‌ರಾಮನಗರ: ಸಾತನೂರಿನ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

Date:

ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ.

- Advertisement -

ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ನಂಜೇಶ್(45) ಎನ್ನುವರ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಸಿಕ್ಕ ಸಿಕ್ಕಲ್ಲಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರಿಂದ ತೀವ್ರ ರಕ್ತಸ್ರಾವದಿಂದ ಅಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜೇಶ್ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

ಹೊಂಗಾಣಿದೊಡ್ಡಿ ಗ್ರಾಮದ ನಿವಾಸಿಯಾಗಿದ್ದ ನಂಜೇಶ್, ಕೆಲವು ದಿನಗಳ ಹಿಂದೆಯೇ ತನ್ನ ಗ್ರಾಮದಲ್ಲಿನ ಜಮೀನಿನ ನಿವೇಶನ ವಿವಾದಕ್ಕೆ ಸಂಬಂಧಪಟ್ಟಂತೆ ಸ್ಥಳೀಯರೊಂದಿಗೆ ಮಾತಿನ ಚಕಮಕಿ ಮಾಡಿಕೊಂಡಿದ್ದರು. ಈ ಸಂಬಂಧ ಒಂದು ಸುತ್ತಿನ ಜಗಳವೂ ನಡೆದಿತ್ತು. ಈ ಹಿನ್ನೆಲೆಯೇ ಹಳೆಯ ಘಟನೆಯ ಬಗ್ಗೆ ದ್ವೇಷವನ್ನು ಸಾಧಿಸುತ್ತಿದ್ದ ವಿರೋಧಿಗಳು ಕಾಂಗ್ರೆಸ್ ಮುಖಂಡ ನಂಜೇಶ್‌ ಅವರನ್ನು ಕೊಲೆ ಮಾಡುವುದಕ್ಕೆ ಸುಪಾರಿ ಕೊಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಸಾತನೂರಿಗೆ ಬಂದ ಈ ಅಪರಿಚಿತರ ತಂಡ ಮಾರಕಾಸ್ತ್ರಗಳಿಂದ ನಂಜೇಶನ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ.

ಹಲ್ಲೆಗೊಳಗಾದ ನಂಜೇಶ್ ಅವರನ್ನು ತಕ್ಷಣವೇ ಕನಕಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...