ಬ್ಯಾಗ್ ತಪಾಸಣೆ ನೆಪದಲ್ಲಿ ಕೊರಿಯನ್ ಪ್ರವಾಸಿ ಮೇಲೆ ಲೈಂಗಿಕ ದೌರ್ಜನ್ಯ: ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ​

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಟಿಕೆಟ್ ಮತ್ತು ಬ್ಯಾಗೇಜ್ ಪರಿಶೀಲಿಸುವ ನೆಪದಲ್ಲಿ ದಕ್ಷಿಣ ಕೊರಿಯಾ ಮೂಲದ ಮಹಿಳಾ ಪ್ರವಾಸಿಯೊಬ್ಬರ ಮೇಲೆ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

- Advertisement -

​ಜನವರಿ 19 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತೆ ನೀಡಿದ ದೂರಿನನ್ವಯ ಆರೋಪಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಕಿಮ್ ಸುಂಗ್ ಕ್ಯುಂಗ್ ಅವರು ಮಾಧ್ಯಮದ ಮುಂದೆ ತಮ್ಮ ಗುರುತನ್ನು ಬಹಿರಂಗಪಡಿಸಲು ಸಮ್ಮತಿಸಿದ್ದು, ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಎಫ್‌ಐಆರ್‌ (FIR) ನಲ್ಲಿ ದಾಖಲಾಗಿರುವ ಮಾಹಿತಿಯ ಪ್ರಕಾರ, ಸಂತ್ರಸ್ತ ಮಹಿಳೆ ಇಮಿಗ್ರೇಷನ್ ಪ್ರಕ್ರಿಯೆಯನ್ನು ಮುಗಿಸಿದ ನಂತರ ಆರೋಪಿಯು ಮಹಿಳೆಯನ್ನು ತಡೆದಿದ್ದಾನೆ. ಮಹಿಳೆಯ ಚೆಕ್-ಇನ್ ಬ್ಯಾಗ್‌ನಲ್ಲಿ ‘ಬೀಪಿಂಗ್ ಸೌಂಡ್’ (ಶಬ್ದ) ಕೇಳಿಸುತ್ತಿದೆ ಎಂದು ಆತ ಸುಳ್ಳು ಹೇಳಿದ್ದಾನೆ. ಅಲ್ಲದೆ, ಬ್ಯಾಗ್ ಅನ್ನು ಕೌಂಟರ್‌ನಲ್ಲಿ ವಿಸ್ತೃತವಾಗಿ ಪರಿಶೀಲಿಸಿದರೆ ವಿಮಾನ ಏರುವುದು ತಡವಾಗಬಹುದು ಎಂದು ನಂಬಿಸಿ, ‘ವೈಯಕ್ತಿಕ ತಪಾಸಣೆ’ ನಡೆಸುವ ನೆಪದಲ್ಲಿ ಅವರನ್ನು ಶೌಚಾಲಯದ ಬಳಿ ಕರೆದೊಯ್ದಿದ್ದಾನೆ.

ಈ ದಿನ ಸಂಪಾದಕೀಯ | ರಾಜ್ಯಪಾಲರು ಕೇಂದ್ರದ ಕೈಗೊಂಬೆಯಲ್ಲ- ಆಯಾ ರಾಜ್ಯದ ಜನಾದೇಶ ಧಿಕ್ಕರಿಸುವ ನಡೆ ಸಂವಿಧಾನಬಾಹಿರ

​ಅಲ್ಲಿ ಆರೋಪಿಯು ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಮಹಿಳೆ ಪ್ರತಿರೋಧ ತೋರಿದಾಗ, “ಓಕೆ, ಥ್ಯಾಂಕ್ಯೂ” ಎಂದು ಹೇಳಿ ಅಲ್ಲಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯಿಂದ ಆಘಾತಕ್ಕೊಳಗಾದ ಮಹಿಳೆ ತಕ್ಷಣವೇ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ, ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
​

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...