ಬೆಂಗಳೂರು | ಡಿ.9 ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ: ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಬಸವನಗುಡಿ ಐತಿಹಾಸಿಕ ಕಡಲೆ ಕಾಯಿ ಪರಿಷೆ ಡಿ.9 ರಂದು ಆರಂಭವಾಗಲಿದ್ದು, ಡಿ.13ರವರೆಗೂ ಪರಿಷೆ ನಡೆಯಲಿದೆ. ಈ ಪರಿಷೆಗೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆ ಸುಗಮ ಸಂಚಾರಕ್ಕೆ ಒತ್ತು ನೀಡಿರುವ ಬೆಂಗಳೂರು ನಗರ ಸಂಚಾರ ಪೊಲೀಸ್ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಸಂಚಾರ ಪೊಲೀಸ್, “ಬೆಂಗಳೂರು ನಗರದ ಬಸವನಗುಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ದೊಡ್ಡಬಸವಣ್ಣ ಮತ್ತು ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಈ ವರ್ಷವೂ ಐತಿಹಾಸಿಕ ಕಡೆಲೆಕಾಯಿ ಪರಿಷೆ ಜಾತ್ರೆಯು ಡಿ.9 ರಿಂದ ಡಿ.13ರವರೆಗೆ ನಡೆಯಲಿದೆ” ಎಂದು ಮಾಹಿತಿ ನೀಡಿದೆ.

ಈ ಪರಿಷೆಗೆ ಲಕ್ಷಾಂತರ ಮಂದಿ ಭಕ್ತಾಧಿಗಳು, ವ್ಯಾಪಾರಸ್ಥರು, ಗಣ್ಯವ್ಯಕ್ತಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆ, ಪರಿಷೆಗೆ ಬರುವ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಪಾದಚಾರಿಗಳ ಸುರಕ್ಷಿತ ಓಡಾಟ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ, ವಾಹನಗಳ ನಿಲುಗಡೆಗಾಗಿ ಅನುಕೂಲ ಕಲ್ಪಿಸಿಕೊಡಲು ಬಸವನಗುಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ರಸ್ತೆಯಾದ ಬುಲ್‌ಟೆಂಪಲ್ ರಸ್ತೆಯಲ್ಲಿ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಿ, ಪರ್ಯಾಯ ಮಾರ್ಗ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬುಲ್‌ಟೆಂಪಲ್ ರಸ್ತೆಯ ಸಂಚಾರ ಮಾರ್ಗಗಳಲ್ಲಿ ಬದಲಾವಣೆ

ಲಾಲ್‌ಬಾಗ್ ವೆಸ್ಟ್‌ಗೇಟ್ ಕಡೆಯಿಂದ ವಾಣಿವಿಲಾಸ್ ರಸ್ತೆಯ ಮುಖಾಂತರ ಮತ್ತು 5ನೇ ಮುಖ್ಯರಸ್ತೆ ಚಾಮರಾಜಪೇಟೆ ಹಾಗೂ ಗಾಂಧಿಬಜಾರ್ ಮುಖ್ಯರಸ್ತೆ ಕಡೆಯಿಂದ ಬುಲ್‌ ಟೆಂಪಲ್ ಮುಖಾಂತರ ಹನುಮಂತ ನಗರದ ಕಡೆಗೆ ಸಂಚರಿಸುವ ವಾಹನಗಳು ಬುಲ್‌ ಟೆಂಪಲ್ ರಸ್ತೆಯ ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆದು, ಹಯವದನರಾವ್ ರಸ್ತೆಯ ಮೂಲಕ ಗವಿಪುರಂ 3ನೇ ಅಡ್ಡರಸ್ತೆಯ ಮೂಲಕ ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.

ಆರ್.ವಿ.ಟೀಚರ್ಸ್ ಕಾಲೇಜ್ ಜಂಕ್ಷನ್ ಕಡೆಯಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ ಮತ್ತು ಕೆ.ಆರ್ ರಸ್ತೆಯಲ್ಲಿ ಬ್ಯೂಗಲ್ ರಾಕ್ ರಸ್ತೆ ಮೂಲಕ ಹನುಮಂತನಗರ ಕಡೆಗೆ ಹೋಗುವ ವಾಹನಗಳು ಠಾಗೋರ್ ಸರ್ಕಲ್ (ಮಾರುಕಟ್ಟೆ ರಸ್ತೆ-ಬ್ಯೂಗಲ್‌ರಾಕ್ ರಸ್ತೆ ಜಂಕ್ಷನ್)ನಲ್ಲಿ ಬಲತಿರುವು ಪಡೆದು ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣ ಆಶ್ರಮ ಜಂಕ್ಷನ್ ಅಲ್ಲಿಂದ ಹಯವಧನರಾವ್ ರಸ್ತೆಯಲ್ಲಿ ಗವಿಪುರಂ ಎಕ್ಸ್‌ಟೆಂಕ್ಷನ್ 3ನೇ ಅಡ್ಡರಸ್ತೆಯಲ್ಲಿ ಮುಂದೆ ಸಾಗಿ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.

ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ ಎನ್.ಆರ್. ಕಾಲೋನಿ ರಸ್ತೆಯಲ್ಲಿ ಬುಲ್‌ ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಾಗುವ ವಾಹನಗಳು ಬುಲ್‌ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಆಶೋಕನಗರ 2ನೇ ಕ್ರಾಸ್ (ಬಿ.ಎಂ.ಎಸ್. ಕಾಲೇಜ್ ಹಾಸ್ಟೆಲ್ ರಸ್ತೆ) ರಸ್ತೆಯಲ್ಲಿ ಸಾಗಿ ಅಲ್ಲಿಂದ ಮುಂದೆ ಕತ್ರಿಗುಪ್ಪೆ ರಸ್ತೆಯ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 3ನೇ ಮುಖ್ಯರಸ್ತೆ ಮೂಲಕ ನಾರಾಯಣಸ್ವಾಮಿ ಸರ್ಕಲ್‌ನಲ್ಲಿ ಕೆ.ಜಿ.ನಗರ ಮುಖ್ಯರಸ್ತೆ ಅಥವಾ ಹಯವದನರಾವ್ ರಸ್ತೆಯಲ್ಲಿ ಸಾಗಿ ರಾಮಕೃಷ್ಣ ಆಶ್ರಮ ಜಂಕ್ಷನ್ ಮೂಲಕ ಚಾಮರಾಜಪೇಟೆ ಕಡೆಗೆ ಸಾಗಬಹುದು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸರಗಳ್ಳತನ ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರ ಬಂಧನ

ಪಾರ್ಕಿಂಗ್ ವ್ಯವಸ್ಥೆ

ಕಡಲೆಕಾಯಿ ಪರಿಷೆಗೆ ಭೇಟಿ ನೀಡುವ ಸಾರ್ವಜನಿಕರು/ಭಕ್ತಾಧಿಗಳ ವಾಹನಗಳ ನಿಲುಗಡೆಗಾಗಿ, ಸಾರ್ವಜನಿಕ ರಸ್ತೆಗಳಲ್ಲಿರುವ ಆಟದ ಮೈದಾನಗಳನ್ನು ಬಳಸಿಕೊಳ್ಳಬಹುದಾಗಿದೆ.

  1. ಎ.ಪಿ.ಎಸ್. ಕಾಲೇಜ್ ಆಟದ ಮೈದಾನ, ಎನ್.ಆರ್. ಕಾಲೋನಿ.

2. ಹಯವದನರಾವ್ ರಸ್ತೆಯಲ್ಲಿರುವ ಕೊಹಿನೂರು ಆಟದ ಮೈದಾನ, ರಾಮಕೃಷ್ಣ ಆಶ್ರಮ ಜಂಕ್ಷನ್ ಬಳಿ.

3. ಬುಲ್‌ಟೆಂಪಲ್ ರಸ್ತೆಯಲ್ಲಿರುವ ಉದಯಭಾನು ಆಟದ ಮೈದಾನದಲ್ಲಿ ಪಾರ್ಕಿಂಗ್ ಅವಕಾಶ ನೀಡಲಾಗಿದೆ.

ಐತಿಹಾಸಿಕ ಕಡಲೆಕಾಯಿ ಪರಿಷೆ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿ.9 ರಿಂದ ಡಿ.13 ರವರೆಗೆ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಇರುತ್ತದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೈಂದೂರು | ಸಮಾಜದ ಎಲ್ಲ ವರ್ಗದವರ ಹಿತ ಕಾಯಲು ಬದ್ಧ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ...

ನೇಹಾ ಕೊಲೆ ಪ್ರಕರಣ | ಸಿಐಡಿಗೆ ನೀಡಿ, ವಿಶೇಷ ನ್ಯಾಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ...

ಮುಸ್ಲಿಂ ಬಾಂಧವರು ದೇಶ ಬಿಟ್ಟು ಓಡಿ ಹೋಗಬೇಕು ಹಾಗೇ ಬಿಜೆಪಿಯವರು ಚಿತ್ರಹಿಂಸೆ ಕೊಡುತ್ತಿದ್ದಾರೆ: ಡಿ ಕೆ ಶಿವಕುಮಾರ್‌

ಬಿಜೆಪಿಯವರು ಮುಸ್ಲಿಂ ಬಾಂಧವರಿಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ. ದೇಶದಿಂದ ಓಡಿ ಹೋಗಬೇಕು...

ಚಿಕ್ಕಬಳ್ಳಾಪುರ | ₹400 ಕೋಟಿ ನಕಲಿ ನೋಟು ಹಂಚಿಕೆಗೆ ಸಕಲ ತಯಾರಿ: ಪಕ್ಷೇತರ ಅಭ್ಯರ್ಥಿ ಆರೋಪ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ...