ಆ. 15ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌: ಬಿಎಂಆರ್‌ಸಿಎಲ್‌

Date:

Advertisements

ಸಸ್ಯಕಾಶಿಯಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ನೋಡಲು ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಆ.15 ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪರಿಚಯಿಸಲಿದೆ.

“ಆಗಸ್ಟ್‌ 15ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ಬಾಗ್‌ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ₹30 ಟಿಕೆಟ್ ದರ ನಿಗದಿಪಡಿಸಲಾಗಿದೆ. ಈ ಪೇಪರ್ ಟಿಕೆಟ್ ನಿಗದಿ ಮಾಡಿದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ” ಎಂದು ಹೇಳಿದೆ.

“ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಈ ಟಿಕೆಟ್ ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತದೆ” ಎಂದು ತಿಳಿಸಿದೆ.

Advertisements

“ಮೆಟ್ರೋ ಪುಯಾಣಿಕರು ಲಾಲ್‌ಬಾಗ್ ನಿಲ್ದಾಣದ ಎಎಫ್‌ಸಿ ಗೇಟ್‌ಗಳಲ್ಲಿ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ಗಳನ್ನು ಹಾಜರಿಪಡಿಸಬೇಕು” ಎಂದು ಹೇಳಿದೆ.

ಆಗಸ್ಟ್‌ 15ರಂದು 214ನೇ ಫಲಪುಷ್ಪ ಪ್ರದರ್ಶನ ಮುಕ್ತಾಯ

ರಾಜಧಾನಿ ಬೆಂಗಳೂರಿನ ಸಸ್ಯಕಾಶಿಯಲ್ಲಿ ನಡೆಯುತ್ತಿರುವ 214ನೇ ಫಲಪುಷ್ಪ ಪ್ರದರ್ಶನ ಆಗಸ್ಟ್‌ 15ರಂದು ಮುಕ್ತಾಯಗೊಳ್ಳಲಿದೆ. ಇಲ್ಲಿಯವರೆಗೂ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ನಾಲ್ಕು ಲಕ್ಷ ಮಂದಿ ಭೇಟಿ ನೀಡಿದ್ದಾರೆ.

ಆಗಸ್ಟ್‌ 4ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 214ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದರು. ಈ ಬಾರಿ ಪ್ರದರ್ಶನವನ್ನು ಕರ್ನಾಟಕದ ಎರಡನೇ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರಿಗೆ ಅರ್ಪಿಸಲಾಗಿತ್ತು. ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ನಾನಾ ತರಹದ ಹೂವುಗಳಿಂದ ಅಲಂಕರಿಸಲಾಗಿದ್ದ ವಿಧಾನಸೌಧ ಈ ಬಾರಿ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿತ್ತು. ಇದರ ಪಕ್ಕದಲ್ಲಿಯೇ ಕೆಂಗಲ್ ಹನುಮಂತಯ್ಯ ಅವರ 14 ಅಡಿಯ ಪ್ರತಿಮೆ ಕಂಗೋಳಿಸುತ್ತಿತ್ತು.

ಆಗಸ್ಟ್‌ 15ರಂದು ಕೊನೆ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರಿಗೆ ಬೆಳಗ್ಗೆ 7ರಿಂದ ಸಾಯಂಕಾಲ 7 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ಹಿರಿಯರಿಗೆ ₹70, ಮಕ್ಕಳಿಗೆ ₹30 ಹಾಗೂ ಗುರುತಿನ ಚೀಟಿ ಹೊಂದಿದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರದರ್ಶನ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಭಾನುವಾರ 20,000 ವಿದ್ಯಾರ್ಥಿಗಳು ಸೇರಿದಂತೆ ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದರು. ಆಗಸ್ಟ್‌ 4 ರಿಂದ ಆಗಸ್ಟ್ 13ರವರೆಗೆ ಫಲಪುಷ್ಪ ಪ್ರದರ್ಶನದಿಂದ ಬರೋಬ್ಬರಿ ₹1.8 ಕೋಟಿ ಮೌಲ್ಯದ ಟಿಕೆಟ್‌ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ.

ವರ್ಷದಲ್ಲಿ ಎರಡು ಬಾರಿ ಅಂದರೆ ಗಣರಾಜ್ಯ ಮತ್ತು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತದೆ. ಪ್ರತಿ ಬಾರಿ ಹೊಸ ವಿಶೇಷದೊಂದಿಗೆ ಸಂಪೂರ್ಣ ಲಾಲ್‌ಬಾಗ್‌ ಅನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ. ಕಳೆದ 200 ವರ್ಷಗಳಿಂದ ಈ ಪ್ರದರ್ಶನ ನಡೆದುಕೊಂಡು ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X