ಬಾಲಕಿ ಮೇಲೆ ಅತ್ಯಾಚಾರ | ಶಾಲೆ ಮುಚ್ಚುವಂತೆ ಶಿಫಾರಸು ಮಾಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

Date:

Advertisements

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ 10 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲನೇ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯನ್ನು ಮುಚ್ಚುವಂತೆ ಶಿಕ್ಷಣ ಇಲಾಖೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಪಿಸಿಆರ್) ಶಿಫಾರಸು ಮಾಡಿದೆ.

ವರ್ತೂರು ಠಾಣೆಯ ಪೊಲೀಸರು ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ (65) ಅವರನ್ನು ಬಂಧಿಸಿದ್ದಾರೆ. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾರೆ.  

ನಗರದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕಿಯನ್ನು ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ (65) ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಹಾಗೂ ಸದಸ್ಯ ಶಶಿಧರ ಕೋಸಂಬಿ ನೇತೃತ್ವದ ತಂಡ ಶಾಲೆಗೆ ಹಾಗೂ ಬಾಲಕಿ ಮನೆಗೆ ಭೇಟಿ ನೀಡಿದರು. ಘಟನೆಯ ಬಗ್ಗೆ ಈ ತಂಡಕ್ಕೆ ವರ್ತೂರು ಠಾಣೆಯ ಪಿಎಸ್‌ಐ ಶ್ರೀನಿವಾಸ್ ಶಿರೂರ್ ಮಾಹಿತಿ ನೀಡಿದರು. ಈ ಬಗ್ಗೆ ತಂಡದ ಸದಸ್ಯರು ಮಾಹಿತಿ ದಾಖಲಿಸಿಕೊಂಡರು.

Advertisements

ಈ ವೇಳೆ, ಬೆಂಗಳೂರು ಪೂರ್ವ ತಾಲ್ಲೂಕಿನ ದಕ್ಷಿಣ ವಲಯ–4ರ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್. ರಾಮಮೂರ್ತಿ, ಮಕ್ಕಳ ಕಲ್ಯಾಣ ಅಧಿಕಾರಿ ಶಿವಕುಮಾರ್ ಜೊತೆಗಿದ್ದರು.

ಈ ಸುದ್ದಿ ಓದಿದ್ದೀರಾ? ಬಿಪಿಎಲ್​ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಬೇಕೆ? ಸರ್ಕಾರದ ಮಾನದಂಡಗಳೇನು? ಇಲ್ಲಿವೆ ನೋಡಿ…

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ, “ಕೃತ್ಯ ನಡೆದಿರುವ ಶಾಲೆ ಮುಚ್ಚುವಂತೆ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ. ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

“ಏಕಾಏಕಿ ಶಾಲೆ ಮುಚ್ಚುವುದರಿಂದ ಇನ್ನುಳಿದ ಮಕ್ಕಳಿಗೆ ಸಮಸ್ಯೆಯಾಗುತ್ತದೆ. ಹಾಗಾಗಿ, ಶಿಕ್ಷಣ ಇಲಾಖೆಯ ಸಮ್ಮುಖದಲ್ಲಿ ಸೋಮವಾರ ಪೋಷಕರ ಸಭೆ ನಡೆಸಲಾಗುತ್ತದೆ. ಈ ಶಾಲೆಯಲ್ಲಿ 1 ರಿಂದ 10 ನೇ ತರಗತಿಯವರೆಗೆ ಒಟ್ಟು 140 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸಲು ಎಲ್ಲ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

“ಆರೋಪಿ ಪ್ರಾಶುಂಪಾಲನ ಮನೆ ಶಾಲಾ ಕಟ್ಟಡದ ಮೇಲೆ ಇದೆ. ಶಾಲೆಯ ಮೇಲೆಯೇ ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಇದೆ ಎಂಬ ಬಗ್ಗೆ ಶಿಕ್ಷಣ ಇಲಾಖೆಗೆ ಪ್ರಶ್ನೆ ಮಾಡಲಾಗಿದೆ. ಶಾಲೆಯನ್ನು ತ್ವರಿತವಾಗಿ ಮುಚ್ಚಲು ಕ್ರಮ ಕೈಗೊಳ್ಳಿ” ಎಂದು ಶಿಫಾರಸು ಮಾಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X