- ರಾಜ್ಯದಲ್ಲಿ ಒಟ್ಟು 8100 ಕೆಎಸ್ಆರ್ಟಿಸಿ ಬಸ್ಗಳಿವೆ
- ಮೇ 9 ಮತ್ತು 10ರಂದು 4400 ಬಸ್ ಸಂಚಾರ
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆ, ಮೇ 9 ಮತ್ತು 10ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಿಗಮ ತಿಳಿಸಿದೆ.
ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 10ರಂದು ಮತದಾನ ನಡೆಯಲಿದೆ. ಈ ವೇಳೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಚುನಾವಣಾ ಕರ್ತವ್ಯಕ್ಕೆ ಕೆಎಸ್ಆರ್ಟಿಸಿ ಬಸ್ಗಳನ್ನು ನಿಯೋಜಿಸಲಾಗಿದೆ. ಹಾಗಾಗಿ, ಮೇ 9 ಮತ್ತು 10ರಂದು ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರು ಸಹಕರಿಸಬೇಕು ಎಂದು ಪತ್ರಿಕಾ ಪ್ರಕಟಣೆ ಮೂಲಕ ನಿಗಮ ಮನವಿ ಮಾಡಿದೆ.
ರಾಜ್ಯದಲ್ಲಿ ಒಟ್ಟು 8100 ಕೆಎಸ್ಆರ್ಟಿಸಿ ಬಸ್ಗಳಿವೆ. ಇದರಲ್ಲಿ 3700 ಬಸ್ಗಳು ಚುನಾವಣಾ ಕೆಲಸಕ್ಕೆ ಬುಕ್ ಆಗಿವೆ. ಮೇ 9 ಮತ್ತು 10ರಂದು 4400 ಕೆಎಸ್ಆರ್ಟಿಸಿ ಬಸ್ಗಳು ಮಾತ್ರ ಸಂಚಾರ ಮಾಡುತ್ತವೆ. ಹಾಗಾಗಿ, ಆ ಎರಡು ದಿನಗಳು ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.