ಬೆಂಗಳೂರು | ಯುಗಾದಿ ಹಬ್ಬದ ದಿನ ರೌಡಿ ಶೀಟರ್‌ ಭೀಕರ ಹತ್ಯೆ

Date:

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ಯುಗಾದಿ ಹಬ್ಬದ ದಿನದಂದು ರೌಡಿ ಶೀಟರ್ ಒಬ್ಬನ ಭೀಕರ ಹತ್ಯೆಯಾಗಿದೆ.

- Advertisement -

ಹತ್ಯೆಯಾದ ರೌಡಿಶೀಟರ್‌ನನ್ನು ಮಂಜ ಅಲಿಯಾಸ್ ನೇಪಾಳಿ ಮಂಜ ಎಂದು ಗುರುತಿಸಲಾಗಿದೆ. ಹಬ್ಬದ ದಿನ ಮದ್ಯಪಾನ ಪಾರ್ಟಿಗೆ ಹೋಗಿದ್ದ ವೇಳೆ, ಎರಡು ಬೈಕ್‌ಗಳಲ್ಲಿ ಬಂದ ಹಂತಕರ ಪಡೆ ಕ್ಷಣಮಾತ್ರದಲ್ಲಿ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಲಾಂಗು ಮಚ್ಚುಗಳಿಂದ ತಲೆ, ಹೊಟ್ಟೆ, ಎದೆ ಕೈಗಳು ಹೀಗೆ ಸಿಕ್ಕ ಸಿಕ್ಕ ಕಡೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಹೆಬ್ಬಗೋಡಿ ರೌಡಿಶೀಟರ್ ಜಗ್ಗ ಅಲಿಯಾಸ್ ಜಗದೀಶ್ ಮತ್ತವನ ಗ್ಯಾಂಗ್ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಹೆಬ್ಬಗೋಡಿ ಸೇರಿದಂತೆ ಹಲವೆಡೆ ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಪ್ರಕರಣ ದಾಖಲಿಸಿದ್ದರು. ವಿರೋಧಿಗಳು ಹಾಗೂ ಪೊಲೀಸರ ಕಿರುಕುಳ ತಾಳಲಾರದೆ ಕುಣಿಗಲ್‌ನಲ್ಲಿ ಮನೆ ಮಾಡಿಕೊಂಡಿದ್ದ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪುಟ್ಟ ರಾಷ್ಟ್ರಗಳಿಂದ ಇಸ್ರೇಲ್, ರಷ್ಯಾ, ಅಮೆರಿಕ ಕಲಿಯುವುದು ಬಹಳಷ್ಟಿದೆ!

ನಿನ್ನೆ ಯುಗಾದಿ ಹಬ್ಬದಂದು ಸ್ನೇಹಿತರು ಕರೆದರೂ ಎಂದು ಕುಣಿಗಲ್​ನಿಂದ ಬೆಂಗಳೂರಿಗೆ ಮಂಜ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಮದ್ಯಪಾನ ಪಾರ್ಟಿ ಮಾಡುತ್ತಿದ್ದ. ಈ ವೇಳೆ 2 ಬೈಕ್​ನಲ್ಲಿ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನೂ ಕೊಂದಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು ಸೇರಿ ಭಾಷಾ ಶಿಕ್ಷಕರ ನೇಮಕಾತಿ: ಸರ್ಕಾರ ಮಾತಿಗೆ ತಪ್ಪಿದರೆ ತೀವ್ರ ಹೋರಾಟದ ಎಚ್ಚರಿಕೆ

ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...