ಆನೇಕಲ್ | ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಸಾವು: 20 ಜನರಿಗೆ ಗಾಯ

Date:

Advertisements

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 20 ಜನರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಗ್ನೇಸ್ ಶಾಲಾ ಕಟ್ಟಡದ ಎರಡನೇ ಅಂತಸ್ತಿನ ನಿರ್ಮಾಣ ವೇಳೆ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಮಿನರ್​ ಬಿಸ್ವಾಸ್​​, ಶಾಹೀದ್ ಮೃತರು. ಇವರು ಜಾರ್ಖಂಡ್ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಆರು ಜನರ ಸ್ಥಿತಿ ಗಂಭೀರವಾಗಿದೆ. ಇನ್ನೂ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ.

Advertisements

ಈ ಸುದ್ದಿ ಓದಿದ್ದೀರಾ?  ಬೆಂಗಳೂರು | ನಕಲಿ ದಾಖಲೆ ನೀಡಿದ್ದವರಿಗೆ ಸಾಲ ಮಂಜೂರು; ಮೂವರು ಬ್ಯಾಂಕ್‌ ಮ್ಯಾನೇಜರ್‌ಗಳ ಬಂಧನ

ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X