200ಕ್ಕೂ ಹೆಚ್ಚು ಅಕ್ರಮ ವಲಸಿಗರ ಗಡಿಪಾರು : ಗೃಹ ಸಚಿವ ಡಾ. ಜಿ ಪರಮೇಶ್ವರ್‌

Date:

ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ಅವರು ಹೇಳಿದರು‌.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕು ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾಡು ಮಾಡಲಾಗಿದೆ. ಎಫ್‌ಆರ್‌ಆರ್‌ಒ ಅಧಿಕಾರಿಗಳು ಅಕ್ರಮ ವಲಸಿಗರನ್ನು ಗುರುತಿಸಿ ನಮಗೆ ಮಾಹಿತಿ ನೀಡುತ್ತಾರೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಒಂದು ದಿನ ಮಾಡಿ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂದು ಯಾರೋ ಹೇಳುತ್ತಾರೆ. ಅದನ್ನು ಪರಿಶೀಲಿಸಿ, ಅಂಥವರು ಕಂಡುಬಂದರೆ ಕಸ್ಟಡಿಗೆ ತೆಗೆದುಕೊಂಡು ಗಡಿಪಾರು ಮಾಡುತ್ತೇವೆ ಎಂದರು.

ಅಕ್ರಮ ನುಸುಳುಕೋರರ ಬಗ್ಗೆ ಮೃದು ಧೋರಣೆ ತೋರಲು ಏನು ಉಪಯೋಗ ಇದೆ. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಮತ ಹಾಕಿಸಿಕೊಳ್ಳುವಂತಹ ಪರಿಸ್ಥಿತಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಳೆದ ವಾರ ನನ್ನನ್ನು ಭೇಟಿಗೆ ಕರೆದಿದ್ದರು. ಅವರು ಕರೆದಾಗ ನಾನು ಊರಲ್ಲಿ ಇದ್ದ ಕಾರಣ ಭೇಟಿ ಆಗಲು ಸಾಧ್ಯವಾಗಿರಲಿಲ್ಲ. ಮತ್ತೆ ಕರೆದರೆ ಭೇಟಿಯಾಗುತ್ತೇನೆ ಎಂದರು.

ರಂಭಾಪುರಿ ಶ್ರೀಗಳ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಸೋಲುದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿನ ಕೊಲೆಯತ್ನ ಪ್ರಕರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆರೋಪಿತರು ಬಂಧನವಾಗಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ಕೊಟ್ಟಿಲ್ಲ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಿಂದ ಪ್ರೆರೇಪಿತರಾಗುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಆ ರೀತಿಯಾಗಿ ಸಮಾಜದಲ್ಲಿ ಯುವಕರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆಯೇ ಎಂಬುದರ ಕುರಿತು ಮನಶಾಸ್ತ್ರಜ್ಞರು ಅಧ್ಯಯನ ನಡೆಸಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...