ಏನೇನಕ್ಕೋ ಜೈಲಿಗೆ ಹೋಗ್ತಿರಾ ರಾಜ್ಯದ ಹಿತಕ್ಕಾಗಿ ಜೈಲಿಗೆ ಹೋಗಲು ಆಗಲ್ಲವಾ?: ಮುಖ್ಯಮಂತ್ರಿ ಚಂದ್ರು

Date:

Advertisements

“ಮೇಕೆದಾಟು ಯೋಜನೆ ಜಾರಿಗೆ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದ್ದೀರಲ್ಲಾ ಏನು ಕಡಿದು ಕಟ್ಟೆ ಹಾಕಿದ್ದೀರಾ? ಮೇಕೆದಾಟು ಯೋಜನೆ ಯಾಕೆ ಪ್ರಾರಂಭಿಸಿಲ್ಲ. ಅಧಿವೇಶನ ಕರೆದು ನೀರು ಬಿಡಲ್ಲ ಎಂದು ನಿರ್ಣಯ ಮಾಡಿ, ಸುಪ್ರೀಂಕೋರ್ಟ್‌ಗೂ ವಿಚಾರ ತಿಳಿಸಿ, ಕೋರ್ಟ್ ಛೀಮಾರಿ ಹಾಕಬಹುದು, ಜೈಲಿಗೆ ಹಾಕಬಹುದು, ಏನೇನಕ್ಕೋ ಜೈಲಿಗೆ ಹೋಗ್ತಿರಾ ರಾಜ್ಯದ ಹಿತಕ್ಕಾಗಿ ಜೈಲಿಗೆ ಹೋಗಲು ಆಗಲ್ಲವಾ” ಎಂದು ರಾಜ್ಯ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಕ್ಷದ ರಾಜ್ಯಾಧಕ್ಷ ಮುಖ್ಯಮಂತ್ರಿ ಚಂದ್ರು ಗುಡುಗಿದರು.

ಕುಡಿಯುವ ನೀರಿನ ಅಗತ್ಯತೆ ಅರಿಯದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಅವೈಜ್ಞಾನಿಕ ಆದೇಶ ಖಂಡಿಸಲು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ ಸಂಘಟನೆಗಳ ಒಕ್ಕೂಟ, ಆಮ್ ಆದ್ಮಿ ಪಕ್ಷ, ಮತ್ತಿತರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಒಟ್ಟಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಕಾವೇರಿ ಹೋರಾಟದ ಜಾಗೃತಿ ಸಭೆ ನಡೆಯಿತು.

ಕಾವೇರಿ ಹೋರಾಟದ ಜಾಗೃತಿ ಸಭೆಯಲ್ಲಿ ಸೆಪ್ಟೆಂಬರ್ 26ಕ್ಕೆ ಬೆಂಗಳೂರು ಬಂದ್‌ ಘೋಷಿಸಲಾಗಿದೆ. ಕಾವೇರಿ ನದಿ ಭಾಗದ ಎಲ್ಲ ಜಿಲ್ಲೆಯ ಜನರು ಬೆಂಗಳೂರು ಬಂದ್‌ಗೆ ಬೆಂಬಲಿಸುವಂತೆ ಕರೆ ನೀಡಲಾಗಿದೆ.

Advertisements

ಮುಂದುವರೆದು ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ನಾಡು, ನುಡಿ, ಜನ ರಕ್ಷಣೆ ಬಂದಾಗ ಆಮ್ ಆದ್ಮಿ ಪಕ್ಷ ಭೇದಭಾವ ಇಲ್ಲದೆ, ಹೋರಾಟ ಮಾಡುತ್ತದೆ. ಒಂದು ಕೋಟಿಗೂ ಹೆಚ್ಚು ಜನ ಬೆಂಗಳೂರಿನಲ್ಲಿದ್ದು, ಬೆಂಗಳೂರಿಗೆ 1450 ಎಂಎಲ್‌ಡಿ ನೀರು ಬೇಕು. ಒಬ್ಬ ವ್ಯಕ್ತಿಗೆ ಒಂದು ದಿನಕ್ಕೆ 150 ಲೀಟರ್ ನೀರು ಬೇಕು. ಆದರೆ, ಈಗ 108 ಲೀಟರ್ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ” ಎಂದರು.

“ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆಯಾಗಲಿದೆ. ಇಷ್ಟು ವರ್ಷ ಅಧಿಕಾರ ನಡೆಸಿದ ಮೂರು ಪಕ್ಷಗಳು, ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವಲ್ಲಿ ವಿಫಲವಾಗಿವೆ. ನಿಮಗೆ ನಾಡಿನ ಹಿತ ಕಾಪಾಡುವ ಬದ್ಧತೆ ಇಲ್ಲವಾ?” ಎಂದು ಪ್ರಶ್ನಿಸಿದರು.

ಬೆಂಗಳೂರಿನ ಜನ ಹೋರಾಟ ಮಾಡಲಿ

“ಬೆಂಗಳೂರಿನಲ್ಲಿ 1.30 ಲಕ್ಷ ಜನ ಇದ್ದು, ಇದರಲ್ಲಿ 65 ಲಕ್ಷ ಜನ ಬೇರೆ ಭಾಷಿಕರು ಇದ್ದಾರೆ. ಅವರಿಗೂ ಕುಡಿಯುವ ನೀರಿನ ಅವಶ್ಯಕತೆ ಇದೆ. 45 ದಿನಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಿದ್ದರೂ ಬೆಂಗಳೂರಿನ ಜನ ಮಲಗಿದ್ದಾರೆ. ಇದು ಸರಿಯಲ್ಲ” ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

“ಯಾವುದೇ ಭಾಷಿಕರು ಆದರೂ ಕುಡಿಯಲು, ಬಳಸಲು ನೀರು ಮುಖ್ಯ ಆದ್ದರಿಂದ ಎಲ್ಲರೂ ಈ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಜನರ ಬದುಕು ಮುಖ್ಯ, ಯಾವುದೇ ಆದೇಶ ಏನೂ ಮಾಡಲು ಆಗಲ್ಲ. ಕುಡಿಯುವ ನೀರಿಗೆ ಆದ್ಯತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಪೌರ ಕಾರ್ಮಿಕ ದಿನಾಚರಣೆಯ ಜೊತೆಗೆ ತಾರತಮ್ಯ, ಅವಮಾನ, ಶೋಷಣೆಯೂ ಇದೆ…

ಸಹಿ ಸಂಗ್ರಹ ಚಳವಳಿ

ಎಎಪಿ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, “ಬೆಂಗಳೂರಿನ ಜನ ಬೀದಿಗಿಳಿಯುವುದು ಕಷ್ಟ ಎನ್ನಲಾಗುತ್ತದೆ. ಆದರೆ, ಸ್ಟೀಲ್ ಫ್ಲೈ ಓವರ್ ವಿಚಾರದಲ್ಲಿ ಬೆಂಗಳೂರಿಗರು ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಮಾಡಿದ್ದರು. ಅಂತಹ ಕೆಲಸ ಮತ್ತೆ ಆಗಬೇಕು. ಮಾತ್ರವಲ್ಲದೆ ನಾವೇ ಜನರ ಬಳಿ ಹೋಗಿ ಸಹಿ ಸಂಗ್ರಹಣೆ ಮಾಡಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಎಎಪಿ ಸಂಪೂರ್ಣ ಬೆಂಬಲ ನೀಡುತ್ತದೆ” ಎಂದು ಹೇಳಿದರು.

ಆಮ್ ಆದ್ಮಿ ಪಕ್ಷ, ರೈತ ಸಂಘಟನೆಗಳ ಒಕ್ಕೂಟ ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟ ಮತ್ತಿತರ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X