ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ; ಈ ವರ್ಷದ ಅಂತ್ಯದಲ್ಲಿ ಚುನಾವಣೆ

Date:

Advertisements
  • 2021ರಲ್ಲಿ ವಾರ್ಡ್‌ ಮರುವಿಂಗಡಣೆ ಮಾಡಿದ್ದ ಹಿಂದಿನ ಬಿಜೆಪಿ ಸರ್ಕಾರ
  • ವಾರ್ಡ್ ಜನಸಂಖ್ಯೆಯ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಕೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ಈ ಹಿಂದೆ 198 ವಾರ್ಡ್‌ ಹೊಂದಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ 2021ರ ಜನವರಿ 29ರಂದು ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು ಮರುವಿಂಗಡಣೆ ಮಾಡಿ 198 ರಿಂದ 243ಕ್ಕೆ ಏರಿಕೆ ಮಾಡಿ ಅಧಿಸೂಚನೆ ಹೊರಡಿಸಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರ ತಕ್ಷಣ ಜಾರಿಗೆ ಬರುವಂತೆ ಈ ಅಧಿಸೂಚನೆಯನ್ನು ಹಿಂಪಡೆದಿದೆ.

ಬಿಬಿಎಂಪಿ ಕಾಯಿದೆ-2020ರ 7ನೇ ಪ್ರಕರಣದ (3)ನೇ ಉಪಪ್ರಕರಣದ ಖಂಡ (ಎ)ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ತಕ್ಷಣಕ್ಕೆ ಜಾರಿಗೆ ಬರುವಂತೆ ವಾರ್ಡ್‌ಗಳ ಸಂಖ್ಯೆಯನ್ನು ಇಳಿಕೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.  

Advertisements

ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ ವಾರ್ಡ್‌ ವಿಂಗಡಣೆ ಅವೈಜ್ಞಾನಿಕವಾಗಿದೆ ಎಂದು ಹಲವು ಆರೋಪಗಳು ಬಂದಿದ್ದವು. ಕಾಂಗ್ರೆಸ್‌ನ ಮಾಜಿ ಮೇಯರ್ ಮಂಜುನಾಥರೆಡ್ಡಿ ಸೇರಿದಂತೆ ಮತ್ತಿತರು ಹೈಕೋರ್ಟ್‌ಗೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಕಳೆದ ಜೂನ್ 19ರಂದು ಹಳೆಯ ವಾರ್ಡ್‌ ವಿಂಗಡಣೆ ರದ್ದು ಮಾಡಿ, ಹೊಸದಾಗಿ ಬಿಬಿಎಂಪಿ ವಾರ್ಡ್‌ಗಳನ್ನು ವಿಂಗಡಣೆ ಮಾಡುವಂತೆ ಆದೇಶಿಸಿತ್ತು. 12 ವಾರಗಳ ಒಳಗಾಗಿ ಈ ವಿಂಗಡಣೆ ಮಾಡುವಂತೆ ನಿದೇಶಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಂ-ಮೈ ಹೆದ್ದಾರಿ| ಕಟ್ಟುನಿಟ್ಟಿನ ಕ್ರಮಗಳ ಬಳಿಕ ಅಪಘಾತಗಳ ಸಂಖ್ಯೆಯಲ್ಲಿ ಇಳಿಕೆ

ಅದರಂತೆ, ಜೂನ್‌ನಲ್ಲಿ ಕಾಂಗ್ರೆಸ್ ಸರ್ಕಾರ ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚನೆ ಮಾಡಿ ಅಧಿಸೂಚನೆ ಹೊರಡಿಸಿತ್ತು. ಬಿಬಿಎಂಪಿ ಮುಖ್ಯ ಆಯುಕ್ತರು, ಬಿಡಿಎ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಆಯುಕ್ತರು (ಕಂದಾಯ) ಒಳಗೊಂಡ ಆಯೋಗ ರಚಿಸಿ ಅಧಿಸೂಚನೆ ಹೊರಡಿಸಲಾಗಿತ್ತು.

ರಾಜ್ಯಪತ್ರ

243 ವಾರ್ಡ್‌ಗೆ ಸುಮಾರು 36 ಸಾವಿರ ಜನಸಂಖ್ಯೆಯ ಆಸುಪಾಸಿನಲ್ಲಿ ವಾರ್ಡ್‌ ಮರುವಿಂಗಡಣೆ ಮಾಡಲಾಗಿತ್ತು. ಇದೀಗ, ವಾರ್ಡ್ ಸಂಖ್ಯೆ ಕಡಿತಗೊಳಿಸಿರುವುದರಿಂದ ವಾರ್ಡ್ ಜನಸಂಖ್ಯೆಯ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ ಇದೆ.

ಈ ವರ್ಷದ ಅಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X