ಬೆಂಗಳೂರು | ಜುಲೈ 1ರಿಂದ ಬ್ಯಾರೀಸ್ ಸೆಂಟ್ರಲ್ ಕಮಿಟಿಯಿಂದ ಸದಸ್ಯತ್ವ ಅಭಿಯಾನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಕರ್ನಾಟಕದ ಬಹುಮುಖ್ಯ ಸಮುದಾಯವಾಗಿರುವ ಬ್ಯಾರಿ ಸಮುದಾಯದ ಜನರನ್ನು ಸಂಘಟಿಸುವ ಸಲುವಾಗಿ ಬ್ಯಾರೀಸ್ ಸೆಂಟ್ರಲ್ ಕಮಿಟಿ ಆರಂಭಿಸಲಾಗಿದ್ದು, ಜುಲೈ 1ರಿಂದ ಜುಲೈ 31ರವರೆಗೆ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಮಿಟಿಯ ಅಧ್ಯಕ್ಷ ಶಬೀರ್ ಬ್ರಿಗೇಡ್ ತಿಳಿಸಿದ್ದಾರೆ.

- Advertisement -

ಶುಕ್ರವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಸುಮಾರು ಒಂದು ಲಕ್ಷ ಬ್ಯಾರಿ ಸಮುದಾಯದ ಜನರಿದ್ದು, ಅವರನ್ನು ಒಂದೇ ವೇದಿಕೆಗೆ ತರುವ ಉದ್ದೇಶವನ್ನು ಬ್ಯಾರೀಸ್ ಸೆಂಟ್ರಲ್ ಕಮಿಟಿ ಹೊಂದಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಉನ್ನತ ವ್ಯಾಸಂಗಕ್ಕೆ ಬೆಂಗಳೂರಿಗೆ ಬರುವ ಸಮುದಾಯದ ವಿದ್ಯಾರ್ಥಿಗಳಿಗೆ ನೆರವು ಒದಗಿಸುವುದು, ಉದ್ಯೋಗ, ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಬ್ಯಾರಿಗಳು ಅನ್ಯಾಯಕ್ಕೊಳಗಾಗುವ ಸಂದರ್ಭದಲ್ಲಿ ಕಾನೂನಾತ್ಮಕ ನೆರವು ಒದಗಿಸುವುದು, ಅಪಘಾತಕ್ಕೊಳಗಾದ ಸಂದರ್ಭದಲ್ಲಿ ನೆರವು ನೀಡುವುದು, ಸಮುದಾಯದ ಶೈಕ್ಷಣಿಕ, ಆರ್ಥಿಕ, ರಾಜಕೀಯ ಅಭಿವೃದ್ಧಿಗೆ ಶ್ರಮಿಸುವುದು ಸೇರಿದಂತೆ ಹಲವು ಹಲವು ಧ್ಯೇಯೋದ್ದೇಶಗಳನ್ನು ಸಮಿತಿ ಹೊಂದಿದೆ” ಎಂದು ಶಬೀರ್ ಬ್ರಿಗೇಡ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ನಾಸಿರ್ ಕೆಂಪಿ, ಸಲೀಮ್ ಸಿ.ಎಂ, ಸಂಶುದ್ದೀನ್ ಕುಕ್ಕಾಜೆ, ಇರ್ಷಾದ್ ಬಜಾಲ್, ಬಶೀರ್ ಅಡ್ಯನಡ್ಕ ಉಪಸ್ಥಿತರಿದ್ದರು.

BCF BANGALORE

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...