ಬೆಂಗಳೂರು | ಪಟಾಕಿ ಅವಘಡದಿಂದ 190ಕ್ಕೂ ಅಧಿಕ ಮಂದಿಗೆ ಗಾಯ, ದೃಷ್ಟಿ ಕಳೆದುಕೊಂಡ 8 ಮಂದಿ

Date:

ದೀಪಾವಳಿ ಹಬ್ಬದ ಪ್ರಯುಕ್ತ ಕಳೆದ ಮೂರು ದಿನಗಳಿಂದ ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 190ಕ್ಕೂ ಹೆಚ್ಚು ಏರಿಕೆಯಾಗಿದ್ದು, ಇದರಲ್ಲಿ 9 ಮಂದಿ ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ. ನಗರದ ಕಣ್ಣಿನ ಆಸ್ಪತ್ರೆಗಳು ಈ ಆತಂಕಕಾರಿ ಸಂಖ್ಯೆಯನ್ನು ದಾಖಲಿಸುತ್ತಿದ್ದಂತೆ, ಇದರಲ್ಲಿ ಮಕ್ಕಳೇ ಹೆಚ್ಚಾಗಿ ತೊಂದೆರೆಗೀಡಾಗಿದ್ದಾರೆ.

- Advertisement -

ನಾರಾಯಣ ನೇತ್ರಾಲಯದಲ್ಲಿ ಒಟ್ಟು 76 ಪ್ರಕರಣಗಳು ದಾಖಲಾಗಿವೆ, ಇದರಲ್ಲಿ 36 ಮಕ್ಕಳು ಸೇರಿದ್ದಾರೆ. ಮಿಂಟೋ ನೇತ್ರಾಲಯದಲ್ಲಿ 60ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆದಿದ್ದು, ಸಂಕರಾ ಐ ಹಾಸ್ಪಿಟಲ್‌ನಲ್ಲಿ 18 ಪ್ರಕರಣಗಳಲ್ಲಿ 14 ಮಕ್ಕಳು ಗಾಯಗೊಂಡಿದ್ದಾರೆ. 144ಕ್ಕೂ ಹೆಚ್ಚು ಕಣ್ಣಿನ ಗಾಯಗಳು ದಾಖಲಾಗಿದ್ದು, 13 ಮಂದಿಗೆ ಶಸ್ತ್ರಚಿಕಿತ್ಸೆ ಅಗತ್ಯವಾಗಿದೆ. ನಿಂತು ನೋಡುವವರು, ದಾರಿಹೋಕರ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪಟಾಕಿ ಸಿಡಿಸುವಾಗ ರಕ್ಷಣಾತ್ಮಕ ಕನ್ನಡಕಗಳು ಕಡ್ಡಾಯವಾಗಿರಬೇಕು. ಸುರಕ್ಷಿತ ಅಂತರ (ಕನಿಷ್ಠ 10-15 ಅಡಿ) ಕಾಪಾಡಿಕೊಳ್ಳಿ. ಮಕ್ಕಳಿಗೆ ಪೋಷಕರು ನಿಗಾ ವಹಿಸಿ, ತೀವ್ರ ಶಬ್ದದ ಪಟಾಕಿಗಳ ಬದಲು ಬೆಳಕು ಪಟಾಕಿಗಳನ್ನು ಬಳಸಿ. ಮನೆಯಲ್ಲಿ ತಯಾರಿಸಿದ ಪಟಾಕಿಗಳು ಗುಣಮಟ್ಟರಹಿತವಾಗಿರುವುದರಿಂದ ಅನಿರೀಕ್ಷಿತ ಸ್ಫೋಟಕ್ಕೆ ಕಾರಣವಾಗುತ್ತವೆ – ಅಂತಹವುಗಳನ್ನು ತಪ್ಪಿಸಿ. ಕಣ್ಣಿನ ಸಮಸ್ಯೆ ಅಥವಾ ಅಲರ್ಜಿ ಇರುವವರು ಹೊಗೆಯಿಂದ ದೂರವಿರಿ. ಪರಿಸರ ಸ್ನೇಹಿ ಪಟಾಕಿಗಳನ್ನು ಆಯ್ಕೆ ಮಾಡಿಕೊಳ್ಳಿ.ಗಾಯವಾದ ಸಂದರ್ಭದಲ್ಲಿ ಕಣ್ಣನ್ನು ಉಜ್ಜಬೇಡಿ, ನೀರು ಸೇರಿಸಬೇಡಿ ಅಥವಾ ಕೈಹಿಡಿಯಬೇಡಿ. ತಕ್ಷಣ ಹತ್ತಿರದ ಕಣ್ಣು ತಜ್ಞರ ಬಳಿ ಧಾವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ |ಕಾರ್ಮಿಕರ ಹೊಟ್ಟೆ ಮೇಲೆ ಮತ್ತೆ ಮೋದಿ ಹೊಡೆತ – ಕಡುಕಠಿಣ ಪಿಎಫ್ ಹಿಂಪಡೆತ

ಪಟಾಕಿ ಹೊಗೆಯಿಂದ ಬೆಂಗಳೂರು ವಾಯು ಗುಣಮಟ್ಟ ಹದಗೆಟ್ಟಿದ್ದು, ಕಾಡುಬೀಸನಹಳ್ಳಿಯಲ್ಲಿ AQI 140 (ಹಾನಿಕಾರಕ), ಮೆಜೆಸ್ಟಿಕ್ 116, BTM ಲೇಔಟ್ 90 ದಾಖಲಾಗಿದೆ. ಬಾಪೂಜಿ ನಗರ 88, ಜಯನಗರ 80 ಆಗಿದ್ದು, ಹೆಬ್ಬಾಳಲ್ಲಿ 79 ದಾಖಲಾಗಿದೆ. ಉಸಿರಾಟ ಸಮಸ್ಯೆ ಇರುವವರು ಮನೆಯಲ್ಲಿ ಉಳಿಯಿರಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಸಿದೆ.

ಪಟಾಕಿ ಸಿಡಿತದಿಂದ ಹೊರಬರುವ ಮಾಲಿನ್ಯದ ಕಣಗಳು ವಾತಾವರಣದಲ್ಲಿ ದೀರ್ಘಕಾಲ ಉಳಿದು ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಹೀಗಾಗಿ ಮುಂದಿನ ದೀಪಾವಳಿಗಳಲ್ಲಿ ಸಾರ್ವಜನಿಕರು ಮಾಲಿನ್ಯರಹಿತ ಆಚರಣೆಗಾಗಿ ಒತ್ತು ನೀಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...