ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Date:

Advertisements

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈ ನ್ಯಾಯಾಲಯವು, ಆರು ತಿಂಗಳು ಜೈಲು ಶಿಕ್ಷೆ ಜತೆಗೆ ₹5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಜಯಪ್ರದಾ ಅವರು ಚೆನ್ನೈನಲ್ಲಿ ರಾಮ್​ ಕುಮಾರ್​ ಮತ್ತು ರಾಜ ಬಾಬು ಜತೆಗೆ ಸೇರಿ ಎರಡು ಚಿತ್ರಮಂದಿರ ನಡೆಸುತ್ತಿದ್ದರು. ಚಿತ್ರಮಂದಿರದಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್​ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ, ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಪಾವತಿ ಮಾಡುತ್ತಿರಲಿಲ್ಲ.

ತಮ್ಮ ಪಾಲಿನ ಇಎಸ್​ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ಆರೋಪಿಸಿ, ರಾಜ್ಯ ವಿಮಾ ನಿಗಮದ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ಚೆನ್ನೈನ ಎಗ್ಮೋರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.

Advertisements

ಈ ಹಿಂದೆ ಜಯಪ್ರದಾ ಸೇರಿದಂತೆ ಮೂವರು ಮದ್ರಾಸ್ ಹೈಕೋರ್ಟ್‌ನಲ್ಲಿ ಈ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದರು. ಆದರೆ, ಚೆನ್ನೈ ಎಗ್ಮೋರ್ ನ್ಯಾಯಾಲಯವು ಜಯಪ್ರದಾ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಈ ಸುದ್ದಿ ಓದಿದ್ದೀರಾ? ಪತ್ರಕರ್ತರಲ್ಲಿ ಪ್ರಶ್ನೆ ಮಾಡುವ ಸೂಕ್ಷ್ಮತೆ ಕ್ಷೀಣ: ಹಿರಿಯ ಪತ್ರಕರ್ತ ರುದ್ರಣ್ಣ ಹರ್ತಿಕೋಟೆ

ಜಯಪ್ರದಾ ಮತ್ತು ಇತರ ಇಬ್ಬರಿಗೆ ತಲಾ ₹5000 ದಂಡ ಹಾಗೂ 6 ತಿಂಗಳು ಜೈಲು ವಿಧಿಸಿದೆ.

ಈ ಹಿಂದೆಯೂ ಕೂಡ ಜಯಪ್ರದಾ ಅವರು ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು ₹20 ಲಕ್ಷ ತೆರಿಗೆ ಹಣವನ್ನು ಪಾವತಿ ಮಾಡಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟ​ರಿನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು.

ಜಯಪ್ರದಾ ಅವರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ರಾಜಕೀಯದಲ್ಲಿಯೂ ಸಕ್ರೀಯವಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X