ಬೆಂಗಳೂರು: ಬಲವಂತವಾಗಿ ಮನೆಗೆ ನುಗ್ಗಿ ಒಂಟಿ ಮಹಿಳೆಯೆದುರು ಡೆಲಿವರಿ ಬಾಯ್ ಅಸಭ್ಯ ವರ್ತನೆ

Date:

ಮಹಿಳೆಯೊಬ್ಬರು ಮನೆಯಲ್ಲಿ ಒಂಟಿಯಾಗಿದ್ದಾಗ ಬಲವಂತವಾಗಿ ಒಳನುಗ್ಗಿದ ‘ಫ್ಲಿಪ್‌ಕಾರ್ಟ್’ ಡೆಲಿವರಿ ಬಾಯ್, ಆಕೆಯೆದುರು ಗುಪ್ತಾಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಸಂತ್ರಸ್ತೆ ನೀಲೋಫರ್ ಫಾತಿಮಾ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಡಿಯೊ ಹಾಗೂ ಪೋಸ್ಟ್ ಹಂಚಿಕೊಂಡಿದ್ದರು. ಪಾರ್ಸೆಲ್ ನೀಡಲು ಬಂದಿದ್ದ ಡೆಲಿವರಿ ಬಾಯ್, ಶೌಚಾಲಯ ಬಳಸಲು ಅವಕಾಶ ನೀಡುವಂತೆ ಕೇಳಿದ್ದಾನೆ. ಮನೆಯಲ್ಲಿ ತಾನೊಬ್ಬಳೇ ಇದ್ದ ಕಾರಣ ಅಪರಿಚಿತರಿಗೆ ಪ್ರವೇಶವಿಲ್ಲ ಎಂದು ಮಹಿಳೆ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ತುರ್ತು ಅಗತ್ಯವಿದ್ದರೆ ಪಕ್ಕದ ಮನೆಯ ಪುರುಷರನ್ನು ಕೇಳುವಂತೆಯೂ ಸೂಚಿಸಿದ್ದಾರೆ. ಆದರೂ ಆತ, ಮಹಿಳೆಯ ಮಾತನ್ನು ಲೆಕ್ಕಿಸದೆ ಚಪ್ಪಲಿ ಬಿಟ್ಟು ಬಲವಂತವಾಗಿ ಮನೆಯೊಳಗೆ ನುಗ್ಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಶೌಚಾಲಯದಿಂದ ಹೊರಬಂದ ಆತ ತನ್ನ ಗುಪ್ತಾಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. “ಇದರಿಂದ ನಾನು ತೀವ್ರ ಆಘಾತಕ್ಕೊಳಗಾದೆ. ನನ್ನದೇ ಮನೆಯಲ್ಲಿ ನನಗೆ ಭದ್ರತೆ ಇಲ್ಲ ಎಂಬ ಭಾವನೆ ಕಾಡಿತು. ಮಹಿಳೆ ‘ಬೇಡ’ ಎಂದ ಮೇಲೆ ಆ ಮಾತು ಅಲ್ಲಿಗೇ ಮುಗಿಯಬೇಕಿತ್ತು. ಆಕೆಯ ಎಲ್ಲೆಯನ್ನು ಮೀರಿ ಬಲವಂತವಾಗಿ ಮನೆಗೆ ನುಗ್ಗುವ ಹಕ್ಕು ಯಾರಿಗೂ ಇಲ್ಲ” ಎಂದು ಫಾತಿಮಾ ತಮ್ಮ ಪೋಸ್ಟ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

“ನಾನು ತೀವ್ರವಾಗಿ ಭಯಭೀತಳಾಗಿದ್ದೆ. ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ಬಗ್ಗೆ ನಿತ್ಯ ಕೇಳುತ್ತಿದ್ದೆ. ಹೀಗಾಗಿ, ಸುರಕ್ಷತೆಯ ದೃಷ್ಟಿಯಿಂದ ನನ್ನ ಮೊಬೈಲ್ ಕ್ಯಾಮೆರಾ ಆನ್ ಮಾಡಿ, ಮನೆಯ ಮುಖ್ಯ ಬಾಗಿಲು ತೆಗೆದಿಟ್ಟುಕೊಂಡು ಹೊಸ್ತಿಲ ಬಳಿ ನಿಂತಿದ್ದೆ. ಏನಾದರೂ ಅನಾಹುತವಾದರೆ ಹೊರಗೋಡಿ ಸಹಾಯ ಕೇಳಲು ಹೀಗೆ ಮಾಡಿದ್ದೆ” ಎಂದು ಅವರು ತಾವು ಅನುಭವಿಸಿದ ಆತಂಕದ ಕ್ಷಣಗಳನ್ನು ವಿವರಿಸಿದ್ದಾರೆ.

ಈ ಘಟನೆಯಿಂದಾಗಿ ಸಂತ್ರಸ್ತೆ ತೀವ್ರ ಆಘಾತಕ್ಕೆ ಒಳಗಾಗಿದ್ದು, ಸದ್ಯ ಅವರ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ. ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಗಮನಿಸಿದ ಮಾರತ್ತಹಳ್ಳಿ ಪೊಲೀಸರು, ಮಹಿಳೆಯನ್ನು ಸಂಪರ್ಕಿಸಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...