ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್ ಕಾಮನ್ ಮೊಬಿಲಿಟಿ (ಎನ್‌ಸಿಎಂಸಿ) ಕಾರ್ಡ್‌ಗಳನ್ನು ಆಗಸ್ಟ್ 21 ರಿಂದ ಮಾರಾಟ ಮಾಡಲಾಗುತ್ತದೆ. ದೇಶಾದ್ಯಂತ ಪ್ರಯಾಣಕ್ಕೆ ಮತ್ತು ಶಾಪಿಂಗ್ ಅಗತ್ಯಗಳಿಗಾಗಿ ಈ ಒಂದೇ ಕಾರ್ಡ್ ಹೊಂದುವುದು ಅನುಕೂಲವಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಪುಸ್ತುತ ಬಳಕೆಯಲ್ಲಿರುವ ಕಾಂಟ್ಯಾಕ್ಸ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳು (ಸಿಎಸ್‌ಸಿ) ಕ್ಲೋಸ್ ಲೂಪ್ ಕಾರ್ಡ್‌ಗಳಾಗಿವೆ. ಈ ಕಾರ್ಡ್ ಅನ್ನು ನಮ್ಮ ಮೆಟ್ರೋ ಪ್ರಯಾಣದಲ್ಲಿ ಮಾತ್ರ ಬಳಸಬಹುದಾಗಿದ. ‘ಒನ್ ನೇಷನ್ ಒನ್ ಕಾರ್ಡ್’ ಅನುಗುಣವಾಗಿ ರುಪೇ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ತೆರೆದ ಲೂಪ್ ಕಾರ್ಡ್‌ಗಳಾಗಿವೆ. ಈ ಕಾರ್ಡ ಅನ್ನು ದೇಶದ ಎಲ್ಲ ಸಾರಿಗೆ ವ್ಯವಸ್ಥೆಗಳಲ್ಲಿ ಹಾಗೂ ಹೆಚ್ಚುವರಿಯಾಗಿ ರಿಟೇಲ್ ಅಂಗಡಿ, ಪೆಟ್ರೋಲ್ ಬಂಕ್‌ಗಳು, ಶಾಪಿಂಗ್ ಇತ್ಯಾದಿ ಅಗತ್ಯಗಳಿಗಾಗಿ ಬಳಸಲು ಅನುಕೂಲವಾಗುತ್ತದೆ” ಎಂದು ತಿಳಿಸಿದೆ.
“ಆಗಸ್ಟ್ 21 ರಿಂದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ರುಪೇ ಎನ್‌ಸಿಎಂಸಿ ಕಾರ್ಡ್‌ಗಳು ಖರೀದಿಗೆ ಲಭ್ಯವಿರುತ್ತದೆ. ರುಪೇ ಎನ್‌ಸಿಎಂಸಿ ಕಾರ್ಡ್ ತ್ವರಿತ ವಿತರಣೆಗಾಗಿ, ಪ್ರಯಾಣಿಕರು ತಮ್ಮ ಗ್ರಾಹಕರ ವಿವರಗಳನ್ನು (KYC), ‘NAMMAMETRO.AGSINDIA.COM’, ‘BMRCL RBL Bank NCMC’ ಅಪ್ಲಿಕೇಶನ್‌ನಲ್ಲಿ `ಸ್ವಯಂ-ನೋಂದಣಿ ಮಾಡಿಕೊಂಡು, ನೋಂದಣಿ ಸಂಖ್ಯೆ / ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಟಿಕೆಟ್ ಕೌಂಟರ್ ಇರುವ ನಿರ್ವಾಹಕರಿಗೆ ತಿಳಿಸಬೇಕು. ಕಾರ್ಡ್‌ನ ಮಾರಾಟ ಬೆಲೆ ₹50 ಇದೆ” ಎಂದು ತಿಳಿಸಿದೆ.
“ಸ್ಮಾರ್ಟ್ ಕಾರ್ಡ್‌ಗಳಲ್ಲಿ ಲಭ್ಯವಿರುವ ಶೇ.5 ಪ್ರಯಾಣ ದರದ ರಿಯಾತಿಯು ಎನ್‌ಸಿಎಂಸಿ ಕಾರ್ಡ್‌ಗಳಿಗೂ ಅನ್ವಯವಾಗುತ್ತದೆ. ಈ ಕಾರ್ಡ್‌ಗಳು ಎಲ್ಲ ಆರ್‌ಬಿಎಲ್ ಬ್ಯಾಂಕ್ ಶಾಖೆಗಳಲ್ಲೂ ಲಭ್ಯವಿರುತ್ತದೆ. ಪ್ರಯಾಣಕ್ಕೆ ಮತ್ತು ಶಾಪಿಂಗೆ ಬೇಕಾಗಿರುವ ನಾನಾ ಕಾರ್ಡ್‌ಗಳ ಅಗತ್ಯತೆಯನ್ನು ಕಡಿಮೆ ಮಾಡುವ ಸಲುವಾಗಿ ನಮ್ಮ ಮೆಟ್ರೋ ಮುಂದಿನ ದಿನಗಳಲ್ಲಿ ಕಾಂಟ್ಯಾಕ್ಟಸ್ ಸ್ಮಾರ್ಟ್ ಕಾರ್ಡ್‌ಗಳನ್ನು (CSC) ಹಂತ ಹಂತವಾಗಿ ತೆಗೆದುಹಾಕಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ
“ರುಪೇ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಮೆಟ್ರೋ ನಿಲ್ದಾಣಗಳಲ್ಲಿ ಕಾರ್ಯಾಚರಣೆಯ ಸಮಯದಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ. ಕಾಂಟ್ಯಾಕ್ಟಸ್ ಸ್ಮಾರ್ಟ್ ಕಾರ್ಡ್‌ಗಳು (ಸಿಎಸ್‌ಸಿ) ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಮತ್ತು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಮಾರಾಟಕ್ಕೆ ಲಭ್ಯವಿರುತ್ತದೆ” ಎಂದು ಮಾಹಿತಿ ನೀಡಿದೆ.