ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರ; ಬಂಧನ

Date:

  • ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ
  • ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ನಗರದ ಪಾರ್ಕ್‌ವೊಂದರಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ಎಳೆದೊಯ್ದ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್‌ ವಿಲೇಜ್ ಪಾರ್ಕ್‌ನಲ್ಲಿ ಸಂತ್ರಸ್ತ ಯುವತಿಯೂ ತನ್ನ ಸ್ನೇಹಿತನೊಂದಿಗೆ ಕುಳಿತಿದ್ದಳು. ಈ ವೇಳೆ, ಅಲ್ಲಿಗೆ ಬಂದ ನಾಲ್ವರು ದುಷ್ಕರ್ಮಿಗಳು ಯುವತಿಯ ಸ್ನೇಹಿತನನ್ನು ಬೆದರಿಸಿ, ಯುವತಿಯನ್ನು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಬಲವಂತವಾಗಿ ಎಳೆದುಕೊಂಡು ಹೋಗಿದ್ದಾರೆ. ಈ ಘಟನೆ ಮಾರ್ಚ್‌ 25ರ ರಾತ್ರಿ 10 ಗಂಟೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೆಂಗಳೂರಿನ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ, ಚಲಿಸುತ್ತಿದ್ದ ಕಾರಿನಲ್ಲಿ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಮರುದಿನ ಮಾರ್ಚ್‌ 26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೇಸಿಗೆಗೆ ಮತ್ತಷ್ಟು ಹುಳಿಯಾದ ನಿಂಬೆಹಣ್ಣು

ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮಾರ್ಚ್‌ 26ರಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ನಾಲ್ವರು ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.

ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚಳ

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪೋಕ್ಸೊ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ.

ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಪೋಕ್ಸೋ ಪ್ರಕರಣಗಳ ವರದಿಯೂ ಆಘಾತಕಾರಿಯಾಗಿದೆ.

ರಾಜ್ಯದಲ್ಲಿ 2018ರಲ್ಲಿ 2,063 ಪೋಕ್ಸೊ ಪ್ರಕರಣಗಳು, 2020ರಲ್ಲಿ 2,166 ಹಾಗೂ 2021ರಲ್ಲಿ 2863 ಪ್ರಕರಣಗಳು ದಾಖಲಾಗಿವೆ.

ಈ ಸಂಖ್ಯೆ 2022ರ ವೇಳೆಗೆ 3,097ಕ್ಕೆ ಏರಿಕೆಯಾಗಿದೆ. 2023 ಜನವರಿ ತಿಂಗಳೊಂದರಲ್ಲಿಯೇ 207 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ 200ಕ್ಕೂ ಹೆಚ್ಚು ಪೋಕ್ಸೊ ಪ್ರಕರಣಗಳು ದಾಖಲಾಗಿವೆ.

ಕೆ ಸಿ ಜನರಲ್ ಆಸ್ಪತ್ರೆಯೊಂದರಲ್ಲಿ ಕಳೆದ ವರ್ಷ 35 ಪ್ರಕರಣಗಳು ದಾಖಲಾಗಿದ್ದವು, ಈ ವರ್ಷದ ಡಿಸೆಂಬರ್​ನಿಂದ ಮಾರ್ಚ್​​ವರೆಗೂ ಈಗಾಗಲೇ ಪೊಕ್ಸೋ ಪ್ರಕರಣಗಳು 35ರ ಗಡಿ ದಾಟಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...