ಬೆಂಗಳೂರು | 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ: ಇಬ್ಬರು ವಿದೇಶಿಗರು ಸೇರಿ 7 ಮಂದಿ ಬಂಧನ

Date:

Advertisements

ಇಬ್ಬರು ವಿದೇಶಿ ಪ್ರಜೆಗಳ ಸಹಿತ 7 ಜನ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 9.93 ಕೋಟಿ ರೂ. ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಜಪ್ತಿ ಮಾಡಿರುವುದಾಗಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಒಟ್ಟು 3 ಕೆ.ಜಿ. 858 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 41 ಗ್ರಾಂ ಎಕ್ಸ್‌ ಟಸಿ ಪಿಲ್ಸ್, 1 ಕೆ.ಜಿ. 82 ಗ್ರಾಂ ಹೈಡ್ರೋಗಾಂಜಾ, 6 ಕೆ.ಜಿ. ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ 1 ಕಾರು ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ವಿವರಿದ್ದಾರೆ.

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಸಾಫ್ಟ್‌ ವೇರ್ ಉದ್ಯೋಗಿ ಕೆವಿನ್ ರೋಜರ್ ಎಂಬುವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೋಜು-ಮಸ್ತಿಯ ಜೀವನ ನಡೆಸಲು ಹಾಗೂ ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕೇರಳದಿಂದ ಕಡಿಮೆ ಬೆಲೆಗೆ ಹೈಡ್ರೋಗಾಂಜಾ ತಂದು ಬೆಂಗಳೂರಿನಲ್ಲಿ ಪರಿಚಯದ ಗಿರಾಕಿಗಳಿಗೆ ಕೆವಿನ್ ರೋಜರ್ ಮಾರಾಟ ಮಾಡುತ್ತಿದ್ದ. ಆತನಿಂದ 500 ಗ್ರಾಂ ಹೈಡ್ರೋಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಒಂದು ಕಾರು, ಒಂದು ಬೈಕ್ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅಲ್ಲದೆ, ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಡೆಂಟಲ್ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಆ್ಯಂಟೋನಿ ಬಂಧಿತ ಆರೋಪಿ. ಈತನೂ ಸಹ ಮೋಜಿನ ಜೀವನ ನಡೆಸಲು ಹಾಗೂ ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ಹೈಡ್ರೋಗಾಂಜಾ ತಂದು ಪರಿಚಯದ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಆರೋಪಿಯಿಂದ 300 ಗ್ರಾಂ ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

ಇನ್ನು, ವಿದೇಶಿ ಅಂಚೆ ಕಚೇರಿಗೆ ಪಾರ್ಸಲ್ ಮೂಲಕ ಬಂದಿದ್ದ 1 ಕೋಟಿ ರೂ. ಮೌಲ್ಯದ ಮಾದಕ ಪದಾರ್ಥಗಳನ್ನು ಕೆ.ಜಿ.ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. 1 ಕೆ.ಜಿ. 22 ಗ್ರಾಂ ಹೈಡ್ರೋ ಗಾಂಜಾ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪಾರ್ಸಲ್ ಬುಕ್ ಮಾಡಿದ್ದ ಆರೋಪಿಯ ವಿರುದ್ಧ ಕೆ.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಎನ್‍ಗ್ವು ಕಿಂಗ್‍ಸ್ಲೆ ಹಾಗೂ ಥಾಮಸ್ ನವೀದ್ ಚಿಮೆ ಬಂಧಿತ ಆರೋಪಿಗಳು. ದೆಹಲಿಯಲ್ಲಿ ನೆಲೆಸಿರುವ ಇತರ ವಿದೇಶಿ ಪ್ರಜೆಗಳಿಂದ ಮಾದಕ ಪದಾರ್ಥಗಳನ್ನು ಖರೀದಿಸಿ ತರುತ್ತಿದ್ದ ಆರೋಪಿಗಳು, ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು.

ಆರೋಪಿಗಳ ಪೈಕಿ ಓರ್ವ ಆನ್‍ಲೈನ್ ವಂಚನೆ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದು, ಗುಜರಾತ್‍ನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿ 2 ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿಕೊಂಡಿದ್ದ ಎಂದು ಸೀಮಂತ್ ಕುಮಾರ್ ಸಿಂಗ್ ವಿವರಿಸಿದ್ದಾರೆ.

ಒಟ್ಟಾರೆ ಇಬ್ಬರು ವಿದೇಶಿಗರ ಸಹಿತ 7 ಮಂದಿಯನ್ನು ಬಂಧಿಸಲಾಗಿದ್ದು, 9.93 ಕೋಟಿ ರೂ. ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಕ್ಕೆ ಬೃಹತ್ ಪ್ರತಿಭಟನೆ: ನರಮೇಧ ನಿಲ್ಲಿಸಿ ಎಂದು ಆಗ್ರಹ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ದೊಡ್ಡ ಸಂಖ್ಯೆಯ ಜನರು ಸೇರಿ, ಗಾಜಾದಲ್ಲಿ...

ವಿಪ್ರೋ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ; ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್‌) ಉಂಟಾಗುವ ತೀವ್ರ ಸಂಚಾರ ದಟ್ಟಣೆಯನ್ನು...

ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ...

ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗೆ...

Download Eedina App Android / iOS

X