ಕರ್ನಾಟಕದಲ್ಲಿ ‘ಪಾಸ್ ವಿಥೌಟ್ ಹಿಂದಿ’ ಕಾನೂನಿಗೆ ಆಗ್ರಹ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಡೆಗೆ ಎಚ್ಚರಿಕೆ

Date:

ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ‘ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಸಮಿತಿ’ಯ ಪದಾಧಿಕಾರಿಗಳು ಪಾಸ್ ವಿಥೌಟ್ ಹಿಂದಿ ಕಾನೂನು ತರಬೇಕು. ಇಲ್ಲದಿದ್ದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸದಂತೆ ತಡೆಯಲಾಗುವುದು ಎಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ನಿರ್ದೇಶಕರಿಗೆ ಎಚ್ಚರಿಕೆಯ ಪತ್ರ ಸಲ್ಲಿಸಿದರು.
​
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ದ್ರಾವಿಡ ಕನ್ನಡಿಗರು ಚಳುವಳಿಯ ಅಭಿ ಒಕ್ಕಲಿಗ, “ಬಿಹಾರ ರಾಜ್ಯದಲ್ಲಿ ‘ಪಾಸ್ ವಿಥೌಟ್ ಇಂಗ್ಲಿಷ್’ (PWE) ಕಾನೂನು ಜಾರಿಯಲ್ಲಿರುವಂತೆ, ಕರ್ನಾಟಕದಲ್ಲೂ ಈ ಕೂಡಲೇ ‘ಪಾಸ್ ವಿಥೌಟ್ ಹಿಂದಿ'(PWH) ಕಾನೂನು ಜಾರಿಗೆ ಬರಬೇಕು. ಈ ಕುರಿತು ಮಂಡಳಿಯು ಒಂದು ವಾರದೊಳಗೆ ಲಿಖಿತ ಉತ್ತರ ನೀಡಬೇಕು” ಎಂದು ಗಡುವು ನೀಡಿದರು.
​
“ಒಂದು ವೇಳೆ ಸರ್ಕಾರ ಈ ಬೇಡಿಕೆಗೆ ಸ್ಪಂದಿಸದಿದ್ದರೆ, ಬರುವ 2026ರ ಮಾರ್ಚ್ 30ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಯನ್ನು ರಾಜ್ಯಾದ್ಯಂತ ತಡೆಯಲಾಗುವುದು. ಪರೀಕ್ಷಾ ಕೊಠಡಿಗಳಿಗೆ ನುಗ್ಗಿ ಪ್ರಶ್ನೆ ಪತ್ರಿಕೆಗಳನ್ನು ಹರಿದು ಹಾಕುವ ಮೂಲಕ ತೀವ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದ್ದಾರೆ.
​
ಕರ್ನಾಟಕ ಕದಂಬ ಪಡೆಯ ಚೇತನ್ ಮಾತನಾಡಿ, “ಎರಡು ನುಡಿ ನೀತಿಯನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರು ವರ್ಷ ಕಳೆದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಪರೀಕ್ಷಾ ಸಮಯದಲ್ಲಿ ಉಂಟಾಗಬಹುದಾದ ಯಾವುದೇ ಅಹಿತಕರ ಘಟನೆಗಳಿಗೆ ನೇರವಾಗಿ ಮುಖ್ಯಮಂತ್ರಿಗಳೇ ಹೊಣೆಯಾಗುತ್ತಾರೆ” ಎಂದು ಕಿಡಿಕಾರಿದರು.

- Advertisement -

ಈ ಸುದ್ದಿ ಓದಿದ್ದೀರಾ? ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ: ನಾಳೆ ಬೆಂಗಳೂರು ಚಲೋ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

​ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡದ ಉಳಿವಿಗೆ ಹಿಂದಿ ಹೇರಿಕೆ ಮಾರಕವಾಗಿದ್ದು, ಕನ್ನಡಿಗರ ಹಿತದೃಷ್ಟಿಯಿಂದ ಈ ಕೂಡಲೇ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರಬೇಕೆಂದು ಸಮಿತಿ ಒತ್ತಾಯಿಸಿದೆ.

​ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪ್ರಕಾಶ್ ಹೆಬ್ಬಳ್ಳಿ, ನಾಗೇಶ್ ಅರಳಕುಪ್ಪೆ, ಮಂಜು ಗಣಪತಿಪುರ, ರಘುನಂದನ್, ಸಚಿನ್ ಸೇರಿದಂತೆ ಹಲವು ಮುಖಂಡರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...