ಆ. 15ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌: ಬಿಎಂಆರ್‌ಸಿಎಲ್‌

Date:

ಸಸ್ಯಕಾಶಿಯಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ನೋಡಲು ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಆ.15 ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪರಿಚಯಿಸಲಿದೆ.

“ಆಗಸ್ಟ್‌ 15ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ಬಾಗ್‌ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ₹30 ಟಿಕೆಟ್ ದರ ನಿಗದಿಪಡಿಸಲಾಗಿದೆ. ಈ ಪೇಪರ್ ಟಿಕೆಟ್ ನಿಗದಿ ಮಾಡಿದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ” ಎಂದು ಹೇಳಿದೆ.

“ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಈ ಟಿಕೆಟ್ ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತದೆ” ಎಂದು ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೆಟ್ರೋ ಪುಯಾಣಿಕರು ಲಾಲ್‌ಬಾಗ್ ನಿಲ್ದಾಣದ ಎಎಫ್‌ಸಿ ಗೇಟ್‌ಗಳಲ್ಲಿ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ಗಳನ್ನು ಹಾಜರಿಪಡಿಸಬೇಕು” ಎಂದು ಹೇಳಿದೆ.

ಆಗಸ್ಟ್‌ 15ರಂದು 214ನೇ ಫಲಪುಷ್ಪ ಪ್ರದರ್ಶನ ಮುಕ್ತಾಯ

ರಾಜಧಾನಿ ಬೆಂಗಳೂರಿನ ಸಸ್ಯಕಾಶಿಯಲ್ಲಿ ನಡೆಯುತ್ತಿರುವ 214ನೇ ಫಲಪುಷ್ಪ ಪ್ರದರ್ಶನ ಆಗಸ್ಟ್‌ 15ರಂದು ಮುಕ್ತಾಯಗೊಳ್ಳಲಿದೆ. ಇಲ್ಲಿಯವರೆಗೂ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ನಾಲ್ಕು ಲಕ್ಷ ಮಂದಿ ಭೇಟಿ ನೀಡಿದ್ದಾರೆ.

ಆಗಸ್ಟ್‌ 4ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 214ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದರು. ಈ ಬಾರಿ ಪ್ರದರ್ಶನವನ್ನು ಕರ್ನಾಟಕದ ಎರಡನೇ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರಿಗೆ ಅರ್ಪಿಸಲಾಗಿತ್ತು. ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ನಾನಾ ತರಹದ ಹೂವುಗಳಿಂದ ಅಲಂಕರಿಸಲಾಗಿದ್ದ ವಿಧಾನಸೌಧ ಈ ಬಾರಿ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿತ್ತು. ಇದರ ಪಕ್ಕದಲ್ಲಿಯೇ ಕೆಂಗಲ್ ಹನುಮಂತಯ್ಯ ಅವರ 14 ಅಡಿಯ ಪ್ರತಿಮೆ ಕಂಗೋಳಿಸುತ್ತಿತ್ತು.

ಆಗಸ್ಟ್‌ 15ರಂದು ಕೊನೆ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರಿಗೆ ಬೆಳಗ್ಗೆ 7ರಿಂದ ಸಾಯಂಕಾಲ 7 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ಹಿರಿಯರಿಗೆ ₹70, ಮಕ್ಕಳಿಗೆ ₹30 ಹಾಗೂ ಗುರುತಿನ ಚೀಟಿ ಹೊಂದಿದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರದರ್ಶನ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಭಾನುವಾರ 20,000 ವಿದ್ಯಾರ್ಥಿಗಳು ಸೇರಿದಂತೆ ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದರು. ಆಗಸ್ಟ್‌ 4 ರಿಂದ ಆಗಸ್ಟ್ 13ರವರೆಗೆ ಫಲಪುಷ್ಪ ಪ್ರದರ್ಶನದಿಂದ ಬರೋಬ್ಬರಿ ₹1.8 ಕೋಟಿ ಮೌಲ್ಯದ ಟಿಕೆಟ್‌ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ.

ವರ್ಷದಲ್ಲಿ ಎರಡು ಬಾರಿ ಅಂದರೆ ಗಣರಾಜ್ಯ ಮತ್ತು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತದೆ. ಪ್ರತಿ ಬಾರಿ ಹೊಸ ವಿಶೇಷದೊಂದಿಗೆ ಸಂಪೂರ್ಣ ಲಾಲ್‌ಬಾಗ್‌ ಅನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ. ಕಳೆದ 200 ವರ್ಷಗಳಿಂದ ಈ ಪ್ರದರ್ಶನ ನಡೆದುಕೊಂಡು ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಗಣೇಶ ಹಬ್ಬ: ಶನಿವಾರ ಮಾಂಸ ಮಾರಾಟ ನಿಷೇಧ

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರ ಶನಿವಾರ ಬೆಂಗಳೂರಿನಲ್ಲಿ ಮಾಂಸ...

ಭಾರತ ಕೇಂದ್ರೀಯ ವ್ಯವಸ್ಥೆಯಲ್ಲ, ಒಕ್ಕೂಟ ವ್ಯವಸ್ಥೆ: ರಹಮತ್ ತರೀಕೆರೆ

ಕವಿರಾಜಮಾರ್ಗದ ಪದ್ಯದಲ್ಲಿ ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ನಾಡು ಇದೆ ಎಂದು ಹೇಳುತ್ತದೆ....

ಗಣೇಶ ಚತುರ್ಥಿ | ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ಕಲ್ಯಾಣಿ ವ್ಯವಸ್ಥೆ, ಮಾಂಸ ಮಾರಾಟ ನಿಷೇಧ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ...

ಬೆಂಗಳೂರು | ಬಂಜಾರ ಸಂಸ್ಕೃತಿ, ಕಲೆಗೆ ರಾಷ್ಟ್ರೀಯ ಮಹತ್ವವಿದೆ: ಡಾ. ಎ ಆರ್ ಗೋವಿಂದಸ್ವಾಮಿ

ಬಂಜಾರ ಸಂಸ್ಕೃತಿ ಮತ್ತು ಕಲೆಗೆ ರಾಷ್ಟ್ರಮಟ್ಟದಲ್ಲಿ ಮಹತ್ವವಿದೆ ಎಂದು ಬಂಜಾರ ಸಂಸ್ಕೃತಿ...