ಬೆಂಗಳೂರು | ರಿಯಾಯಿತಿ ಪಾವತಿಗೆ ಗಡುವು ಮುಕ್ತಾಯ; ₹9 ಕೋಟಿಗೂ ಅಧಿಕ ದಂಡ ಸಂಗ್ರಹ

Date:

ಸಂಚಾರ ನಿಯಮ‌ ಉಲ್ಲಂಘಿಸಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿ ಸೆಪ್ಟೆಂಬರ್‌ 9 ಕೊನೆಯಾಗಿದ್ದು, ಒಂದೇ ದಿನದಲ್ಲಿ ವಾಹನ ಸವಾರರು ಒಂದು ಕೋಟಿ ರೂ.ಗೂ ಅಧಿಕ ದಂಡ ಕಟ್ಟಿದ್ದಾರೆ. ರಿಯಾಯಿತಿ ದಂಡ ಜಾರಿಯಾದಾಗಿನಿಂದ ನಿನ್ನೆಯವರೆಗೆ 9 ಕೋಟಿ ರೂಪಾಯಿಗೂ ಅಧಿಕ ದಂಡ ಸಂಗ್ರಹವಾಗಿದೆ.

ಸಂಚಾರಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, “ಶುಕ್ರವಾರದವರೆಗೆ 8 ಕೋಟಿ ರೂ.ವರೆಗೆ ದಂಡ ಸಂಗ್ರಹವಾಗಿತ್ತು‌. ರಿಯಾಯಿತಿ ದಂಡ ಪಾವತಿಸಲು ಶನಿವಾರವೇ ಕೊನೆಯ ದಿನ. ಫೆಬ್ರವರಿ 11ಕ್ಕೂ ಮುನ್ನ ಸಂಚಾರ ನಿಯಮ‌ ಉಲ್ಲಂಘಿಸಿದ ಪ್ರಕರಣಗಳಿಗೆ ಶೇ.50ರಷ್ಟು ದಂಡ ಕಟ್ಟುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದರು. ರಿಯಾಯಿತಿ ದಂಡ ಪಾವತಿಗೆ ಗಡುವು ಮುಕ್ತಾಯವಾಗುವ 24 ಗಂಟೆ ಅಂತರದಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ದಂಡದ ಮೊತ್ತ ಪಾವತಿಸಿದ್ದಾರೆ. ಈ ಮೂಲಕ ಜುಲೈ 6 ರಿಂದ ಸೆ‌.9ರವರೆಗೆ ಈವರೆಗೆ ಒಟ್ಟು 2,92,792 ಲಕ್ಷ ಪ್ರಕರಣಗಳಿಂದ 9.24 ಕೋಟಿ ರೂ.ಗೂ ಅಧಿಕ ದಂಡ ಪಾವತಿಯಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೇಸ್ಟ್‌ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ; ಇಬ್ಬರ ಬಂಧನ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜುಲೈ ತಿಂಗಳಲ್ಲಿ 1,23,178 ಲಕ್ಷ ಕೇಸ್​ಗಳಿಂದ 3.89 ಕೋಟಿ ರೂ. ಸಂಗ್ರಹವಾಗಿದೆ. ಆಗಸ್ಟ್​ನಲ್ಲಿ 86,587 ಪ್ರಕರಣಗಳಿಂದ 2.82 ಕೋಟಿ ರೂ. ಸಂಗ್ರಹವಾಗಿದ್ದು, ಸೆ.9ಕ್ಕೆ ಕೊನೆಗೊಂಡಂತೆ 83 ಸಾವಿರ ಪ್ರಕರಣ​​ಗಳಿಂದ 2.82 ಕೋಟಿ ರೂ. ಸೇರಿದಂತೆ ಒಟ್ಟು 9 ಕೋಟಿ ರೂಪಾಯಿಗೂ ಅಧಿಕ ದಂಡ ವಸೂಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...

ಎನ್‌ಸಿಪಿಇಡಿಪಿಯಿಂದ ಬೆಂಗಳೂರು- ಕಲಬುರಗಿ ವಿಶೇಷ ಚೇತನರ ಆರೋಗ್ಯ ಸ್ಥಿತಿಗತಿ ಕುರಿತ ಅಧ್ಯಯನ ವರದಿ ಬಿಡುಗಡೆ

ಕರ್ನಾಟಕದಲ್ಲಿನ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಗಳ ವಿಶೇಷ...

ಚುನಾವಣಾ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರು ಅಪಘಾತ: ಬಿಜೆಪಿ ಕಾರ್ಯಕರ್ತ ಸಾವು

ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯ ಕಾರು...

ಲೋಕಸಭಾ ಚುನಾವಣೆ | ಏ. 6; ಪ್ರಣಾಳಿಕೆಯಲ್ಲಿ ಪರಿಸರಕ್ಕಾಗಿ ಆದ್ಯತೆ ನೀಡಲು ‘ಪರಿಸರ ಪ್ರಣಾಳಿಕೆ’ ಬಿಡುಗಡೆ

ಬೆಂಗಳೂರು: 'ಪರಿಸರಕ್ಕಾಗಿ ನಾವು' ಸಂಘಟನೆ ವತಿಯಿಂದ ಏಪ್ರಿಲ್ 6ರಂದು 'ಪರಿಸರ ಪ್ರಣಾಳಿಕೆಗಾಗಿ...