ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಯಾವುದೇ ತಪ್ಪು ಮಾಡಿಲ್ಲ. ಅನಗತ್ಯವಾಗಿ ಉತ್ತರಾಖಂಡ ಪೊಲೀಸರು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸರ್ಕಾರ ದುರುದ್ದೇಶಪೂರಿತವಾಗಿ ಸುಳ್ಳು ಎಫ್ಐಆರ್ ದಾಖಲಿಸಿರುವುದು ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಮೈದಾನವನ್ನು ಶುದ್ಧೀಕರಿಸಿದ ಘಟನೆ ಖಂಡಿಸಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.
“ರಾಹುಲ್ ಗಾಂಧಿ ಅವರು ಏನು ತಪ್ಪು ಮಾಡಿದ್ದಾರೆ? ಅವರು ಪ್ರಶ್ನೆ ಮಾಡಿದ್ದೇ ತಪ್ಪಾ? ಶುದ್ಧೀಕರಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸುವುದನ್ನು ಬಿಟ್ಟು, ಅದನ್ನು ಪ್ರಶ್ನೆ ಮಾಡಿದ ರಾಹುಲ್ ಗಾಂಧಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಇದು ದುರುದ್ದೇಶಪೂರಿತ ಕ್ರಮ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ರಾಹುಲ್ ಗಾಂಧಿ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರಗಳು ಕಾನೂನು ಕ್ರಮ ದುರುಪಯೋಗಪಡಿಸಿಕೊಳ್ಳುತ್ತಿವೆ. ಸಂವಿಧಾನದ ಮೇಲೆ ನಂಬಿಕೆ ಇರುವ ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಜತೆಗೆ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲೂ ಪ್ರತಿಭಟನೆ ನಡೆಸಬೇಕು. ಸಂವಿಧಾನವನ್ನು ಗೌರವಿಸದ, ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸದವರ ವಿರುದ್ಧ ಹೋರಾಟ ಮುಂದುವರಿಯಬೇಕು” ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಸಚಿವ ಎಚ್ ಸಿ ಬಾಲಕೃಷ್ಣ ಮಾತನಾಡಿ, “ರಾಹುಲ್ ಗಾಂಧಿ ವಿರುದ್ಧ ನಡೆದಿರುವ ಘಟನೆ ಮಾನವ ಸಮಾಜವೇ ತಲೆತಗ್ಗಿಸುವಂತಹದ್ದು. ಬಿಜೆಪಿ ಮನುವಾದವನ್ನು ಮತ್ತೆ ಮುನ್ನಲೆಗೆ ತರುವತ್ತೆ ಹೆಜ್ಜೆ ಇಡುತ್ತಿದೆಯೆಂದು ಟೀಕಿಸಿದ ಅವರು, ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಹಿಂದೆ ನಿಂತಿದೆ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, “ಯುವಜನರು, ಮಹಿಳೆಯರು ಹಾಗೂ ಬಡವರ ಪರವಾಗಿ ರಾಹುಲ್ ಗಾಂಧಿ ಹೋರಾಟ ಮಾಡುತ್ತಿರುವುದರಿಂದ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಆದರೆ ಯಾವುದೇ ಸಂಚುಗಳಿಂ ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ಪಕ್ಷವನ್ನು ಹಿಮ್ಮೆಟ್ಟಿಸಲು ಸಾಧ್ಯವಿಲ್ಲ. ಪಕ್ಷ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದರು.
ಸಚಿವ ಶಿವಲಿಂಗೇಗೌಡ ಮಾತನಾಡಿ, “ಮಲ್ಲಿಕಾರ್ಜುನ ಖರ್ಗೆ ಅವರಂತಹ ದಲಿತ ನಾಯಕರಿಗೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿರುವ ಘಟನೆಯನ್ನು ಪ್ರಶ್ನಿಸುವ ಬದಲು, ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಟೀಕಿಸಿದರು.
ಇದನ್ನೂ ಓದಿದ್ದೀರಾ? ಬಿಜೆಪಿ ಪಾದಯಾತ್ರೆಯಲ್ಲಿ ಬ್ಯುಸಿ, ಬಿಜೆಪಿಗೆ ಕೌಂಟರ್ ಕೊಡುವಲ್ಲಿ ಕಾಂಗ್ರೆಸ್ ಬ್ಯುಸಿ; ರೈತರ ಗೋಳು ಕೇಳುವವರಾರು?
ಇಂಧನ ಸಚಿವ ಕೆ ಜೆ ಜಾರ್ಜ್ ಮಾತನಾಡಿ, “ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಿರುವ ಘಟನೆಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಾಹುಲ್ ಗಾಂಧಿ ಇಂತಹ ಯಾವುದೇ ಎಫ್ಐಆರ್ಗೆ ಹೆದರುವುದಿಲ್ಲ. ಪ್ರಜಾಪ್ರಭುತ್ವವನ್ನು ಉಳಿಸಲು ಅವರು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಿಂದಲೇ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಮತ್ತಷ್ಟು ವೇಗ ನೀಡಲಾಗುವುದು” ಎಂದು ಘೋಷಿಸಿದರು.
ಪ್ರತಿಭಟನೆ ವೇಳೆ ಸಿಎಂ ಡಿ ಕೆ ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಶಾಸಕರು ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಇದ್ದರು.





