ಕ್ರೀಡೆ. ದಷ್ಟಪುಷ್ಟವಾಗಿ ಬೆಳಸಿದ ಕೋಣಗಳನ್ನ ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಈ ಕ್ರೀಡೆಯನ್ನ ಉಡುಪಿ, ದಕ್ಷಿಣ ಕನ್ನಡದಲ್ಲಿ ಹೆಚ್ಚಾಗಿ ನಡೆಸುತ್ತಾರೆ. ಸಾಮಾನ್ಯವಾಗಿ ಈ ಕಂಬಳವನ್ನ ರೈತಾಪಿ ಜನರು ಭತ್ತದ ಕೊಯಿಲಿನ ನಂತರದಲ್ಲಿ ಮನರಂಜನೆಗೋಸ್ಕರ ಏರ್ಪಡಿಸುತ್ತಾರೆ.

ಕಂಬಳಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹಿಂದಿನ ಕಾಲದಲ್ಲಿ ರಾಜರುಗಳ ಬೆಂಬಲ ಮತ್ತು ಪ್ರೋತ್ಸಾಹದೊಂದಿಗೆ ಈ ಕ್ರೀಡೆ ನಡೆಯುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳುಮೆಗಾಗಿ ಕೋಣಗಳನ್ನು ಬಳಸುವುದು ಸಾಮಾನ್ಯ. ಅವುಗಳಲ್ಲಿ ಬಲಿಷ್ಠವಾದವುಗಳ ಮಧ್ಯೆ ಓಟದ ಸ್ಪರ್ಧೆ ಏರ್ಪಡಿಸಿ, ವಿಜೇತರಾದವರನ್ನು ಸನ್ಮಾನಿಸಲಾಗುತ್ತದೆ. ಇದರ ಹಿಂದೆ ಕೃಷಿಕರ ಕ್ರೀಡಾ ಮನೋಭಾವಿದೆ.

ಕೋಣಗಳನ್ನು ಚೆನ್ನಾಗಿ ಸಲಹಲು ಇದೊಂದು ನೆಪ ಎನ್ನಲಾಗಿದೆ. ಭತ್ತದ ಮೊದಲ ಕೊಯಿಲಿನ ನಂತರ ಈ ಕ್ರೀಡೆ ನಡೆಯುತ್ತದೆ. ನವೆಂಬರ್-ಡಿಸೆಂಬರ್ ನಂತರದ ಚಳಿಗಾಲದಲ್ಲಿ ಆರಂಭವಾಗುವ ಕಂಬಳ ಕರಾವಳಿಯ ಬಿಸಿಲ ಬೇಗೆ ಏರುವ ಮೊದಲೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X