ಪರ್ಯಾಯ ರಾಜಕಾರಣಕ್ಕೆ ನೀತಿಗಳು ಬದಲಾಗಬೇಕೇ ಹೊರತು ಸರ್ಕಾರ ಬದಲಾವಣೆಯಲ್ಲ: ಸಿಪಿಐಎಂ ಕೆ ಪ್ರಕಾಶ್

Date:

ಪ್ರಸ್ತುತ ಸರ್ಕಾರಕ್ಕೆ ಪರ್ಯಾಯ ರಾಜಕಾರಣವೆಂದರೆ ನೀತಿಗಳ ಬದಲಾವಣೆಯೇ ಹೊರತು ಸರ್ಕಾರ ಬದಲಾವಣೆಯಲ್ಲ. ಮುಖ್ಯಮಂತ್ರಿ ಬದಲಾವಣೆ ಎನ್ನುವುದು  ಪರ್ಯಾಯವಲ್ಲ. ನೀತಿಗಳ ಬದಲಾವಣೆಯೇ ನಿಜವಾದ ಪರ್ಯಾಯ ಎಂದು ಚಿಂತಕ, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ ಕೆ ಪ್ರಕಾಶ್ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ‘ಜನದನಿ ಜಾಥಾʼವನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, “ಪರ್ಯಾಯ ರಾಜಕಾರಣಕ್ಮಾಗಿ ಸಿಪಿಐಎಂ ಪಕ್ಷದಿಂದ ಜನದನಿ ಜಾಥಾ ನಡೆಯುತ್ತಿದೆ. ಹೊಸ ರಾಜಕಾರಣ, ಭರವಸೆಯ ಬೆಳಕನ್ನು ಪಸರಿಸಲು ಸಿಪಿಐಎಂ ಕಾರ್ಯಕರ್ತರು, ಶೋಷಿತ ಸಮುದಾಯಗಳ ಸಂಘಟನೆಗಳು ಕಾರ್ಯಕರ್ತರು, ಕಾರ್ಮಿಕ, ರೈತ, ಸಂಘಟಿತ, ಅಸಂಘಟಿತ ಕಾರ್ಮಿಕ ಪ್ರತಿನಿಧಿಗಳು, ದಲಿತ, ಅಲ್ಪಸಂಖ್ಯಾತ ಹೋರಾಟಗಾರರು, ಬರಹಗಾರರು, ಪತ್ರಕರ್ತರು, ಸಾಹಿತಿಗಳು ಫ್ರೀಡಂ ಪಾರ್ಕಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಈ ಸಂದರ್ಭದಲ್ಲಿ 1948ರಂದು ಅಡಿಗರು ಬರೆದ ಕವನದ ಸಾಲನ್ನು ನೆನಪಿಸಿಕೊಳ್ಳಬೇಕು. ಅದೆಂದರೆ:
ʼಕಟ್ಟುವೆವು ನಾವು ಹೊಸ ನಾಡೊಂದನು, ರಸದ ಬೀಡೊಂದನು,
ಹೊಸನೆತ್ತರುಕ್ಕುಕ್ಕಿ ಆರಿಹೋಗುವ ಮುನ್ನ
ಹರೆಯದೀ ಮಾಂತ್ರಿಕನ ಮಾಟ ಮುಸುಳುವ ಮುನ್ನ
ಉತ್ಸಾಹಸಾಹಸದ ಉತ್ತುಂಗ ವೀಚಿಗಳ
ಈ ಕ್ಷುಬ್ಧ ಸಾಗರವು ಬತ್ತಿ ಹೋಗುವ ಮುನ್ನ
ಕಟ್ಟುವೆವು ನಾವು ಹೊಸ ನಾಡೊಂದನು
ಕಟ್ಟುವೆವು ನಾವು ಹೊಸ ನಾಡೊಂದನುʼ ಎಂಬುದು ಅಡಿಗರ ಪದ್ಯದ ಸಾಲು. ಸ್ವಾತಂತ್ರ್ಯ ಹೋರಾಟದ ಆಶಯವೂ ಇದೇ ಆಗಿತ್ತು. ಆದರೆ ಇವತ್ತಿನ ಸ್ಥಿತಿ ಏನಾಗಿದೆ? ಅಡಿಗರ ಆಶಯ ಈಡೇರದ ಕಾರಣದಿಂದ ನಾವು ಇಂತಹ ಸಭೆಗಳನ್ನು ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ” ಎಂದು ಹೇಳಿದರು.

ಸಿಪಿಐಎಂ ಪ್ರತಿಭಟನೆ

“ಬಹಳ ಮುಖ್ಯವಾಗಿ, ಕೃಷಿ ಬಿಕ್ಕಟ್ಟು ಇಡೀ ದೇಶದ ದೊಡ್ಡ ಸಮಸ್ಯೆಯಾಗಿದೆ. ಕೃಷಿ ವಲಯ ಎನ್ನುವುದು ಕಾರ್ಪೊರೇಟಿಕರಣವಾಗಿದೆ. ಭೂಸ್ವಾಧೀನ ಕಾಯ್ದೆಗಳನ್ನು ಅತ್ಯಂತ ಕೆಟ್ಟದಾಗಿ ಜಾರಿ ಮಾಡಲಾಗುತ್ತಿದೆ. ಬ್ರಿಟಿಷ್ ಕಾಲದ ಕಾರ್ಪೊರೇಟ್ ಜಮೀನ್ದಾರಿಕೆ ಚಾಲ್ತಿಯಲ್ಲಿದೆ. ರೈತರಿಂದ ಭೂಮಿ ಕಿತ್ತು ಕಾರ್ಪೊರೇಟ್ ಕಂಪೆನಿಳಿಗೆ ಕೊಡುವ ರಾಜ್ಯ-ಕೇಂದ್ರ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರೈತರು, ರೈತ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಕೇಂದ್ರದ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರಗಳು ರೈತರ ಸಮಸ್ಯೆ ಬಗೆಹರಿಸಲಿಲ್ಲ, ಬದಲಾಗಿ ಹೆಚ್ಚಿಸಿದವು. ಕಾರ್ಮಿಕ ಕಾಯ್ದೆಗಳು ಕಾರ್ಮಿಕರ ಬದುಕನ್ನು ಬೀದಿಗೆ ತಂದು ನಿಲ್ಲಿಸಿವೆ. ಅತ್ಯಂತ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೇಂದ್ರ ಜಾರಿ ಮಾಡುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಉದ್ಯೋಗ ಸೃಷ್ಟಿಯ ಯೋಜನೆಗಳೇ ಇಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗೆ ಉದ್ಯೋಗದ ಬಗ್ಗೆ ಯೋಜನೆ-ಯೋಚನೆಗಳೇ ಇಲ್ಲ.‌ 30 ಸಾವಿರ ರೂಪಾಯಿಯ ಕನಿಷ್ಟ ಕೂಲಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ನಿರುದ್ಯೋಗಿ ಯುವ ಜನರ ಜೊತೆಯಲ್ಲಿ ನಾವು ನಿಲ್ಲಬೇಕಿದೆ” ಎಂದರು.

“ಭ್ರಷ್ಟಾಚಾರದ ಮಟ್ಟ ತೀವ್ರ ಹೆಚ್ಚಳವಾಗಿದೆ. ಪೊಲೀಸ್ ಠಾಣೆ, ಸರ್ಕಾರಿ ಕಚೇರಿಯಲ್ಲಿ ಲಂಚ ಇಲ್ಲದೇ ಏನೂ ಕೆಲಸ ನಡೆಯುತ್ತಿಲ್ಲ. ಜನಸಾಮಾನ್ಯರು ಸರ್ಕಾರಿ ಕಚೇರಿಗೆ ಹೋಗದೇ ಇರುವಂತಹ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಂಪನಿಗಳಿಗೆ ಸಾವಿರಾರು ಕೋಟಿ ತೆರಿಗೆ ವಿನಾಯಿತಿಯನ್ನು ನೀಡಿದೆ. ತೆರಿಗೆದಾರ ಜನಸಾಮಾನ್ಯರಿಗೆ ಏನು ನೀಡಿದೆ” ಎಂದು ಪ್ರಶ್ನಿಸಿದರು.

ಸಿಪಿಐಎಂ ಪ್ರತಿಭಟನೆ ಬೆಂಗಳೂರು

“ಶಿಕ್ಷಣ ಎನ್ನುವುದು ಖಾಸಗೀಕರಣ, ವ್ಯಾಪಾರೀಕರಣ, ಕೋಮುವಾದೀಕರಣಗೊಂಡಿದೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಅವೈಜ್ಞಾನಿಕ, ಅವೈಚಾರಿಕ ಶಿಕ್ಷಣ ನೀಡುತ್ತಿದೆ. ಅಜ್ಞಾನವನ್ನೇ ಶಿಕ್ಷಣವೆಂದು ಸಾರಲಾಗುತ್ತಿದೆ. ಹಣ ಇದ್ದವರಿರುಗೆ ಮಾತ್ರ ಆರೋಗ್ಯ ಎಂಬುದು ಕೇಂದ್ರ, ರಾಜ್ಯಗಳ ನೀತಿಯಾಗಿದೆ. ದುಬಾರಿಯಾಗಿರುವ ಆಸ್ಪತ್ರೆಗೆ ಹೋಗದೆಯೇ ಸಾಯಲು ತೀರ್ಮಾನ ಮಾಡುವಂತಹ ಸ್ಥಿತಿ ಜನಸಾಮಾನ್ಯರಿಗೆ ಎದುರಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೂ, ಸಿಬ್ಬಂದಿಗಳೂ ಇಲ್ಲ” ಎಂದು ಹೇಳಿದರು.

“ವಸತಿ ಸಮಸ್ಯೆ ರಾಜ್ಯದ ಇನ್ನೊಂದು ದೊಡ್ಡ ಸಮಸ್ಯೆಯಾಗಿದೆ. ದುಡಿಮೆ ಮಾಡಿ ಈ ನಗರಗಳಲ್ಲಿ ಬಡವರು ಸೈಟ್ ತೆಗೆದುಕೊಳ್ಳಲು ಆಗುವುದಿಲ್ಲ. ಅದಕ್ಕಾಗಿ ಸರ್ಕಾರ ರೂಪಿಸಿದ ವಸತಿ ಯೋಜನೆ ಹೇಗಿದೆ? ಹಲವು ಆವಾಸ್ ಯೋಜನೆಗಳಲ್ಲಿ ಯಾರಿಗೆ ವಸತಿ, ನಿವೇಶನ ಸಿಗುತ್ತಿದೆ? ಬಡವರು 40-50 ಲಕ್ಷ ನೀಡಿ ಸೈಟ್, ವಸತಿ ಪಡೆಯಲು ಸಾಧ್ಯವೇ? ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಜಾಸ್ತಿಯಾಗಿದೆ. ಅಬಿವೃದ್ಧಿಯಾಗುತ್ತಿದೆ ಅಂತ ಹೇಳುತ್ತಿದ್ದಾರೆ. ಆದರೆ ಯಾರ ಅಭಿವೃದ್ದಿಯಾಗುತ್ತಿದೆ? ಕೋಟ್ಯಾಧಿಪತಿಗಳು ಹೆಚ್ಚುತ್ತಿದ್ದಾರೆ, ಶ್ರೀಮಂತರ ಅಭಿವೃದ್ಧಿಯಾಗುತ್ತಿದೆ. ಅಂಬಾನಿ, ಅದಾನಿಗಳ ಆಸ್ತಿ ಹೆಚ್ಚಳವಾಗಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ವಿಬಿ ಜಿ ರಾಮ್‌ ಜಿ ಅಂಗೀಕಾರ: ಕೇಂದ್ರದ ವಿರುದ್ಧ ಡಿ.22ರಂದು ಬೃಹತ್ ಪ್ರತಿಭಟನೆ

“ಪ್ರಸ್ತುತ ಪರ್ಯಾಯ ರಾಜಕಾರಣದ ಪ್ರಶ್ನೆ ಎತ್ತಿದ್ದೇವೆ. ಸರ್ಕಾರ ಅಥವಾ ಮುಖ್ಯಮಂತ್ರಿ ಬದಲಾವಣೆಯಿಂದ ಜನರ ಬದುಕು ಬದಲಾಗುವುದಿಲ್ಲ. ನೀತಿಯಿಂದ ಜನರ ಬದುಕು ಬದಲಾಗುತ್ತದೆ. ಬಹುಸಂಖ್ಯಾತ ದಲಿತರು, ಆದಿವಾಸಿಗಳು, ಶೋಷಿತರು, ಸಂಘಟಿತ- ಅಸಂಘಟಿತ ಕಾರ್ಮಿಕರಿಗಾಗಿ, ರೈತರು, ಬಡವರಿಗಾಗಿ ಯಾವ ರೀತಿ ನೀತಿಗಳನ್ನು ರೂಪಿಸುತ್ತೀರಿ ಎನ್ನುವುದು ಪರ್ಯಾಯವನ್ನು ಸೂಚಿಸುತ್ತದೆ” ಎಂದು ಹೇಳಿದರು.

“ನವೆಂಬರ್ 1ರಿಂದ ನಾವು ಕರ್ನಾಟಕ 5 ಲಕ್ಷ ಮನೆಗಳಿಗೆ ಭೇಟಿ ನೀಡಿದ್ದೇವೆ. ನಮ್ಮ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಜನರ ಸಮಸ್ಯೆ ಬಗ್ಗೆ ಚರ್ಚಿಸಿದ್ದಾರೆ. ಸಿಪಿಐಎಂ ಒಂದೇ ಪರ್ಯಾಯ ರಾಜಕಾರಣ ಮಾಡಲು ಸಾಧ್ಯವಿಲ್ಲ. ಎಲ್ಲ ಎಡ, ಪ್ರಜಾಸತ್ತಾತ್ಮಕ ಪಕ್ಷಗಳು ಮತ್ತು ವ್ಯಕ್ತಿಗಳನ್ನೂ ಒಳಗೊಂಡ ಎಡ ಪ್ರಜಾಸತ್ತಾತ್ಮಕ ಪರ್ಯಾಯ ಕಟ್ಟಬೇಕು. ಎಲ್ಲ ಚಳವಳಿಗಳ ಮಧ್ಯೆ ಐಕ್ಯತೆ ಗಟ್ಟಿಗೊಳಿಸಿ ಜನರೆಡೆಗೆ ಕೊಂಡೊಯ್ಯಬೇಕಿದೆ. ಹಾಗಾಗಿ ಈ ಜನನದನಿ ಜಾಥಾ ಎಂದು ಕರೆಯಲಾಗಿದೆ‌” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...