ಮರುಜೀವ ಪಡೆದ ‘ಇಂದಿರಾ ಕ್ಯಾಂಟೀನ್’

Date:

Advertisements
  • ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾತ್ರಿ ವೇಳೆ ಊಟಕ್ಕೆ ಜನ ಕಡಿಮೆ
  • ಮಾರ್ಷಲ್‌ಗಳು ನೀಡುವ ಆಧಾರದ ಮೇಲೆ ಮೊತ್ತ ಪಾವತಿ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಹಾತ್ವಾಕಾಂಕ್ಷೆ ಯೋಜನೆ ‘ಇಂದಿರಾ ಕ್ಯಾಂಟೀನ್’ 2013ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿತ್ತು. ಬಡ ಜನರಿಗೆ ಕಡಿಮೆ ದರದಲ್ಲಿ ಊಟ ನೀಡುವ ಈ ಕ್ಯಾಂಟೀನ್‌ ಬಿಜೆಪಿ ಆಡಳಿತದಲ್ಲಿ ಮಲತಾಯಿ ಧೋರಣೆಗೆ ಒಳಪಟ್ಟಿತ್ತು. ಇದೀಗ ಕ್ಯಾಂಟೀನ್‌ ಅನ್ನು ಪುನಾರಂಭಿಸಲು ರಾಜ್ಯ ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ಯಾರ್‌ಪುರ ಮಾತನಾಡಿ, “ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಆರಂಭ ಮಾಡುವ ಬಗ್ಗೆ ಸೂಚನೆ ನೀಡಿದೆ. ಈ ಹಿಂದೆ, 10 ಮೊಬೈಲ್ ಕ್ಯಾಂಟೀನ್‌ಗಳು ಬಂದ್‌ ಆಗಿದ್ದು, ಉಳಿದ ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾತ್ರಿ ವೇಳೆ ಊಟಕ್ಕೆ ಜನ ಕಡಿಮೆ ಇದ್ದಾರೆ. ಈಗ, ಬಿಬಿಎಂಪಿಯ ವ್ಯಾಪ್ತಿಯ 243 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ ಆರಂಭಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ₹2,000 ನೋಟು ವಾಪಸ್; ಹವಾಲಾ ದಂಧೆ ಹೆಚ್ಚುವ ಬಗ್ಗೆ ಪೊಲೀಸರ ಶಂಕೆ

Advertisements

“ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕ್ಯಾಂಟೀನ್‌ ಅಡುಗೆ ಕೋಣೆಯಲ್ಲಿರುವ ವಸ್ತುಗಳನ್ನು ಬದಲಾಯಿಸಬೇಕು. ಕ್ಯಾಂಟೀನ್‌ ಉಪಾಹಾರ ಬೆಲೆಯನ್ನು ₹5 ರಿಂದ ₹10 ರವರೆಗೆ ಏರಿಕೆ ಮಾಡಲಾಗುವುದು. ಗುತ್ತಿಗೆದಾರರಿಗೆ ಇನ್ನೂ ಹಳೆಯ ಬಾಕಿ ಪಾವತಿಯಾಗಿಲ್ಲ. ಒಂದು ತಿಂಗಳ ಒಳಗಾಗಿ ಗುತ್ತಿಗೆದಾರರಿಗೆ ಪೆಮೇಂಟ್‌ ಮಾಡಲಾಗುವುದು. ಮಾರ್ಷಲ್‌ಗಳು ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮಾಡಿದ್ದೇವೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X