ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ಐಟಿಎಂಎಸ್ ಅಳವಡಿಕೆ; 18.34 ಲಕ್ಷ ಪ್ರಕರಣ ದಾಖಲು

Date:

ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ಕೃತಕ ಬುದ್ಧಿಮತ್ತೆ (ಎ.ಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಬೆಂಗಳೂರು ನಗರದಲ್ಲಿ ಆಧುನಿಕ ಮಾದರಿ ಕ್ಯಾಮೆರಾ ಅಳವಡಿಸಲಾಗಿದೆ. ಇದರಿಂದ ಮೂರು ತಿಂಗಳಿನಲ್ಲಿ 18.34 ಲಕ್ಷ ಪ್ರಕರಣಗಳು ದಾಖಲಾಗಿವೆ. 80.61 ಕೋಟಿ ರೂ. ದಂಡ ವಿಧಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘಿಸುವ ವಾಹನ ಮಾಲೀಕರಿಗೆ ಸಂಪರ್ಕ ರಹಿತವಾಗಿ ದಂಡ ವಿಧಿಸಲು ಬೆಂಗಳೂರು ನಗರದ 50 ಜಂಕ್ಷನ್‌ಗಳಲ್ಲಿ 250 ಕೃತಕ ಬುದ್ಧಿಮತ್ತೆ ಕ್ಯಾಮೆರಾ ಅಳವಡಿಸಲಾಗಿದೆ. ದಿನದ 24 ಗಂಟೆಯೂ ಈ ಕ್ಯಾಮೆರಾಗಳು ಸಕ್ರಿಯವಾಗಿದ್ದು, ನಿಯಮ ಉಲ್ಲಂಘಿಸುವವರ ಫೋಟೊವನ್ನು ಕ್ಲಿಕ್ಕಿಸುತ್ತಿವೆ. ವಾಹನ ನೋಂದಣಿ ಸಂಖ್ಯೆ ಆಧರಿಸಿ ಐಟಿಎಂಎಸ್ ಮೂಲಕ ಮಾಲೀಕರಿಗೆ ದಂಡದ ಬಗ್ಗೆ ಸಂದೇಶಗಳು ರವಾನೆಯಾಗುತ್ತಿವೆ.

ಅತಿ ವೇಗದ ಚಾಲನೆ, ಜೀಬ್ರಾ ಕ್ರಾಸಿಂಗ್, ಸಿಗ್ನಲ್‌ ಜಂಪ್‌, ಹೆಲ್ಮೆಟ್ ರಹಿತ ಚಾಲನೆ, ತ್ರಿಬಲ್ ರೈಡಿಂಗ್ ಸೇರಿದಂತೆ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡುವುದೂ ಕೂಡ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಕರ್ತವ್ಯ. ಸಂಚಾರ ನಿಯಮ ಉಲ್ಲಂಘನೆ ಪತ್ತೆ ಮಾಡುವುದರಲ್ಲಿ ಹೆಚ್ಚು ಸಮಯ ಹೋಗುತ್ತಿತ್ತು. ಹಾಗಾಗಿ, ಸ್ವಯಂಚಾಲಿತ ಕ್ಯಾಮೆರಾ ಅಳವಡಿಸಲಾಗಿದೆ. ಇದೀಗ ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗುತ್ತಿವೆ” ಎಂದು ವಿಶೇಷ ಕಮಿಷನರ್ (ಸಂಚಾರ) ಎಂ.ಎ ಸಲೀಂ ಹೇಳಿದ್ದಾರೆ.

“ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಲಾಯಿಸಿದ್ದ ಸವಾರ ಹಾಗೂ ಹಿಂಬದಿ ಸವಾರರ ಫೋಟೊವನ್ನು ಕ್ಯಾಮೆರಾಗಳು ಸೆರೆ ಹಿಡಿದಿವೆ. ನಿಯಮ ಉಲ್ಲಂಘಿಸಿದ್ದ 10.50 ಲಕ್ಷ ಮಂದಿಗೆ ದಂಡ ವಿಧಿಸಲಾಗಿದ್ದು, ಅವರಿಗೆ ಸಂದೇಶವನ್ನೂ ಕಳುಹಿಸಲಾಗಿದೆ” ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

2023ರ ಜನವರಿಯಿಂದ ಮಾರ್ಚ್‌ ಅಂತ್ಯದವರೆಗೆ ಬೆಂಗಳೂರು ನಗರದಲ್ಲಿ 1197 ಅಪಘಾತಗಳು ಸಂಭವಿಸಿದ್ದು, 205 ಮಂದಿ ಮೃತಪಟ್ಟಿದ್ದಾರೆʼ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂಬಿಕೆ ನಕ್ಷೆ, ಹೊಸ ಆಸ್ತಿ ತೆರಿಗೆ, ಖಾತಾ ವ್ಯವಸ್ಥೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ...

ಬೆಂಗಳೂರು | ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

ರಾಮೇಶ್ವರಂ ಕೆಫೆ ಪ್ರಕರಣ | ಕಪೋಲಕಲ್ಪಿತ ವರದಿ ಬಿತ್ತರಿಸದಿರಿ: ಮಾಧ್ಯಮಗಳಿಗೆ ಕಮಿಷನರ್ ಎಚ್ಚರಿಕೆ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ವರದಿ ಬಿತ್ತರಿಸದಿರಿ ಎಂದು...

ಸಿದ್ದಲಿಂಗಯ್ಯ ರಚಿಸಿದ ತುರ್ತುಪರಿಸ್ಥಿತಿ ಸಂದರ್ಭದ ಕವಿತೆಗಳು ಇಂದಿಗೂ ಪ್ರಸ್ತುತ: ಅರದೇಶಹಳ್ಳಿ ವೆಂಕಟೇಶ್

ತುರ್ತುಪರಿಸ್ಥಿತಿಯ ಸಮಯದಲ್ಲಿ ಸರ್ಕಾರದ ದಮನದ ವಿರುದ್ಧ ಸಿದ್ದಲಿಂಗಯ್ಯ ನಾನಾ ಕವಿತೆಗಳನ್ನು ರಚಿಸಿದ್ದರು....