ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ: ಬೆಸ್ಕಾಂನಿಂದ ದೂರು ದಾಖಲು

Date:

Advertisements
  • ಇದುವರೆಗೆ ಐದು ಪ್ರಕರಣಗಳು ಬೆಸ್ಕಾಂ ಗಮನಕ್ಕೆ ಬಂದಿದೆ
  • ಉದ್ಯೋಗ ಆಕಾಂಕ್ಷಿಗಳಿಗೆ ಕಳುಹಿಸಿ ವ್ಯವಸ್ಥಿತವಾಗಿ ವಂಚನೆ

ಬೆಸ್ಕಾಂನಲ್ಲಿ ಮಾಪನ ಓದುಗ ಹುದ್ದೆ, ಕಿರಿಯ ಸಹಾಯಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಿ ಕೆಪಿಟಿಸಿಎಲ್‌ ಹಾಗೂ ಬೆಸ್ಕಾಂ ಹೆಸರಿನ ಲೆಟರ್‌ ಹೆಡ್‌ನಲ್ಲಿ ನಕಲಿ ನೇಮಕ ಪ್ರಮಾಣ ಪತ್ರಗಳನ್ನು ಸೃಷ್ಟಿಸಿ ಅಭ್ಯರ್ಥಿಗಳಿಗೆ ವಿತರಿಸುತ್ತಿರುವ ಪ್ರಕರಣದ ಕುರಿತು ಬೆಸ್ಕಾಂ ವಿಧಾನಸೌಧದ ಪೊಲೀಸ್‌ ಠಾಣೆಗೆ ದೂರು ನೀಡಿದೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಸೂಚನೆ ಮೇರೆಗೆ ಪ್ರಧಾನ ವ್ಯವಸ್ಥಾಪಕ (ಆಡಳಿತ ಮತ್ತು ಮಾನವ ಸಂಪನ್ಮೂಲ) ಸಿ.ಎನ್. ಮಂಜುನಾಥ್‌ ಅವರು ವಿಧಾನಸೌಧ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದುವರೆಗೆ ಐದು ಪ್ರಕರಣಗಳು ಬೆಸ್ಕಾಂ ಗಮನಕ್ಕೆ ಬಂದಿದ್ದು, ಅಧಿಕೃತ ಜ್ಞಾಪನ ಪತ್ರ / ಸುತ್ತೋಲೆ ಎಂಬ ನಕಲಿ ನೇಮಕ ಆದೇಶಗಳನ್ನು ವಿದ್ಯುತ್‌ ಸರಬರಾಜು ಕಂಪನಿ ಹಾಗು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಹೆಸರಿನಲ್ಲಿ ಹಲವು ಉದ್ಯೋಗ ಆಕಾಂಕ್ಷಿ ವ್ಯಕ್ತಿಗಳಿಗೆ ಕಳುಹಿಸಿ ವ್ಯವಸ್ಥಿತವಾಗಿ ವಂಚಿಸಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

Advertisements

ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ನಿಂದ ಉದ್ಯೋಗ ಆಕಾಂಕ್ಷಿಗಳಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ಸುತ್ತೋಲೆಗಳನ್ನು ಕಳುಹಿಸುವುದಿಲ್ಲ. ಇದೊಂದು ಉದ್ಯೋಗ ವಂಚನೆಯ ಜಾಲವಾಗಿದ್ದು, ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ಹೆಸರಿನಲ್ಲಿ ನಿರುದ್ಯೋಗಿ ಯುವಕ-ಯುವತಿಯರನ್ನು ವಂಚಿಸಿ ಹಣ ಪಡೆಯಲಾಗುತ್ತಿದೆ ಮತ್ತು ಕಂಪನಿಗೆ ಕೆಟ್ಟ ಹೆಸರು ತರುವ ಉದ್ದೇಶ ಇದರಲ್ಲಿ ಅಡಗಿದೆ ಎಂದು ಪ್ರಧಾನ ವ್ಯವಸ್ಥಾಪಕರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ನಕಲಿ ನೇಮಕ ಪ್ರಮಾಣ ಪತ್ರ ಹಂಚಿ ಉದ್ಯೋಗ ಆಕಾಂಕ್ಷಿಗಳನ್ನು ವಂಚಿಸುತ್ತಿರುವ ಜಾಲವನ್ನು ಪತ್ತೆ ಹಚ್ಚಿ ವಂಚಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಬೆಸ್ಕಾಂ ದೂರಿನಲ್ಲಿ ಕೋರಿದೆ.

ವಂಚನೆಯ ವಿವರ

ಕೆಪಿಟಿಸಿಎಲ್‌ ಹಾಗೂ ಬೆಸ್ಕಾಂ ಹೆಸರಿನ ಲೆಟರ್‌ ಹೆಡ್‌ನಲ್ಲಿ ಅಭ್ಯರ್ಥಿಗಳಿಗೆ ನೇರ ನೇಮಕಾತಿಯ ಸುತ್ತೋಲೆಯನ್ನು ಕಳುಹಿಸಲಾಗುತ್ತಿದೆ. ಮಾಪನ ಓದುಗ ಹುದ್ದೆ ಮತ್ತು ಕಿರಿಯ ಸಹಾಯಕರ ಹುದ್ದೆಗೆ ನೇಮಕ ಮಾಡಲು ಬೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು, ಅಧೀಕ್ಷಕ ಇಂಜಿನಿಯರ್‌ ಅವರು ಸಹಿ ಮಾಡಿದ ರೀತಿಯಲ್ಲಿ, ನಕಲಿ ನೇಮಕ ಪ್ರಮಾಣ ಪತ್ರಗಳನ್ನು ಸಿದ್ಧಪಡಿಸಿ ಅವುಗಳನ್ನು ವಾಟ್ಸ್‌ ಆಪ್‌ ಮೂಲಕ ಅಭ್ಯರ್ಥಿಗಳಿಗೆ ಕಳುಹಿಸಲಾಗುತ್ತಿದೆ.

ಈಗಾಗಲೇ ಮಾಪಕ ಓದುಗ ಮತ್ತು ಕಿರಿಯ ಸಹಾಯಕ ಹುದ್ದೆಗೆ ನಕಲಿ ನೇಮಕ ಆದೇಶಗಳನ್ನು ಸೃಷ್ಠಿಸಿ ನಾಗೇಶ್‌, ಆರ್.‌ಕೆ.ಸಿದ್ದೇಶ, ಎ.ಅನು, ಹೆಚ್.‌ಟಿ.ದಿವ್ಯ, ಹಾಗು ಜಿ.ಎಸ್.‌ಸುಹಾಸ್‌ ಎಂಬುವರಿಗೆ ಕಳುಹಿಸಿ ಕೊಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹7 ಕೋಟಿ ಹಣ ಪತ್ತೆ; ಐಎಎಸ್ ಅಧಿಕಾರಿ ಸ್ಥಳಕ್ಕೆ ಬಂದ ನಂತರ ಹಣ ಮಾಯ!

ನಾಲ್ಕು ಪ್ರಕರಣಗಳ ಬಗ್ಗೆ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಮಾರ್ಚ್‌ 17 ರಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ದೂರು ನೀಡಿದ್ದು, ಎಫ್‌ ಐಆರ್‌ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಸುಹಾಸ್‌ ಎನ್ನುವರಿಗೆ ಕಿರಿಯ ಸಹಾಯಕ ಹುದ್ದೆಗೆ ನಕಲಿ ನೇಮಕ ಆದೇಶ ನೀಡಿರುವ ಪ್ರಕರಣದ ಕುರಿತು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ನೀಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X