ಬೆಂಗಳೂರಿನ ಜೋಗುಪಾಳ್ಯದಲ್ಲಿ ರೌಡಿ ಶೀಟರ್‌ ಕೊಲೆ

Date:

  • ರೌಡಿ ಶೀಟರ್‌ ಮೇಲೆ ನಾಲ್ಕೈದು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಪರಾರಿ
  • ಹತ್ಯೆಯಾದ ಕಾರ್ತಿಕ್ ಕೊಲೆ, ಅತ್ಯಾಚಾರ ಸೇರಿದಂತೆ 13 ಅಪರಾಧಗಳಲ್ಲಿ ಭಾಗಿ

ಬೆಂಗಳೂರಿನ ಹಲಸೂರು ಬಳಿಯ ಜೋಗುಪಾಳ್ಯದಲ್ಲಿ ಮಂಗಳವಾರ ರೌಡಿ ಶೀಟರ್‌ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಜೋಗುಪಾಳ್ಯ ಮುಖ್ಯರಸ್ತೆಯಲ್ಲಿ ಮಂಗಳವಾರ ಸಂಜೆ 6.30ರ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದ ಕಾರ್ತಿಕ್ ಮೇಲೆ ನಾಲ್ಕೈದು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹತ್ಯೆಯಾಗುವ ವೇಳೆ, ಕಾರ್ತಿಕ್ ಒಂದು ಚಿಕ್ಕ ಓಣಿಗೆ ನುಗ್ಗಿ ತಪ್ಪಿಸಿಕೊಳ್ಳಲು ಓಡಿ ಹೋಗಿದ್ದಾನೆ. ಅಲ್ಲಿ ದಾರಿಯಿಲ್ಲದ ಕಾರಣ ಮನೆಯೊಳಗೆ ಪ್ರವೇಶಿಸಲು ಮುಂದಾಗುತ್ತಾನೆ. ಆದರೆ, ಆ ಮನೆ ಬೀಗ ಹಾಕಿದ್ದು, ನಾಲ್ಕು ಜನರ ಗ್ಯಾಂಗ್‌ವೊಂದು ಅವನನ್ನು ಕೊಲೆ ಮಾಡಿ ಪರಾರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹತ್ಯೆಯಾದ ಕಾರ್ತಿಕ್ ಕೊಲೆ, ಅತ್ಯಾಚಾರ, ಕೊಲೆ ಯತ್ನ, ಕಳ್ಳತನ ಮತ್ತು ದರೋಡೆ ಸೇರಿದಂತೆ 13 ಅಪರಾಧಗಳಲ್ಲಿ ಭಾಗಿಯಾಗಿದ್ದನು. 2019ರಲ್ಲಿ ಗೂಂಡಾ ಕಾಯ್ದೆಯಡಿ ಈತನನ್ನು ಜೈಲಿಗೆ ಕಳುಹಿಸಲಾಗಿತ್ತು. ಬೆಂಗಳೂರಿನಿಂದ ಗಡಿಪಾರು ಕೂಡ ಮಾಡಲಾಗಿದ್ದು, ಸೋಮವಾರದಂದು ಪೊಲೀಸರು ಕಾರ್ತಿಕ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ನೋಟಿಸ್ ಕಳುಹಿಸಿದ್ದಾರೆ” ಎಂದು ಉಪ ಪೊಲೀಸ್ ಆಯುಕ್ತ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿಗೆ ಐಎಎಸ್‌ ಅಧಿಕಾರಿಯಿಂದ ವರದಕ್ಷಿಣೆ ಕಿರುಕುಳ; ದೂರು ದಾಖಲು

ಹಂತಕರ ಸುಳಿವಿಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಈ ಕೃತ್ಯವನ್ನು ಕಾರ್ತಿಕ್ ಎದುರಾಳಿಗಳು ಮಾಡಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...