- ವಿರೋಧದ ನಡುವೆಯೂ ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ
- ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗೆ ಹಾಜರಾಗುವವರಿಗೆ ಪ್ರಯಾಣ ಉಚಿತ
ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ಆಗಸ್ಟ್ 21ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ಬೆನ್ನಲ್ಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ, “ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದೆ.
“ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಅಂದರೆ ಆಗಸ್ಟ್ 21 ರಿಂದ ಸೆಪ್ಟೆಂಬರ್ 2 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದೆ.
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿಯೂ ಉಚಿತ ಪ್ರಯಾಣ
“ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ, ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು” ಎಂದು ಕೆಎಸ್‌ಆರ್‌ಟಿಸಿ ಹೇಳಿದೆ.
ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ | ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರ ವಿರೋಧದ ನಡುವೆಯೂ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ.
2ನೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ
ಆ. 21ರಂದು ಕನ್ನಡ, ಅರೇಬಿಕ್
ಆ. 22 ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಬೇಸಿಕ್ ಮ್ಯಾಥ್ಸ್
ಆ. 23 ಸಮಾಜ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಆ. 24 ಲಾಜಿಕ್, ಹಿಂದೂಸ್ಥಾನಿ ಮ್ಯೂಸಿಕ್, ಬ್ಯುಸಿನೆಸ್ ಸ್ಟಡೀಸ್
ಆ. 25 ಇತಿಹಾಸ, ಸ್ಟಾಟಸ್ಟಿಕ್ಸ್
ಆ. 26 ಇನರ್ಮೇಷನ್ ಟೆಕ್ನಾಲಜಿ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇಸ್, ಬ್ಯೂಟಿ ಆಂಡ್ ವೆಲ್ನೆಸ್
ಆ. 28 ಜಿಯೋಗ್ರಾಫಿ, ಸೈಕಾಲಜಿ, ಫಿಜಿಕ್ಸ್
ಆ. 29 ಅಕೌಂಟ್ಸ್, ಜಿಯಾಲಜಿ, ಎಜುಕೇಷನ್, ಹೋಂ ಸೈನ್ಸ್
ಆ. 30 ಪೊಲಿಟಿಕಲ್ ಸೈನ್ಸ್, ಮ್ಯಾಥಮೆಟಿಕ್ಸ್
ಆ. 31 ಹಿಂದಿ
ಸೆಪ್ಟೆಂಬರ್. 1ರಂದು ಎಕನಾಮಿಕ್ಸ್, ಬಯಾಲಜಿ
ಸೆ. 2ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್