ಬೆಂಗಳೂರು | ಮಳೆಯಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ವಿವಿಧ ಸ್ಥಳಗಳಿಗೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ

Date:

ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಉಂಟಾಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ಮಾಡಲು ಮಾನ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಇಂದು ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಸಿಲ್ಕ್ ಬೋರ್ಡ್ ಜಕ್ಷನ್:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಜಲಾವೃತವಾಗುವುದದನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಸಿಲ್ಕ್ ಬೋರ್ಡ್ ನ ಮೇಲ್ಸೇತುವೆ ಕೆಳಭಾಗದ ಸುತ್ತಲೂ, ರಾಜಕಾಲುವೆಯಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡಬೇಕು. ಬಳಕೆಯಾಗದ ಜಾಗದಲ್ಲಿ ಡೆಬ್ರೀಸ್, ರಾಜಕಾಲುವೆಯಲ್ಲಿ ಹೂಳನ್ನು ಇಂದೇ ತೆರವುಗೊಳೊಸಿ ಸುಂದರೀಕರಣ ಮಾಡಿ, ಫೇವರ್ ಬ್ಲಾಕ್ಸ್ ಅಳವಡಿಸಬೇಕು ಎಂದು ತಿಳಿಸಿದರು.

ಮೆಟ್ರೋ ಇಲಾಖೆಯಿಂದ ಸ್ಕೈವಾಕ್ ನಿರ್ಮಾಣ ಮಾಡಿ, 2026 ಜೂನ್ ಅಂತ್ಯಕ್ಕೆ ಮೆಟ್ರೋ ಕಾಮಗಾರಿ ಪೂರ್ಣಗೊಳಿಸುವುದು. ಪಾಲಿಕೆಯಿಂದ ಹೈ ರೈಸ್ ಪೆಡೆಸ್ಟ್ರಿಯನ್ ಕ್ರಾಸಿಂಗ್ (HRPC) ಮಾಡುವುದು. ರಾಜಕಾಲುವೆಯಲ್ಲಿ ಹೂಳೆತ್ತಿದ ತಕ್ಷಣ, ಹೂಳನ್ನು ಸ್ಥಳದಲ್ಲಿಯೇ ಬಿಡದೆ ತಕ್ಷಣ ತೆರವುಗೊಳಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಮೆಟ್ರೋ ಇಲಾಖೆಯಿಂದ 25 ಮೀ. ನಿಂದ 45 ಮೀಟರ್ ಗೆ ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು. ಕೆ.ಎ.ಎಲ್ ಕಾಲೋನಿಯಲ್ಲಿ ಅಳವಡಿಸಲು ಬೃಹತ್ ಪೈಪ್‍ಗಳನ್ನು ಜಂಕ್ಷನ್‍ನಲ್ಲಿ ಹಾಕಿದ್ದು, ಅದನ್ನು ಕೂಡಲೆ ತೆರವುಗೊಳಿಸಲು ಹಾಗೂ ಸಿಲ್ಕ್ ಬೋರ್ಡ್ ಮೆಟ್ರೋ ಇಲಾಖೆಯು ಕಾಮಗಾರಿ ನಡೆಯುವ ಸ್ಥಳದಲ್ಲಿ ಕಬ್ಬಣಿ, ಸ್ಕ್ರ್ಯಾಪ್ ರಸ್ತೆಯಲ್ಲೇ ಹಾಕಿದ್ದು, ಅದನ್ನು ಈ ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು

ಹೆಚ್.ಎಸ್.ಆರ್ 5 & 6ನೇ ಸೆಕ್ಟರ್:

ಹೆಚ್.ಎಸ್.ಆರ್ 6ನೇ ಸೆಕ್ಟರ್ (ಮಂಗಮ್ಮನ ಪಾಳ್ಯ ಮುಖ್ಯ ರಸ್ತೆ ಬಳಿ) ಮೆಟ್ರೋ ಕಾಮಗಾರಿಯ ಮೀಡಿಯನ್ ಸರಿಯಾಗಿ ಅಳವಡಿಸದೇ ಇರುವುದು, ಅನುಪಯುಕ್ತ ಮೆಟಿರಿಯಲ್ ಅನ್ನು ಕೂಡಲೆ ತೆರವುಗೊಳಿಸಬೇಕು. ಜೊತೆಗೆ ರಸ್ತೆ ಬದಿ ಸ್ವಚ್ಛತೆ ಹಾಗೂ ಡಂಬರೀಕರಣ ಹಾಕಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮೆಟ್ರೋ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಹೆಚ್.ಎಸ್.ಆರ್ 5ನೇ ಸೆಕ್ಟರ್ ರಸ್ತೆ ತಿರುವು ಬಳಿ ಪಾದಾಚರಿ, ಎಲೆಕ್ಟ್ರಿಕಲ್ ಕಂಬ, ಡ್ರೈನ್ ಅನ್ನು ಸರಿಯಾಗಿ ಮಾಡಿ ಸುಗಮ ವಾಹನಗಳ ಸಂಚಾರಕ್ಕೆ ಅನುವಾಗುವಂತೆ ಮಾಡುವುದು ಮತ್ತು ರಸ್ತೆ ಮೇಲೆ ನೀರು ನಿಲ್ಲುತ್ತದೆ, ಕೂಡಲೆ ಡ್ರೈನ್ ಕಾಮಗಾರಿ ನಡೆಸಿ ನೀರು ಸರಾಗವಾಗಿ ಹೋಗಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಅಗರ ಕೆರೆ ರಸ್ತೆ ಪರಿಶೀಲನೆ:

ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ರಸ್ತೆಯನ್ನು ಸಂಪೂರ್ಣ ಸುಸ್ತಿತಿಯಲ್ಲಿಡಬೇಕು. ಕೂಡಲೆ ಡ್ರೈನೇಜ್ ಕೆಲಸ ಮುಗಿಸಬೇಕು. ಹಾಳಾಗಿರುವ ಕಡೆ ರಸ್ತೆ ಲೆವೆಲ್ ಮಾಡಿ ರೋಲ್ ಮಾಡಿ, ವೆಟ್ ಮಿಕ್ಸ್ ಹಾಕಿ ಮೋಟರೆಬಲ್ ಮಾಡಲು ತಿಳಿಸಿದರು.

ಸ್ಯಾನಿಟರಿ ಲೈನ್ ಬಳಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದು. ಫೆಬ್ರಬರಿಯಲ್ಲಿ ಕೆಲಸ ಪ್ರಾರಂಭವಾಗಿದ್ದು, ಕೆಲಸಕ್ಕೆ ಮಾತ್ರ ವೇಗ ನೀಡಲ್ಲ ಎಂದು ನಾಗರಿಕರು ದೂರಿದರು. ಈ ಸಂಬಂಧ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯ ಕಾರ್ಯದರ್ಶಿಗಳು ದಕ್ಷಿಣ ನಗರ ಪಾಲಿಕೆಯ ಏನು ಕೆಲಸ ನಡೆಯುತ್ತಿದೆ, ಯಾರು ಗುತ್ತಿಗೆದಾರರು, ಯವಾಗ ಕೆಲಸ ಪ್ರಾರಂಭಿಸಲಾಗಿದೆ, ಯವಾಗ ಮುಗಿಯುತ್ತದೆ ಸಂಪೂರ್ಣ ಮಾಹಿತಿ ತಿಳಿಸಬೇಕು ಎಂದು ಸೂಚಿಸಿದರು.

ಅಗರ ಜಂಕ್ಷನ್ ಪರಿಶೀಲನೆ:

ಅಗರ ಜಂಕ್ಷನ್ ಬಳಿ ಮೇಲ್ಸೇತುವೆಯ ಮೇಲೆ ಬೀಳುವ ನೀರಿಗೆ ಅಳವಡಿಸಿರುವ ಪೈಪ್ ಹಾಳಾಗಿದ್ದು, ರಸ್ತೆ ಮೇಲೆ ನೀರು ಬೀಳುತ್ತಿದೆ. ಈ ಸಂಬಂಧ ರಸ್ತೆ ಮೇಲೆ ನೀರು ಬೀಳದಂತೆ ಪೈಪ್ ಗಳನ್ನು ಅಳವಡಿಸಬೇಕು. ಮುಖ್ಯ ರಸ್ತೆಯನ್ನು ಮೆಟ್ರೋ, ಸರ್ವೀಸ್ ರಸ್ತೆಯನ್ನು ಪಾಲಿಕೆ ದುರಸ್ತಿ ಮಾಡಬೇಕಿದ್ದು, ಈ ಕ್ಷಣವೇ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲು ಮೆಟ್ರೋ ಅಧಿಕಾರಿಗೆ ಸೂಚನೆ ನೀಡಿದರು.

ಇಬ್ಲೂರು ಜಂಕ್ಷನ್ ಪರಿಶೀಲನೆ:

ಸರ್ಜಾಪುರ ಸರ್ವೀಸ್ ರಸ್ತೆಯನ್ನು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಲು ದಕ್ಷಿಣ ಪಾಲಕೆ ಆಯುಕ್ತರಿಗೆ ಸೂಚಿಸಿದ ಮುಖ್ಯ ಕಾರ್ಯದರ್ಶಿಗಳು, ಇಬ್ಲೂರು ಜಂಕ್ಷನ್ ಬಳಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಸ್ಕೈವಾಕ್ ನಿರ್ಮಾಣ ಮಾಡುವಂತೆ ತಿಳಿಸಿದರು.

ರಸ್ತೆಯಲ್ಲಿ ಜಲಾವೃತವಾಗದಂತೆ ಹಾಗೂ ಜಂಕ್ಷನ್ ನ ಸಮಗ್ರ ಅಭಿವೃದ್ಧಿ ಮಾಡಬೇಕು. ಪಾದಚಾರಿ ಮಾರ್ಗ ದುರಸ್ತಿ ಕಾರ್ಯ ನಡೆಸಿ, ಸ್ವಚ್ಛವಾಗಿಡಬೇಕು. ಇಬ್ಲೂರು ಜಂಕ್ಷನ್ ನಿಂದ ಮಾರತಹಳ್ಳಿಯವರೆಗೆ ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆ ವಿಲೀನ ಮಾಡಿದರೆ ಬಹಳಷ್ಟು ಸಂಚಾರ ದಟ್ಟಣೆ ಕಡಿಮೆ ಆಗಲಿದ್ದು, ಅದಕ್ಕೆ ಅಗತ್ಯ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಣತ್ತೂರು ಮುಖ್ಯ ರಸ್ತೆ ಪರಿಶೀಲನೆ:

ಪಣತ್ತೂರು ರಸ್ತೆ ಸಂಪೂರ್ಣ ಆಳಾಗಿದ್ದು, ರಸ್ತೆಯಲ್ಲಿ ಸ್ಯಾನಿಟರಿ ಓವರ್ ಫೆÇ್ಲೀ ಆಗುತ್ತಿದೆ. ಕೂಡಲೆ ದುರಸ್ತಿ ಕಾರ್ಯ ನಡೆಸಲು ತಿಳಿಸಿದರು. ಪಾದಚಾರಿ ಮಾರ್ಗ ಸ್ಲ್ಯಾಬ್ ಆಳಾಗಿದ್ದು, ಅದನ್ನು ಬದಲಿಸಿ, ಡ್ರೈನ್‍ನಲ್ಲಿ ಹೂಳೆತ್ತಿ ನೀರು ಸರಾಗವಾಗಿ ಹೋಗುವಂತೆ ಮಾಡಲು ತಿಳಿಸಿದರು. ಪಣತ್ತೂರು ಆರ್‍ಯುಬಿ ಬಳಿ ಜಲಾವೃತ ಆಗುವುದನ್ನು ತಪ್ಪಿಸಲು ಅಗತ್ಯ ಕ್ರಮ ವಹಿಸುವುದು ಹಾಗೂ ಪಣತ್ತೂರು ರಸ್ತೆ ಅಗಲೀಕರಣಕ್ಕೆ ವೇಗ ನೀಡವುದು. ಸೈಡ್ ಡ್ರೈನ್‍ಗಳಲ್ಲಿ ಹೂಳೆತ್ತಿ, ಕೂಡಲೆ ಅದನ್ನು ತೆರವುಗೊಳಿಸುವುದು ಮತ್ತು ಕಲ್ವರ್ಟ್ ಕಾಮಗಾರಿ ಪ್ರಗತಿಯಲ್ಲಿದ್ದು ಅದನ್ನು ಬೇಗ ಮುಗಿಸುವಂತೆ ಸೂಚನೆ ನೀಡಿದರು.

ವಿಬ್‍ಗಯಾರ್ ಸ್ಕೂಲ್ ರಸ್ತೆ ಪರಿಶೀಲನೆ:

ವಿಬ್‍ಗಯಾರ್ ಸ್ಕೂಲ್ ರಸ್ತೆ ತೂಬರಹಳ್ಳಿ ಬಳಿ ರಸ್ತೆ ಹಾಗೂ ಡ್ರೈನ್ ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಬೇಕು. ಕೆಲಸ ಮುಗಿದ ಬಳಿಕ ಯಾವುದೇ ಡೆಬ್ರಿಸ್ ಇರಬಾರದು. ವಿಪತ್ತು ನಿರ್ವಹಣೆ ಕಾಯ್ದೆ ಅಡಿ ನೀರುಗಾಲುವೆ ಮಾಡಲ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...