ಬೆಂಗಳೂರು | ಕಿರುತೆರೆ ನಟರು ಸೇರಿ 139 ಜನಕ್ಕೆ ನಿವೇಶನ ಕೊಡಿಸುವುದಾಗಿ ವಂಚನೆ

Date:

ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ನಿವೇಶನ ಕೊಡಿಸುವುದಾಗಿ ಹೇಳಿ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಲ್ಡರ್‌ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

- Advertisement -

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‌ನ 139 ಸದಸ್ಯರಿಗೆ ನಿವೇಶನ ಕೊಡಿಸುವುದಾಗಿ ಕಿಡಿಗೇಡಿಗಳು ವಂಚನೆ ಮಾಡಿದ್ದಾರೆ. ಈ ಕುರಿತು ಅಸೋಸಿಯೇಷನ್ ಸದಸ್ಯೆ ಭಾವನಾ ಬೆಳಗೆರೆ ಅವರು ನೀಡಿದ ದೂರಿನ ಮೇರೆಗೆ ಬಿಲ್ಡರ್ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಉಮಾಕಾಂತ್ ಎಂಬುವವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಎರಡು ಸಂವೇದನಾಶೀಲ ನಿರ್ಧಾರಕ್ಕೆ ಅಭಿನಂದನೆಗಳು

ಕೆಟಿವಿಎನಲ್ಲಿ ಸೈಟ್‌ ಕಮಿಟಿ ಸದಸ್ಯನಾಗಿದ್ದ ಸಂಜೀವ್‌ ತಗಡೂರು, ಸದಸ್ಯರಿಗೆ ನಿವೇಶನ ಕೊಡಿಸುವುದಾಗಿ ಬಿಲ್ಡರ್‌ ಜೊತೆಗೆ ವ್ಯವಹಾರ ಕುದುರಿಸಿದ್ದ. ತಾವರೆಕೆರೆ ಬಳಿ ನಿವೇಶನ ಕೊಡಿಸುವುದಾಗಿ ಹೇಳಿ ಅಸೋಸಿಯೇಷನ್‌ ಸದಸ್ಯರಿಂದ ಲಕ್ಷ ಲಕ್ಷ ಹಣ ಪಡೆದಿದ್ದ. ಆರ್.ಆರ್ ನಗರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಶುದ್ಧ ಕ್ರಯ ಸಹ ಮಾಡಿಸಲಾಗಿತ್ತು. ಆ ಬಳಿಕ ಖಾತೆ ಮಾಡಿಸಲು ಮೀನಮೇಷ ಎಣಿಸುತ್ತಿದ್ದ. ಈ ವೇಳೆ ಕೆಲ ಸದಸ್ಯರು ಖುದ್ಧಾಗಿ ಖಾತೆ ಮಾಡಿಸಲು ತೆರಳಿದಾಗ ತಾವು ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.

ಒಟ್ಟು 1.6 ಕೋಟಿ ಹಣ ವಂಚನೆ ಮಾಡಲಾಗಿದೆ ಎಂದು ಅಸೋಸಿಯೇಷನ್‌ ಸದಸ್ಯರು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...