ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ: ನಾಳೆ ಬೆಂಗಳೂರು ಚಲೋ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಗುರುವಾರ(ಫೆಬ್ರವರಿ 19) ‘ಬೆಂಗಳೂರು ಚಲೋ’ಗೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ(KSRTC) ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

- Advertisement -

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಸೂಚನೆ ನೀಡಿದ್ದು, ಕರ್ತವ್ಯಕ್ಕೆ ಗೈರಾದಲ್ಲಿ ವೇತನ ಕಡಿತ ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

ಗೈರಾಗುವ ನೌಕರರ ಪಟ್ಟಿಯನ್ನು ಘಟಕವಾರು ಸಿದ್ಧಪಡಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ‘ಕೆಲಸ ಮಾಡದಿದ್ದಾಗ ವೇತನವಿಲ್ಲ’ ಎಂಬ ತತ್ವದಡಿ ಕ್ರಮ ಜರುಗಿಸಲಾಗುತ್ತದೆ ಎಂದು ಎಂಡಿ ಸ್ಪಷ್ಟಪಡಿಸಿದ್ದಾರೆ.

ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸಲು ಮನವಿ
ಅನಧಿಕೃತವಾಗಿ ಕರ್ತವ್ಯಕ್ಕೆ ಗೈರಾಗುವ ನೌಕರರ ವಿರುದ್ಧ ಹೈಕೋರ್ಟ್ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದಾಗ್ಯೂ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರಿಗೆ ಸೇವೆ ಭಾಗಶಃ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ರಜೆ ನೀಡಬೇಡಿ: ಸಾರಿಗೆ ಅಧಿಕಾರಿಗಳಿಗೆ ಸೂಚನೆ

ಗುರುವಾರ ಬಸ್ ಸಂಚಾರದಲ್ಲಿ ವ್ಯತ್ಯಯವಾಗದಂತೆ ಕ್ರಮಕೈಗೊಳ್ಳಬೇಕೆಂದು ಸಾರಿಗೆ ಅಧಿಕಾರಿಗಳಿಗೆ ಕೆಎಸ್​ಆರ್​ಟಿಸಿ ಎಂಡಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ. ತುರ್ತು, ಅನಿವಾರ್ಯ ಸಂದರ್ಭ ಹೊರತುಪಡಿಸಿ ನೌಕರರಿಗೆ ಯಾವುದೇ ರಜೆ ನೀಡಬೇಡಿ. ಇದು ವಾರದ ರಜೆ ಅಥವಾ ದೀರ್ಘಾವಧಿ ರಜೆಯಲ್ಲಿರುವವರಿಗೆ ಅನ್ವಯಿಸುವುದಿಲ್ಲ. ಅಗತ್ಯವಿದ್ದರೆ ವಾರದ ರಜೆಯನ್ನು ರದ್ದುಪಡಿಸಿ ಕೆಲಸಕ್ಕೆ ನಿಯೋಜಿಸಬೇಕು ಎಂದು ಅಕ್ರಂ ಪಾಷಾ ನಿರ್ದೇಶನ ನೀಡಿದ್ದಾರೆ.

ಸಾರಿಗೆ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂಪಾರ್ಕ್​​ನಲ್ಲಿ ಜನವರಿ 29ರ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಪ್ರತಿಭಟನೆ ನಡೆಸಲು ಕರೆ ಕೊಡಲಾಗಿತ್ತು. ಆದರೆ, ಜನವರಿ 28ರಂದು ಕಾರ್ಮಿಕರ ಮುಖಂಡ ಅನಂತ್ ಸುಬ್ಬರಾವ್ ನಿಧನರಾದ ಹಿನ್ನೆಲೆ ಪ್ರತಿಭಟನೆಯ ಕಾವು ತಣ್ಣಗಾಗಿತ್ತು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಸ್‌, ಬೈಕ್‌ ಮುಖಾಮುಖಿ ಡಿಕ್ಕಿ; ಸವಾರ ಗಂಭೀರ ಗಾಯ

2020ರ ಜನವರಿ 1ರಿಂದ 2023ರ ಫಬ್ರವರಿ 28ರವರೆ ಒಟ್ಟು 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ 2024ರ ಜನವರಿ 01ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಮುಷ್ಕರ ನಡೆಸಿದ್ದಾಗ ಮನವೊಲಿಸಿದ್ದ ಸರ್ಕಾರ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ, ನಂತರ ಕ್ರಮ ಕೈಗೊಂಡಿರಲಿಲ್ಲ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಟೆಕ್ ಸಮಿಟ್-2026; ಸ್ಟಾರ್ಟ್‌ಅಪ್‌ಗಳಿಗೆ ಸರ್ಕಾರವೇ ಮೊದಲ ಗ್ರಾಹಕ: ಸಚಿವ ಪ್ರಿಯಾಂಕ್ ಖರ್ಗೆ

ನವೋದ್ಯಮಗಳು ರೂಪಿಸುವ ನವೀನ ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳುವ ಮೂಲಕ, ದೇಶದಲ್ಲೇ ಮೊದಲ...

ಮೋದಿ ಸರ್ಕಾರದಿಂದ ಅನುದಾನ ಅನ್ಯಾಯ: ಹಕ್ಕಿಗಾಗಿ ಮತ್ತೆ ಸುಪ್ರೀಂ ಅಂಗಳಕ್ಕೆ ಕರ್ನಾಟಕ!

ರಾಜ್ಯದ ಆರ್ಥಿಕ ಹಕ್ಕುಗಳನ್ನು ಕೇಂದ್ರ ಸರ್ಕಾರವು ಕಸಿದುಕೊಳ್ಳುವ ವಿಚಾರದಲ್ಲಿ ಈ ಹಿಂದೆ...

ಡಿಜಿಟಲ್ ಅರೆಸ್ಟ್‌ಗಿಂತ ಭಯಾನಕ ‘ಎಐ ವಾಯ್ಸ್ ಕ್ಲೋನಿಂಗ್’ ವಂಚನೆ; ನಿಮ್ಮ ಆತ್ಮೀಯರ ಧ್ವನಿಯಲ್ಲೇ ಕರೆ ಬರುತ್ತದೆ ಎಚ್ಚರ!

ಸೈಬರ್ ವಂಚಕರು ಜನರನ್ನು ವಂಚಿಸಲು ದಿನಕ್ಕೊಂದು ಹೊಸ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. ಇತ್ತೀಚಿನ...