ಮಾದಾಪಟ್ಟಣ | ಕಲ್ಲು ಕ್ವಾರಿ ದುರಂತ; ಬಿಹಾರ ಮೂಲದ 7 ಕಾರ್ಮಿಕರ ಸಾವು

Date:

ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿ ಕಲ್ಲು ಕ್ವಾರಿ ದುರಂತದಲ್ಲಿ 7 ಜನ ಬಿಹಾರ ಮೂಲದ ಕಾರ್ಮಿಕರು ಮೃತಪಟ್ಟಿದ್ದಾರೆ. ಕಾವೇರಿ ಕಂಪನಿಗೆ ಸೇರಿದ ಕ್ವಾರಿಯಲ್ಲಿ ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ದುರಂತ ನಡೆದಿದೆ.

- Advertisement -

ಕ್ವಾರಿಯಲ್ಲಿ ಹೊಸ ಕ್ರಷರ್ ನಡೆಸಲು ಹಿಟಾಚಿಯಲ್ಲಿ ಸ್ಥಳ ಸ್ವಚ್ಛಗೊಳಿಸುತ್ತಿದ್ದ ವೇಳೆ ಸುಮಾರು 100 ಅಡಿ ಮೇಲಿನಿಂದ ಕಲ್ಲು ಬಂಡೆಗಳು ಕೆಳಗೆ ಉರುಳಿವೆ. ಹಿಟಾಚಿ ನಿರ್ವಹಿಸುತ್ತಿದ್ದ ಚಾಲಕ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಗಮನಿಸಿರಲಿಲ್ಲ. ಕಲ್ಲುಗಳನ್ನು ಮೇಲಿನಿಂದ ಹಿಟಾಚಿಯಲ್ಲಿ ಕೆಳಕ್ಕೆ ತಳ್ಳಲಾಗಿ ಕೂಲಿ ಕಾರ್ಮಿಕರ ತಲೆಯ ಮೇಲೆ ಬಂಡೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

7 ಜನ ಕೂಲಿ ಕಾರ್ಮಿಕರು ದುರ್ಮರಣ ಹೊಂದಿದ್ದು, ಗಾಯಗೊಂಡ ಹಲವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಸ್ಪೋಟಕಗಳ ಬಳಕೆಯಿಂದ ದುರಂತ:

ಸ್ಥಳೀಯ ಮೂಲಗಳ ಪ್ರಕಾರ ಈ ಕ್ವಾರಿಯಲ್ಲಿ ಅಧಿಕೃತ ಪರವಾನಗಿ ಇಲ್ಲದೆ ಗಣಿಗಾರಿಕೆ ನಡೆಯುತ್ತಿದ್ದು, ಇಂದು ಬೆಳಗಿನ ಹೊತ್ತು ಕಾರ್ಮಿಕರು ಕ್ವಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ದೊಡ್ಡ ಮಟ್ಟದಲ್ಲಿ ಬಂಡೆ ಸ್ಪೋಟಿಸಲು ತೀವ್ರ ಸ್ಫೋಟಕಗಳನ್ನು ಬಳಸಲಾಗಿದೆ. ಜೆಲಟಿನ್ ಸ್ಫೋಟದ ವೇಳೆ ದೊಡ್ಡ ಪ್ರಮಾಣದ ಶಬ್ದ ಕೇಳಿಬಂದಿದ್ದು, ಸುರಕ್ಷತಾ ಕ್ರಮಗಳನ್ನು ಅನುಸರಿಸದಿರುವುದು ದುರಂತಕ್ಕೆ ಕಾರಣವೆನ್ನಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...