ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಹಳದಿ ಮಾರ್ಗದಲ್ಲಿ ಸೋಮವಾರ (ಆಗಸ್ಟ್ 18) ಬೆಳಿಗ್ಗೆ 5 ಗಂಟೆಯಿಂದ ಮೆಟ್ರೋ ಸೇವೆ ಆರಂಭಿಸಲಿದೆ. ಆರ್.ವಿ. ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಟರ್ಮಿನಲ್‌ಗಳಿಂದ ಮೊದಲ ರೈಲುಗಳು ಹೊರಡಲಿವೆ.
ಸ್ವಾತಂತ್ರ್ಯ ದಿನಾಚರಣೆಯ ರಜೆಯಿಂದಾಗಿ ಶುಕ್ರವಾರದಿಂದ ಭಾನುವಾರದವರೆಗಿನ ಮೂರು ದಿನಗಳ ರಜೆಯಲ್ಲಿ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ. ಇದರಿಂದ ಸೋಮವಾರ ಬೆಂಗಳೂರಿಗೆ ವಾಪಸಾಗುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಈ ಜನದಟ್ಟಣೆಯನ್ನು ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಸುಗಮ ಸೇವೆ ಒದಗಿಸಲು ಬಿಎಂಆರ್‌ಸಿಎಲ್ ಈ ನಿರ್ಧಾರ ಕೈಗೊಂಡಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?
ನೇರಳೆ ಮಾರ್ಗ ಮತ್ತು ಹಸಿರು ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 4:15 ರಿಂದ ಕಾರ್ಯನಿರ್ವಹಿಸಲಿವೆ. ಆದರೆ, ಹಳದಿ ಮಾರ್ಗದಲ್ಲಿ ಸೋಮವಾರ ಮಾತ್ರ ಬೆಳಿಗ್ಗೆ 5 ಗಂಟೆಯಿಂದ ಸೇವೆ ಆರಂಭವಾಗಲಿದ್ದು, ಮಂಗಳವಾರದಿಂದ (ಆಗಸ್ಟ್ 19) ಎಂದಿನಂತೆ ಬೆಳಿಗ್ಗೆ 6:30ಕ್ಕೆ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಈ ಬೆಳಗಿನ ಸೇವೆಯ ಲಾಭವನ್ನು ಪಡೆದುಕೊಂಡು ತಮ್ಮ ಪ್ರಯಾಣವನ್ನು ಸುಲಭಗೊಳಿಸಲು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಆಗಸ್ಟ್ 18 2025ರ, ಸೋಮವಾರದಂದು ಹಳದಿ ಮಾರ್ಗದ ಮೆಟ್ರೋ ಸೇವೆ, ಮುಂಜಾನೆ 5:00ಗೆ ಪ್ರಾರಂಭವಾಗಲಿದೆ. ಹೆಚ್ಚಿನ ವಿವರಗಳಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ.
— ನಮ್ಮ ಮೆಟ್ರೋ (@OfficialBMRCL) August 17, 2025