ಬೆಂಗಳೂರು ಮಳೆ ಅನಾಹುತ – ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಸಿಪಿಐ(ಎಂ) ಖಂಡನೆ

Date:

ಬೆಂಗಳೂರಿನಲ್ಲಿ ಹಿಂದಿನ ಮಳೆಯ ಹಾನಿ ಪ್ರಕರಣಗಳಿಂದ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ನಿರ್ಲಕ್ಷ್ಯ ತೋರಿದ ಪರಿಣಾಮ ಭಾರೀ ಅನಾಹುತಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಸಿಪಿಐ(ಎಂ) ಬೆಂಗಳೂರು ಜಿಲ್ಲಾ ಸಮಿತಿಯು ತೀವ್ರವಾಗಿ ಟೀಕಿಸಿದೆ.

- Advertisement -

ಮಳೆ ಪ್ರಾರಂಭದ ಪೂರ್ವದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳನ್ನು ವಹಿಸದ ಹಿನ್ನಲೆ ಕಳೆದ 2-3 ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರಿನ ಅನೇಕ ಜನ ವಸತಿ ಪ್ರದೇಶಗಳು, ರಸ್ತೆಗಳು ಮುಳುಗಿದ್ದು, ಕೆ.ಆರ್. ಪುರಂ ಪ್ರದೇಶದಲ್ಲಿ ಗೋಡೆ ಕುಸಿದು ಮಹಿಳೆಯನ್ನು ಸಾವಿಗೆ ದೂಡಿದೆ. ಮಳೆಗೆ ಅನೇಕ ವಾಹನಗಳು ಹಾನಿಗೀಡಾಗಿವೆ. ಮನೆಗಳಿಗೆ ನೀರು ನುಗ್ಗಿ ಜಲ ಪ್ರದೇಶಗಳಾಗಿ ಜನತೆ ತತ್ತರಿಸುವಂತಾಗಿದೆ.

ಬೆಂಗಳೂರಿನ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್, ಹೆಬ್ಬಾಳ – ಯಲಹಂಕ ಜಂಕ್ಷನ್, ಮೈಸೂರು ರಸ್ತೆ, ಇನ್ನಿತರ ಪ್ರಮುಖ ರಸ್ತೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ಪ್ರಯಾಣಿಕರ ಸುಗಮ ಸಂಚಾರಕ್ಕೆ ಹಾಗೂ ಜನತೆಯ ನೆರವಿಗೆ ತುರ್ತು ಕ್ರಮಗಳನ್ನು ವಹಿಸಬೇಕೆಂದು ಸಿಪಿಐ(ಎಂ) ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಕಾನೂನಿನ ಮೂಲಕ ಪ್ರಸ್ತುತ ಗ್ರೇಟರ್ ಬೆಂಗಳೂರು ಆಗಿ‌ ಮಾರ್ಪಡಿಸಿ ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಮಾತನಾಡುತ್ತಿದೆ. ವಾಸ್ತವವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಬಿಬಿಎಂಪಿ ತನ್ನ 2025-26ರ ಸಾಲಿನ ಬಜೆಟ್‌ನಲ್ಲಿ ಕೆರೆ, ರಾಜ ಕಾಲುವೆಗಳು ಒತ್ತುವರಿ ತೆರವು, ದುರಸ್ತಿ ಮತ್ತು ಸಂರಕ್ಷಣೆ ಹಾಗೂ ಒಳ ಚರಂಡಿ ನಿರ್ಮಾಣ ಮತ್ತು ದುರಸ್ತಿ, ರಸ್ತೆಗುಂಡಿಗಳನ್ನು ಮುಚ್ಚಲು ಆದ್ಯತೆ ನೀಡಿಲ್ಲ. ಬದಲಾಗಿ ಬಂಡವಾಳಗಾರರ, ರಿಯಲ್ ಎಸ್ಟೇಟ್‌ಗಾರರ ಜೇಬು ತುಂಬಿಸಲು ಮಾತ್ರ ಹಲವು ಪ್ರಕಟಣೆಗಳನ್ನು ಮಾಡಿದೆ.

ಮಳೆ ನೀರು ಸುಗುಮವಾಗಿ ಕಾಲುವೆ, ಒಳ ಚರಂಡಿ ಮೂಲಕ ಹೋಗುವಂತೆ ಈ ಹಿಂದಿನಿಂದಲೂ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಯಾವುದೇ ಕ್ರಮಗಳನ್ನು ವಹಿಸದೆ ನಿರ್ಲಕ್ಷ್ಯತೆ ವಹಿಸುತ್ತಿರುವ ಪರಿಣಾಮ ಬೆಂಗಳೂರಿನಲ್ಲಿ ಮಳೆ ಬಂದಾಗ ಇಂತಹ ಅನಾಹುತಗಳಿಗೆ ಕಾರಣವಾಗಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ, ಪ್ರಸ್ತುತ ಅಧಿಕಾರದಲ್ಲಿ ಇರುವ ಕಾಂಗ್ರೆಸ್ ಬೆಂಗಳೂರನ್ನು ಮಳೆಯ ಅನಾಹುತಗಳಿಂದ ಮುಕ್ತಗೊಳಿಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲು ರಾಜಕೀಯ ಇಚ್ಛಾಶಕ್ತಿ ತೋರದೆ ಪ್ರಸ್ತುತ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿವೆ.

ಮಳೆ ಅವಘಡದಿಂದ ಮೃತರಾದ ಮಹಿಳೆಗೆ ರೂ. 25 ಲಕ್ಷ ಪರಿಹಾರ ಮತ್ತು ಅವರ ಕುಟುಂಬಕ್ಕೆ ಉದ್ಯೋಗ ನೀಡಬೇಕು ಹಾಗೂ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ, ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡಬೇಕು ಹಾಗೂ ಮಳೆಯಿಂದ ಭಾದಿತವಾದ ವಸತಿ ಪ್ರದೇಶಗಳು ಮತ್ತು ನೀರಿನಿಂದ ತುಂಬಿರುವ ರಸ್ತೆಗಳ ದುರಸ್ತಿಗೆ ತುರ್ತುಕ್ರಮಗಳನ್ನು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ವಹಿಸಬೇಕೆಂದು ಸಿಪಿಐ(ಎಂ) ಒತ್ತಾಯಿಸಿದೆ.

ಮಳೆಯಿಂದ ಭಾದಿತರಾದ ಜನರೊಂದಿಗೆ ಸಿಪಿಐ(ಎಂ) ನಿಲ್ಲಲಿದೆ. ಜನರ ನೆರವಿಗೆ ಕೆಲಸ ಮಾಡಲು ತನ್ನ ಎಲ್ಲಾ ಶಾಖೆಗಳಿಗೆ ಸಿಪಿಐ(ಎಂ) ಬೆಂಗಳೂರು ಉತ್ತರ – ದಕ್ಷಿಣ ಜಿಲ್ಲಾ ಸಮಿತಿಗಳು ಕರೆ ನೀಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...